ಕೇಂದ್ರ ಸಚಿವನಿಂದ ಶರದ್‌ ಪವಾರ್‌ಗೆ ಬೆದರಿಕೆ; ಶಿವಸೇನೆ ಸಂಸದ ಸಂಜಯ್ ರಾವುತ್ ಆರೋಪ

Source: Vb | By I.G. Bhatkali | Published on 25th June 2022, 2:30 PM | National News |

ಮುಂಬೈ: ಮಹಾರಾಷ್ಟ್ರದಲ್ಲಿ ರಾಜಕೀಯ ಬಿನ ನಡುವೆ ಕೇಂದ್ರ ಸರಕಾರದ ಸಚಿವರೊಬ್ಬರು ಎನ್‌ಸಿಪಿ ವರಿಷ್ಠ ಶರದ್ ಪವಾರ್ ಅವರಿಗೆ ಬೆದರಿಕೆ ಒಡ್ಡುತ್ತಿದ್ದಾರೆ ಎಂದು ಶಿವಸೇನೆಯ ಸಂಸದ ಸಂಜಯ್‌ ರಾವುತ್ ಶುಕ್ರವಾರ ಆರೋಪಿಸಿದ್ದಾರೆ.

ಇಂತಹ ಬೆದರಿಕೆಗಳಿಗೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಬೆಂಬಲ ಇದೆಯೇ ಎಂದು ಅವರು ಪ್ರಶ್ನಿಸಿದ್ದಾರೆ. “ಮಹಾ ವಿಕಾಸ್ ಅಘಾಡಿ ಸರಕಾರವನ್ನು ರಕ್ಷಿಸಲು ಪ್ರಯತ್ನಿಸಿದರೆ, ಶರದ್ ಪವಾರ್‌ ಅವರಿಗೆ ದಾರಿಯಲ್ಲಿ ತಡೆ ಒಡ್ಡಲಾಗುವುದು ಹಾಗೂ ಅವರಿಗೆ ಮನೆಗೆ ತೆರಳದಂತೆ ನಿರ್ಬಂಧಿಸಲಾಗುವುದೆಂದು ಕೇಂದ್ರ ಸಚಿವರೊಬ್ಬರು ಒತ್ತಡ ಹೇರಿದ್ದಾರೆ'' ಎಂದು ರಾವುತ್‌ ಟೈಟರ್‌ನಲ್ಲಿ ಹೇಳಿದ್ದಾರೆ.

ಮಹಾ ವಿಕಾಸ್ ಅಘಾಡಿ ಸರಕಾರ ಇರಲಿ, ಇಲ್ಲದೇ ಇರಲಿ, ಎನ್‌ಸಿಪಿಯ ಅಧ್ಯಕ್ಷರ ಕುರಿತು ಇಂತಹ ಭಾಷೆ ಬಳಸುವುದನ್ನು ಮಹಾರಾಷ್ಟ್ರದ ಪ್ರಜೆಗಳು ಸಹಿಸಲಾರರು ಎಂದು ರಾವುತ್ ತಿಳಿಸಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಬಿಜೆಪಿ ನಾಯಕ ಹಾಗೂ ಕೇಂದ್ರದ ಸಹಾಯಕ ಸಚಿವ ರಾವ್‌ ಸಾಹೇಬ್ ಪಾಟೀಲ್ ದಾನ್ದ, ಕೇಂದ್ರ ಸರಕಾರದ ಸಚಿವರು ಇಂತಹ ಯಾವುದೇ ಬೆದರಿಕೆ ಒಡ್ಡಿಲ್ಲ. ಮಹಾ ಅಘಾಡಿ ಸರಕಾರವನ್ನು ಅಸ್ತಿರಗೊಳಿಸಲು ಬಿಜೆಪಿ ಪ್ರಯತ್ನಿಸುತ್ತಿಲ್ಲ. ಅದು ಶಿವಸೇನೆಯ ಆಂತರಿಕ ವಿಚಾರ, ಬಿಜೆಪಿ ಕಾದು ನೋಡುವ ಸ್ಥಾನದಲ್ಲಿದೆ ಎಂದಿದ್ದಾರೆ.

