ಜನಸಂದಣಿ ಉಂಟಾಗದಂತೆ ಸರಳ ಬಕ್ರೀದ್ ಆಚರಣೆಗೆ ಜಿಲ್ಲಾಧಿಕಾರಿ ಸೂಚನೆ

Source: so news | Published on 30th July 2020, 3:03 PM | Coastal News | Don't Miss |

 

                                                
ಕಾರವಾರ: ಕೊರೋನಾದಂತಹ ಸಾಂಕ್ರಾಮಿಕ ರೋಗದ ಸಂದಿಗ್ದ ಪರಿಸ್ಥಿತಿಯಲ್ಲಿ ಆಚರಿಸಲಾಗುತ್ತಿರುವ ಬಕ್ರೀದ್ ಹಬ್ಬವನ್ನು ಅತ್ಯಂತ ಮುಂಜಾಗ್ರತೆಯಿಂದ ಆಚರಣೆ ಮಾಡುವ ಮೂಲಕ ಸಮಾಜದ ಆರೋಗ್ಯ ಕಾಪಾಡಬೇಕಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಹರೀಶ ಕುಮಾರ ಕೆ ಅವರು ಸೂಚನೆ ನೀಡಿದರು.
ಜಿಲ್ಲಾಧಿಕಾರಿ ಕಚೇರಿ ನ್ಯಾಯಾಲಯ ಸಭಾಂಗಣದಲ್ಲಿ ಜಿಲ್ಲೆಯ ಎಲ್ಲಾ ತಾಲೂಕುಗಳ ತಹಶೀಲ್ದಾರರು ಹಾಗೂ ಪೊಲೀಸ್ ಅಧಿಕಾರಿ ಮತ್ತು ಮುಸ್ಲಿಂ ಹಾಗೂ ಹಿಂದು ಮುಖಂಡರೊಂದಿಗೆ ಶಾಂತಿಪಾಲನಾ ಸಭೆ ನಡೆಸಿ ಮಾತನಾಡಿ, ಧಾರ್ಮಿಕ ಹಬ್ಬಗಳನ್ನು ಆಚರಿಸುವುದು ಜನರ ಹಕ್ಕು ಮತ್ತು ಅಷ್ಟೆ ಸಾಮಾಜಿಕ ಜವಾಬ್ದಾರಿಯೂ ಆಗಿರುತ್ತದೆ. ಕೋವಿಡ್-19ನಂತಹ ವಿಷಮ ಪರಿಸ್ಥಿತಿಯಲ್ಲಿ ಸಾರ್ವಜನಿಕರು ಪ್ರತಿಭಟನೆಯನ್ನು ನಡೆಸಲು ಮುಂದಾದಲ್ಲಿ ಯಾವುದೇ ಕಾರಣಕ್ಕೂ ಸಹಿಸದೇ ಕಾನೂನು ಕ್ರಮ ಕೈಗೊಳ್ಳಲಾಗುವುದು. ಧಾರ್ಮಿಕ ಹಬ್ಬವನ್ನು ಎಲ್ಲಾ ಮುನ್ನೆಚ್ಚರಿಕಾ ಕ್ರಮಗಳೊಂದಿಗೆ ಕೈಗೊಂಡು ಆಚರಿಸತಕ್ಕದ್ದು, ಆಯಾ ಮಸೀದಿಗಳಲ್ಲಿ ಗರಿಷ್ಟ 50 ಜನರು ಮೀರದಂತೆ ಸಾಮೂಹಿಕ ಪ್ರಾರ್ಥನೆ ನಿರ್ವಹಿಸಬಹುದಾಗಿರುತ್ತದೆ. ಒಂದು ವೇಳೆ ಅಧಿಕ ಜನರು ಆಗಮಿಸಿದ್ದಲ್ಲಿ 2 ಅಥವಾ 3 ಬ್ಯಾಚ್‍ನಂತೆ ಆಯಾ ಮಸೀದಿಗಳಲ್ಲಿ ನಮಾಜ್ ನಿರ್ವಹಿಸಲು ಸರ್ಕಾರ ನಿರ್ದೇಶನ ನೀಡಿದ್ದು, ಸರ್ಕಾರದ ಈ ಆದೇಶ ಪಾಲನೆ ಆಗಬೇಕೆಂದು ತಿಳಿಸಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಿವಪ್ರಕಾಶ ದೇವರಾಜು ಮಾತನಾಡಿ, ಈ ಬಾರಿ ಹಿಂದೂ ಅಥವಾ ಮುಸ್ಲಿಂ  ಧಾರ್ಮಿಕ ಹಬ್ಬಗಳನ್ನು ಮೊದಲಿನಂತೆ ಆಚರಿಸಲು ಸಾಧ್ಯವಾಗುವುದಿಲ್ಲ, ಇದಕ್ಕೆ ಜನರ ಸಹಕಾರ ಅತ್ಯಗತ್ಯ, ಧಾರ್ಮಿಕ ಮುಖಂಡರು ಜನರಲ್ಲಿ ಮುಂಚಿತವಾಗಿ ತಿಳುವಳಿಕೆ ನೀಡುವ ಮೂಲಕ ಆರೋಗ್ಯಕರ ಹಬ್ಬ ಆಚರಿಸುವಂತಾಗಬೇಕು. ರಾಜ್ಯ ವಕ್ಫ್ ಮಂಡಳಿ ಬಕ್ರೀದ್ ಹಬ್ಬವನ್ನು ಆಚರಿಸಲು ಕೆಲವು ಸಲಹೆ ಸೂಚನೆಗಳನ್ನು ನೀಡಿದ್ದು, ಅದರನ್ವಯ ಜನರು ಪ್ರಾರ್ಥನಾ ಸ್ಥಳಗಳಲ್ಲಿ ಮಾಸ್ಕ್‍ನ್ನು ಕಡ್ಡಾಯವಾಗಿ ಧರಿಸಿಕೊಳ್ಳಬೇಕು, ನಮಾಜ್ ನಿರ್ವಹಿಸುವವರ ಮಧ್ಯೆ ಕನಿಷ್ಠ 6 ಅಡಿ ಅಂತರ ಕಾಯ್ದುಕೊಳ್ಳತ್ತಕ್ಕದ್ದು, ಪ್ರಾರ್ಥನೆಗೆ ಬರುವವರು ತಮ್ಮ ತಮ್ಮ ಮನೆಗಳಿಂದಲೇ ಮ್ಯಾಟ್(ಜಾಯನಮಾಜ್) ಕಡ್ಡಾಯವಾಗಿ ತರಬೇಕು, ಮಸೀದಿಗಳಲ್ಲಿ ಪ್ರವೇಶಿಸುವ ಮೊದಲು ದೇಹದ ತಾಪಮಾನವನ್ನು ತಪಾಸಣೆ ಮಾಡಿಸಿಕೊಳ್ಳಬೇಕು. 60 ವರ್ಷ ಮೇಲ್ಪಟ್ಟ 10 ವರ್ಷದೊಳಗಿನ ಮಕ್ಕಳು ಮನೆಯಲ್ಲಿಯೇ ಪ್ರಾರ್ಥನೆ ಮಾಡುವಂತೆ ತಿಳಿಸಬೇಕು. ಅಪರಿಚಿತರು ಪ್ರಾರ್ಥನೆ ಸಲ್ಲಿಸಲು ಮಸೀದಿಗೆ ಬಂದಲ್ಲಿ ಅವರ ಬಗ್ಗೆ ವಿಶೇಷ ಗಮನ ಹರಿಸಬೇಕು. ಇದಕ್ಕಾಗಿ ಒಂದು ರೆಜಿಸ್ಟ್ರೇಷನ್ ಪುಸ್ತಕವನ್ನು ನಿರ್ವಹಿಸುವುದು ಸೂಕ್ತವಾಗಿರುತ್ತದೆ ಎಂದು ತಿಳಿಸಿದರು. 
ಈ ಸಂದರ್ಭದಲ್ಲಿ ಹಿಂದೂ ಮತ್ತು ಮುಸ್ಲಿಂ ಮುಖಂಡರು ಸೇರಿದಂತೆ ಇತರರು ಉಪಸ್ಥಿತರಿದ್ದರು.

