ಪ್ರಾಥಮಿಕ ಕೃಷಿ ಪತ್ತಿನ ಸೇವಾ ಸಹಕಾರ ಸಂಘದ ಅಧ್ಯಕ್ಷರಾಗಿ ಶಂಕರ್‌ ಪ್ರಸಾದ್

Source: sonews | By Staff Correspondent | Published on 25th November 2020, 10:55 PM | State News |

ಶ್ರೀನಿವಾಸಪುರ : ತಾಲ್ಲೂಕಿನ ಗೌನಿಪಲ್ಲಿ ಗ್ರಾಮದ ದೊಡ್ಡ ಪ್ರಮಾಣದ ಪ್ರಾಥಮಿಕ ಕೃಷಿ ಪತ್ತಿನ ಸೇವಾ ಸಹಕಾರ ಸಂಘದ ಅಧ್ಯಕ್ಷರಾಗಿ ಶಂಕರ್‌ ಪ್ರಸಾದ್‌, ಉಪಾಧ್ಯಕ್ಷೆಯಾಗಿ ನಾಸಿರಾ ವೈ.ರಿಯಾಜ್‌ ಪಾಷ ಬುಧವಾರ ಅವಿರೋಧ ಆಯ್ಕೆಯಾದರು.

ಆಯ್ಕೆ ಬಳಿಕ ಸಂಘದ ಅಧ್ಯಕ್ಷ ಶಂಕರ್‌ ಪ್ರಸಾದ್‌ ಮಾತನಾಡಿ, ‘ಸಹಕಾರ ಸಂಘ, ಹಾಗೂ ಫಲಾನುಭವಿಗಳ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ. ಬಡ್ಡಿರಹಿತ ಸಾಲ ವ್ಯವಸ್ಥೆಯನ್ನು ಮುಂದುವರಿಸಿಕೊಂಡು ಹೋಗುತ್ತೇನೆ. ಸಹಕಾರ ಸಂಘದ ವ್ಯಾಪ್ತಿಗೆ ಬರುವ ಎಲ್ಲ ಗ್ರಾಮಗಳ ಫಲಾನುಭವಿಗಳಿಗೆ ಆರ್ಥಿಕ ಚೈತನ್ಯ ನೀಡಲು ಪ್ರಯತ್ನಿಸುತ್ತೇನೆ’ ಎಂದು ಹೇಳಿದರು.

ಈ ಸಂದರ್ಭದಲ್ಲಿ ಕಾಂಗ್ರೆಸ್‌ ಕಾರ್ಯಕರ್ತರು ಗ್ರಾಮದ ಮುಖ್ಯ ರಸ್ತೆಗಳಲ್ಲಿ ವಿಜಯೋತ್ಸವ ನಡೆಸಿ ಸಂಭ್ರಮಿಸಿದರು.

ಮುಖಂಡರಾದ ವೈ.ಎಂ.ಅಮೀರ್‌ ಖಾನ್‌, ಎಂ.ರಾಮಕೃಷ್ಣೇಗೌಡ, ಜಿ.ವಿ.ರಘುನಾಥರಾವ್‌, ಕೆ.ಟಿ.ಅಪ್ಪಿರೆಡ್ಡಿ, ಜಾಮಕಾಯಿಲು ವೆಂಕಟೇಶ್‌, ಪಿ.ಟಿ.ಶಂಕರ್‌, ಚಂದ್ರಮೌಳಿ, ಎಂ.ಆರ್‌.ಆನಂದ್‌, ಟಿ.ಜಿ.ರಮೇಶ್‌, ಷಬ್ಬೀರ್‌ ಖಾನ್, ಅಜ್‌ಮಲ್‌ ಕಾನ್‌, ರಿಯಾಜ್‌ ಖಾನ್‌, ಫಿರೋಜ್‌ ಖಾನ್‌, ಸಿ.ವಿ.ವೆಂಕಟರವಣ, ವಿಶ್ವನಾಥ್‌, ಮಧು ಇದ್ದರು.

ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ

Read These Next

ದಕ್ಷಿಣಕನ್ನಡ ಜಿಲ್ಲೆ ಕೋಮು ಸೌಹಾರ್ಧತೆ ಕಾಪಾಡಿಕೊಂಡರೆ ರಾಜ್ಯಕ್ಕೆ ಮಾದರಿಯಾಗಲಿದೆ: ಅಬ್ದುಲ್ ಅಝೀಮ್

ಮಂಗಳೂರು : ವಕ್ಫ್ ಭೂಮಿ ಅಕ್ರಮ ಪ್ರಕರಣಗಳ ಬಗ್ಗೆ ಮುಂದಿನ ಸದನದ ಅಧಿವೇಶನದಲ್ಲಿ ಚರ್ಚೆಯಾಗಲಿದೆ. ಈ ಬಗ್ಗೆ ವರದಿ ಸರಕಾರಕ್ಕೆ ...

ಹು-ಧಾ ಬೈಪಾಸ್ ರಸ್ತೆಯಲ್ಲಿ ಸಂಚಾರಿ ನಿಯಮಗಳ ಪಾಲನೆಗೆ ಕಟ್ಟುನಿಟ್ಟಿನ ಕ್ರಮ. ರಸ್ತೆ ಅಪಘಾತಗಳನ್ನು ತಪ್ಪಿಸಲು ಇಲಾಖೆಗಳು ಸಮನ್ವಯತೆಯಿಂದ ಕಾರ್ಯಮಾಡಬೇಕು - ಜಿಲ್ಲಾಧಿಕಾರಿ ನಿತೇಶ ಪಾಟೀಲ

ಹು-ಧಾ ಬೈಪಾಸ್ ರಸ್ತೆಯಲ್ಲಿ ಸಂಚಾರಿ ನಿಯಮಗಳ ಪಾಲನೆಗೆ ಕಟ್ಟುನಿಟ್ಟಿನ ಕ್ರಮ. ರಸ್ತೆ ಅಪಘಾತಗಳನ್ನು ತಪ್ಪಿಸಲು ಇಲಾಖೆಗಳು ...

ಚೆನ್ನಮ್ಮ ವೃತ್ತ ಫ್ಲೈ ಓವರ್ ನಿರ್ಮಾಣಕ್ಕೆ ಶಂಕುಸ್ಥಾಪನೆ. ಉತ್ತರ ಕರ್ನಾಟಕ ಭಾಗದ ರಾಷ್ಟೀಯ ಹೆದ್ದಾರಿಗಳ ಅಭಿವೃದ್ಧಿಗೆ 21 ಸಾವಿರ ಕೋಟಿ ಬಿಡುಗಡೆ : ಕೇಂದ್ರ ಸಚಿವ ನಿತಿನ್ ಗಡ್ಕರಿ

ಹುಬ್ಬಳ್ಳಿ : ಕೇಂದ್ರ ಸರ್ಕಾರದಿಂದ ಉತ್ತರ ಕರ್ನಾಟಕ ಭಾಗದ ರಾಷ್ಟ್ರೀಯ ಹೆದ್ದಾರಿಗಳ ಅಭಿವೃದ್ಧಿಗೆ 21 ಸಾವಿರ ಕೋಟಿ ರೂಪಾಯಿಗಳನ್ನು ...

ಹುಬ್ಬಳ್ಳಿ ಕಿಮ್ಸ್ ನಲ್ಲಿ ಕೋವಿಡ್ ಲಸಿಕಾಕರಣಕ್ಕೆ ಚಾಲನೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ ವಿಡಿಯೋ ಸಂವಾದ

ಹುಬ್ಬಳ್ಳಿ :‌ ಕೋವಿಡ್ ತಡೆಯಲು ಇಂದಿನಿಂದ ದೇಶದಾದ್ಯಂತ ಪ್ರಾರಂಭವಾದ ಕೋವಿಶೀಲ್ಡ್ ಲಸಿಕಾಕರಣ ಕಾರ್ಯಕ್ರಮಕ್ಕೆ ಉತ್ತರ ಕರ್ನಾಟಕದ ...