ಶೇಡಬರಿ ಜಟಕಾ ಮಹಾಸತಿ ದೇವಿ ಜಾತ್ರಾ ಮಹೋತ್ಸವ: ಶೇಡಿ ಮರ ಏರುವ ಭಕ್ತರು

Source: S.O. News Service | By MV Bhatkal | Published on 15th January 2021, 9:38 PM | Coastal News |


ಭಟ್ಕಳ: ಎರಡು ದಿನಗಳ ಕಾಲ ನಡೆಯಲಿರುವ ತಾಲೂಕಿನ ಹೆಬಳೆ ಶೇಡಬರಿ ಜಟಕಾ ಮಹಾಸತಿ ದೇವಿ ಜಾತ್ರೆಯು ಮಕರ ಸಂಕ್ರಾಂತಿ ದಿನದಂದು ವಿಧ್ಯುಕ್ತವಾಗಿ ಆರಂಭವಾಯಿತು.
ಜಾತ್ರೆಯ ಅಂಗವಾಗಿ ಭಕ್ತರು ಶೆಡಬರಿ ಜಟಕಾ ಮಹಾಸತಿ ದೇವಿಗೆ ಹಾಗೂ ಪರಿವಾರ ದೇವರಿಗೆ ಸಿಂಗಾರದ ಹೂವಿನ ವಿಶೇಷಪೂಜೆ, ಕಾಣಿಕೆಗಳನ್ನು ಸಲ್ಲಿಸಿದರು. ಭಕ್ತರು ಶೇಡಿ ಮರವನ್ನು ಏರುವ ಹರಕೆ ಈ ಜಾತ್ರೆಯ ವಿಶೇಷತೆಯಾಗಿದೆ.
ತಮ್ಮ ಕಷ್ಟ ಕಾಲದಲ್ಲಿ ಶೇಡಬರಿ ಮಹಾಸತಿ ದೇವಿಯ ಬಳಿ ಶೇಡಿಮರ ಏರುವುದಾಗಿ ಹರಕೆ ಮಾಡಿಕೊಂಡರೆ, ಕಷ್ಟಗಳಿಗೆ ಪರಿಹಾರ ಸಿಕ್ಕು ಸುಖ, ಸಮೃದ್ಧಿ ಲಭಿಸುತ್ತದೆ ಎಂಬ ನಂಬಿಕೆ ಭಕ್ತರಲ್ಲಿ ಇದೆ. ಆ ಹರಕೆಯನ್ನು ಜಾತ್ರೆಯ ಸಂದರ್ಭದಲ್ಲಿ ಸಲ್ಲಿಸುವುದು ಈ ಹಿಂದಿನಿಂದಲೂ ನಡೆದುಕೊಂಡು ಬಂದ ವಾಡಿಕೆ. ಆದ್ದರಿಂದ ಭಕ್ತರು ಸಾಗರೋಪಾದಿಯಲ್ಲಿ ಇಲ್ಲಿಗೆ ಆಗಮಿಸುತ್ತಾರೆ.
ಶೇಡಿಮರ ಏರುವ ಹರಕೆ ಹೊತ್ತವರು ದೇವರಿಗೆ ಪೂಜೆ ಸಲ್ಲಿಸಿ, ಶೇಡಿಮರ ಏರಿ ಮೂರು ಸುತ್ತು ತಿರುಗುತ್ತಾರೆ. ಬಳಿಕ ಅವರು ತಂದಿದ್ದ ಹೂವು, ಹಣ್ಣನ್ನು ಕೆಳಗಡೆ ನಿಂತಿರುವ ಭಕ್ತರ ಮೇಲೆ ಎಸೆಯುತ್ತಾರೆ. ಇದು ದೇವರ ಪ್ರಸಾದ ಎಂದು ಭಕ್ತರು ಭಕ್ತಿಯಿಂದ ಸ್ವೀಕರಿಸುತ್ತಾರೆ. ಈ ಹರಕೆ ದೃಶ್ಯ ನೋಡಲೆಂದೇ ಜನ ಬರುತ್ತಾರೆ.
ದೇವಸ್ಥಾನದ ಆಡಳಿತ ಮಂಡಳಿಯಿಂದ ಎರಡು ದಿನಗಳ ಕಾಲ ಭಕ್ತರಿಗೆ ಅನುಕೂಲವಾಗುವ ವ್ಯವಸ್ಥೆ ಮಾಡಲಾಗಿದೆ

Read These Next

ಉತ್ತರಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು 19 ಅಭ್ಯರ್ಥಿಗಳಿಂದ 36 ನಾಮಪತ್ರ ಸಲ್ಲಿಕೆ.

ಕಾರವಾರ :12- ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ , ನಾಮಪತ್ರಗಳ ಸಲ್ಲಿಕೆಗೆ ಕೊನೆಯ ದಿನವಾದ ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...