Read These Next

ಲಾಕ್ ಡೌನ್ ಆಗಿ ನಷ್ಟ ಅನುಭವಿಸಿದ್ದೇವೆ. ಮಾನವೀಯ ನೆಲೆಯಲ್ಲಿ ಅವಕಾಶ ಮಾಡಿಕೊಡಲು ಭಟ್ಕಳ ವ್ಯಾಪಾರಸ್ಥರ ಮನವಿ.

ಭಟ್ಕಳ : ಪಟ್ಟಣದಲ್ಲಿ ಹಲವಾರು ವರ್ಷಗಳಿಂದ ವ್ಯಾಪಾರ ನಡೆಸುತ್ತಿರುವ ಅಂಗಡಿಕಾರರು‌ ಲಾಕ್ ಡೌನ್ ಅವಧಿಯಲ್ಲಿ ನಷ್ಟ ಅನುಭವಿಸಿದ್ದು, ...

ಶಿರಸಿ: ‘ರಾಜ್ಯ ಮಟ್ಟದ ಜನ ಸಂಘಟನೆಗಳ ಪರ್ಯಾಯ ಜನತಾ ಅಧಿವೇಶನ’ದಲ್ಲಿ ಶಿರಸಿ ರವೀಂದ್ರ ನಾಯ್ಕ ರಿಂದ ವಿಷಯ ಮಂಡನೆ

ಶಿರಸಿ: ರಾಜ್ಯದ ಹಲವಾರು ಜನಪರ ಸಂಘಟನೆಗಳ ಒಕ್ಕೂಟ ಆಶ್ರಯದಲ್ಲಿ ಬೆಂಗಳೂರಿನ ಪ್ರೀಡಂಪಾರ್ಕ ಆವರಣದಲ್ಲಿ ಜರಗುತ್ತಿರುವ 2 ನೇ ದಿನದ ...