ಪದವಿ ಪೂರ್ವ ಶಿಕ್ಷಣ ಇಲಾಖೆಯಿಂದ ಜಿಲ್ಲೆಯಲ್ಲಿ ಸುಸೂತ್ರವಾಗಿ ಜರುಗಿದ ಪಿಯು ಇಂಗ್ಲೀಷ್ ಪರೀಕ್ಷೆ

Source: S.O. News Service | By MV Bhatkal | Published on 18th June 2020, 8:01 PM | State News | Don't Miss |

ಧಾರವಾಡ: ಪದವಿ ಪೂರ್ವ ಶಿಕ್ಷಣ ಇಲಾಖೆಯಿಂದ ಇಂದು ಜಿಲ್ಲೆಯ ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ ಪಿಯು ದ್ವಿತೀಯ ವರ್ಷದ ಆಂಗ್ಲ ಭಾಷಾ ಪರೀಕ್ಷೆಯು ಯಾವುದೇ ಗೊಂದಲ ಮತ್ತು ತೊಂದರೆ ಇಲ್ಲದೇ ಸುಸೂತ್ರವಾಗಿ ಜರುಗಿತು.
ಪಿಯುಸಿ ದ್ವಿತೀಯ ವರ್ಷದ ಇಂಗ್ಲೀಷ್ ಪರೀಕ್ಷೆಗಾಗಿ ಹುಬ್ಬಳ್ಳಿಯಲ್ಲಿ 16, ಧಾರವಾಡದಲ್ಲಿ 17, ಕಲಘಟಗಿ ಮತ್ತು ನವಲಗುಂದದಲ್ಲಿ ತಲಾ 2 ಮತ್ತು ಕುಂದಗೋಳದಲ್ಲಿ 1 ಪರೀಕ್ಷಾ ಕೇಂದ್ರ ಸ್ಥಾಪಿಸಲಾಗಿತ್ತು. ಜಿಲ್ಲೆಯಲ್ಲಿ 20198 ವಿದ್ಯಾರ್ಥಿಗಳು ಪರೀಕ್ಷೆಗೆ ಅರ್ಹತೆ ಪಡೆದು ಪ್ರವೇಶ ಪತ್ರಗಳನ್ನು ಪಡೆದಿದ್ದರು. ಅವರಲ್ಲಿ 19281 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. 917 ಜನ ಗೈರಾಗಿದ್ದರು. ವಾ.ಕ.ರ.ಸಾ.ಸಂ ನಿಂದ ಉಚಿತವಾಗಿ ವಿದ್ಯಾರ್ಥಿಗಳ ಸಂಚಾರಕ್ಕಾಗಿ 300 ಬಸ್‍ಗಳನ್ನು ಒದಗಿಸಲಾಗಿತ್ತು. ಇದರಿಂದ ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಯಾವುದೇ ಗೊಂದಲ ಒತ್ತಡಗಳಿಲ್ಲದೆ ನಿರಾಳವಾಗಿ ಪರೀಕ್ಷೆ ಬರೆದರು.  ಪ್ರತಿ ಪರೀಕ್ಷಾ ಕೇಂದ್ರದ ವಿದ್ಯಾರ್ಥಿಗಳು ಮತ್ತು ಕರ್ತವ್ಯ ನಿರತ ಸಿಬ್ಬಂದಿಗಳಿಗೆ ಅಗತ್ಯವಿರುವಷ್ಟು ಸಂಖ್ಯೆಯಲ್ಲಿ ಮಾಸ್ಕ್, ಸ್ಯಾನಿಟೈಸರ್ ಪೂರೈಸಲಾಗಿತ್ತು. ಸಾಮಾಜಿಕ ಅಂತರದೊಂದಿಗೆ ಪರೀಕ್ಷೆಗೆ ಆಸನ ವ್ಯವಸ್ಥೆ ಕಲ್ಪಿಸಲಾಗಿತ್ತು. ಎಲ್ಲ ವಿದ್ಯಾರ್ಥಿಗಳಿಗೆ ಥರ್ಮಲ್ ಸ್ಕ್ಯಾನಿಂಗ್ ಮಾಡಿ ಆರೋಗ್ಯದ ಸ್ಥಿತಿ ದಾಖಲಿಸಿಕೊಳ್ಳಲಾಯಿತು. 
ಜಿಲ್ಲೆಯ ಎಲ್ಲ ಕೇಂದ್ರಗಳಲ್ಲಿ ನಿಗದಿತ ಸಮಯಕ್ಕೆ ಪರೀಕ್ಷೆಗಳು ಪ್ರಾರಂಭವಾಗಿ ಯಾವುದೇ ಗೊಂದಲಗಳಿಲ್ಲದೆ ನಿಗದಿತ ಅವಧಿಯೊಳಗೆ ಮುಕ್ತಾಯವಾದವು. ಪರೀಕ್ಷೆಗಳನ್ನು ಯಶಸ್ವಿಯಾಗಿ ನಿರ್ವಹಿಸಲಾಯಿತು ಎಂದು ಪದವಿ ಪೂವ ಶಿಕ್ಷಣ ಇಲಾಖೆಯ ಉಪನಿರ್ದೇಶಕಿ ಶಾರದಾ ಕಿರೇಸೂರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

 

Read These Next

'ಚುನಾವಣಾ ಬಾಂಡ್' ವಿಶ್ವದ ದೊಡ್ಡ ಹಗರಣ; ಬಿಜೆಪಿ ವಿರುದ್ಧ ರಾಹುಲ್‌ ಗಾಂಧಿ ವಾಗ್ದಾಳಿ

ಬಿಜೆಪಿಯ ಚುನಾ ವಣಾ ಬಾಂಡ್ ವಿಶ್ವದ ಅತ್ಯಂತ ದೊಡ್ಡ ಹಗರಣವಾಗಿದ್ದು, ಗೂಂಡಾಗಳ ರೀತಿಯಲ್ಲಿ ಕೆಲವು ಉದ್ಯಮಿಗಳನ್ನು ಬೆದರಿಸಿ ಹಫ್ತಾ ...

ಸಂವಿಧಾನ ಮತ್ತು  ಪ್ರಜಾಪ್ರಭುತ್ವ ಉಳಿಸುವುದಕ್ಕೆ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ಎಂದು ರಾಹುಲ್ ಗಾಂಧಿ ಕರೆ

ಮಾಲೂರು : ಈ ಲೋಕಸಭೆ ಚುನಾವಣೆಯು ಎರಡು ಸಿದ್ಧಾಂತಗಳ ನಡುವಿನ ಯುದ್ಧ ಇಂಡಿಯಾ ಬಣ ಒಂದು ಕಡೆ "ಸಂವಿಧಾನಕ್ಕಾಗಿ ಹೋರಾಟ" ನಡೆಸುತ್ತಿದೆ ...

ಉತ್ತರಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು 19 ಅಭ್ಯರ್ಥಿಗಳಿಂದ 36 ನಾಮಪತ್ರ ಸಲ್ಲಿಕೆ.

ಕಾರವಾರ :12- ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ , ನಾಮಪತ್ರಗಳ ಸಲ್ಲಿಕೆಗೆ ಕೊನೆಯ ದಿನವಾದ ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...