'ಶಕ್ತಿ' ಗೆ ಮಾರ್ಗಸೂಚಿ ಪ್ರಕಟ; ಉಚಿತ ಪ್ರಯಾಣಕ್ಕೆ ಸ್ಮಾರ್ಟ್ ಕಾರ್ಡ್

Source: Vb | By I.G. Bhatkali | Published on 6th June 2023, 7:23 AM | State News |

ಬೆಂಗಳೂರು: ರಾಜ್ಯದ ಎಲ್ಲ ಮಹಿಳಾ ಪ್ರಯಾಣಿಕರಿಗೆ ಕೆಎಸ್ಸಾರ್ಟಿಸಿ, ಬಿಎಂಟಿಸಿ ಸೇರಿದಂತೆ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಬಸ್‌ಗಳಲ್ಲಿ ಉಚಿತ ಪ್ರಯಾಣಸೌಲಭ್ಯ ಕಲ್ಪಿಸುವ 'ಶಕ್ತಿ' ಯೋಜನೆ ಜಾರಿಗೊಳಿಸಲು ರಾಜ್ಯ ಸರಕಾರ ಸೋಮವಾರ ಮಾರ್ಗಸೂಚಿಯನ್ನು ಪ್ರಕಟಿಸಿದೆ.

'ಶಕ್ತಿ' ಯೋಜನೆಯಡಿ ವಿದ್ಯಾರ್ಥಿನಿ ಯರು ಸೇರಿದಂತೆ ರಾಜ್ಯದ ಎಲ್ಲ ಮಹಿಳೆಯರು ಮತ್ತು ಲಿಂಗತ್ವ ಅಲ್ಪಸಂಖ್ಯಾತರು ನಗರ, ಸಾಮಾನ್ಯ ಮತ್ತು ವೇಗದೂತ ಸಾರಿಗೆಗಳಲ್ಲಿ(ಎಸಿ ಮತ್ತು ಐಷಾರಾಮಿ ಬಸ್‌ಗಳನ್ನು ಹೊರತುಪಡಿಸಿ) ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ ರಾಜ್ಯದೊಳಗಿನ ಪ್ರಯಾಣಕ್ಕೆ ಮಾತ್ರ ಈ ಯೋಜನೆ ಅನ್ವಯಿಸಲಿದೆ.

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಬಸ್‌ಗಳನ್ನು ಹೊರತುಪಡಿಸಿ, ಉಳಿದ ರಸ್ತೆ ಸಾರಿಗೆ ಸಂಸ್ಥೆಗಳಾದ ಕೆಎಸ್ಸಾರ್ಟಿಸಿ, ವಾಯವ್ಯ ಮತ್ತು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಗಳ ಎಲ್ಲ ಬಸ್‌ಗಳಲ್ಲಿ (ಎಸಿ, ಐಷಾರಾಮಿ ಬಸ್ ಹೊರತುಪಡಿಸಿ) ಶೇ.50ರಷ್ಟು ಆಸನಗಳನ್ನು ಪುರುಷರಿಗೆ ಕಾಯ್ದಿರಿಸತಕ್ಕದ್ದು.

ಈ ಯೋಜನೆಯಡಿ ನಾಲ್ಕು ಸಾರಿಗೆ ಸಂಸ್ಥೆಗಳಿಗೆ ತಗಲುವ ವೆಚ್ಚವನ್ನು ಸರಕಾರದಿಂದ ಶೂನ್ಯ ಟಿಕೆಟ್ / ಶಕ್ತಿ ಸ್ಮಾರ್ಟ್ ಕಾರ್ಡ್ ದತ್ತಾಂಶವನ್ನು ಆಧರಿಸಿ ಭರಿಸಲಾಗುವುದು. ಸೇವಾ ಸಿಂಧು ಮೂಲಕ ಅರ್ಜಿಗಳನ್ನು ಪಡೆದು ಸ್ಟಾರ್ಟ್ ಕಾರ್ಡ್ ಗಳನ್ನು ವಿತರಿಸುವ ಪ್ರಕ್ರಿಯೆಯನ್ನು ಶಕ್ತಿ ಮುಂದಿನ ಮೂರು ತಿಂಗಳೊಳಗಾಗಿ ಪೂರ್ಣಗೊಳಿಸತಕ್ಕದ್ದು.

ಶಕ್ತಿ ಸ್ಮಾರ್ಟ್ ಕಾರ್ಡನ್ನು ವಿತರಿಸುವವರಿಗೆ ಕೇಂದ್ರ ಹಾಗೂ ರಾಜ್ಯ ಸರಕಾರದ ಇಲಾಖೆ, ಸರಕಾರಿ ಸ್ವಾಮ್ಯದ ಕಚೇರಿಗಳಿಂದ ವಿತರಿಸಿದ ಭಾವಚಿತ್ರ ಹಾಗೂ ವಾಸದ ವಿಳಾಸವಿರುವ ಗುರುತಿನ ಚೀಟಿಗಳನ್ನು ಶೂನ್ಯ ಟಿಕೆಟ್ ವಿತರಿಸುವ ಸಂದರ್ಭದಲ್ಲಿ ಪರಿಗಣಿಸತಕ್ಕದ್ದು ಎಂದು ಸಾರಿಗೆ ಇಲಾಖೆ ಸರಕಾರದ ಅಧಿನ ಕಾರ್ಯದರ್ಶಿ ಪುಷ್ಪಾ ವಿ.ಎಸ್. ಆದೇಶ ಹೊರಡಿಸಿದ್ದಾರೆ.

Read These Next

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...