ಶಿವಸೇನೆ ನಾಯಕ ಏಕನಾಥ್ ಶಿಂದೆ ಹಲವು ಶಾಸಕರೊಂದಿಗೆ ಸೂರತ್‌ಗೆ ತೆರಳಿದ ಬಳಿಕ ಕಳೆದ ವಾರ ಮಹಾರಾಷ್ಟ್ರದ ಮಹಾ ವಿಕಾಸ್ ಅಘಾಡಿ ಸರಕಾರ ಬಿಕ್ಕಟ್ಟಿಗೆ ಸಿಲುಕಿತು. ಬಂಡಾಯ ಶಾಸಕರು ಪ್ರಸ್ತುತ ಗುವಾಹಟಿಯ ಹೊಟೇಲೊಂದರಲ್ಲಿ ತಂಗಿದ್ದಾರೆ. ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ ಎನ್‌ಸಿಪಿ ಹಾಗೂ ಕಾಂಗ್ರೆಸ್ ನೊಂದಿಗಿನ ಮೈತ್ರಿಯನ್ನು ಮುರಿದುಕೊಳ್ಳಬೇಕು ಎಂದು ಅವರು ಆಗ್ರಹಿಸಿದ್ದಾರೆ.

Read These Next

ಅಣಕು ಮತದಾನದ ವೇಳೆ ಬಿಜೆಪಿಗೆ ಮತ

ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದವೇಳೆ ಇವಿಎಂಗಳು ತಪ್ಪಾಗಿ ಬಿಜೆಪಿ ಪರವಾಗಿ ಮತಗಳನ್ನು ದಾಖಲಿಸಿವೆ ಎಂದು ಅರ್ಜಿದಾರರೊಬ್ಬರು ...

ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯವಿರಬೇಕು; ಆಯೋಗಕ್ಕೆ ಹೇಳಿದ ಸುಪ್ರೀಂ ಕೋರ್ಟ್

ಚುನಾವಣಾ ಪ್ರಕ್ರಿಯೆ ಯಲ್ಲಿ ಪಾವಿತ್ರ್ಯವಿರಬೇಕು ಎಂದು ಚುನಾವಣಾ ಆಯೋಗಕ್ಕೆ ಇಂದು ಸುಪ್ರೀಂ ಕೋರ್ಟ್ ಹೇಳಿದೆಯಲ್ಲದೆ ಸ್ವತಂತ್ರ ...

'ಚುನಾವಣಾ ಬಾಂಡ್' ವಿಶ್ವದ ದೊಡ್ಡ ಹಗರಣ; ಬಿಜೆಪಿ ವಿರುದ್ಧ ರಾಹುಲ್‌ ಗಾಂಧಿ ವಾಗ್ದಾಳಿ

ಬಿಜೆಪಿಯ ಚುನಾ ವಣಾ ಬಾಂಡ್ ವಿಶ್ವದ ಅತ್ಯಂತ ದೊಡ್ಡ ಹಗರಣವಾಗಿದ್ದು, ಗೂಂಡಾಗಳ ರೀತಿಯಲ್ಲಿ ಕೆಲವು ಉದ್ಯಮಿಗಳನ್ನು ಬೆದರಿಸಿ ಹಫ್ತಾ ...

ಗುಂಪಿನಿಂದ ಹತ್ಯೆ, ಗೋರಕ್ಷಣೆ ಹೆಸರಿನಲ್ಲಿ ಹಿಂಸಾಚಾರ ತಡೆಯಲು ಕೈಗೊಂಡ ಕ್ರಮಗಳ ಬಗ್ಗೆ ತಿಳಿಸಿ; ರಾಜ್ಯಗಳಿಗೆ ಸುಪ್ರೀಂ ಸೂಚನೆ

ಗುಂಪಿನಿಂದ ಥಳಿಸಿ ಹತ್ಯೆ ಮತ್ತು ಗೋರಕ್ಷಣೆಯ ಹೆಸರಿನಲ್ಲಿ ಹಿಂಸಾಚಾರದ ಘಟನೆಗಳನ್ನು ತಡೆಯಲು ಕೈಗೊಂಡಿರುವ ಕ್ರಮಗಳ ಬಗ್ಗೆ ಆರು ...