ಶಿಡ್ಲಘಟ್ಟ: ಅಮೂಲ್ಯ ಸಮಯವನ್ನು ವ್ಯರ್ಥ ಮಾಡಿಕೊಳ್ಳದೆ ಶ್ರದ್ದೆಯಿಂದ ವ್ಯಾಸಾಂಗ ನಡೆಸಲು ಆಂಜಿನಪ್ಪ ಕರೆ

Source: tamim | By Arshad Koppa | Published on 14th August 2017, 8:00 AM | State News | Guest Editorial |

ಶಿಡ್ಲಘಟ್ಟ,ಆಗಸ್ಟ್13: ದೇಶದ ಭವಿಷ್ಯವಾಗಿರುವ ವಿದ್ಯಾರ್ಥಿಗಳು ಮತ್ತು ಯುವಕರು ಅಮೂಲ್ಯ ಸಮಯವನ್ನು ವ್ಯರ್ಥ ಮಾಡಿಕೊಳ್ಳದೆ ಶ್ರಧ್ಧೆಯಿಂದ ವ್ಯಾಸಂಗ ಮಾಡುವ ಮೂಲಕ ಎಲ್ಲಾ ರಂಗಳಲ್ಲಿ ಸಾಧನೆ ಮಾಡಲು ಧೃಡಸಂಕಲ್ಪ ಮಾಡಬೇಕೆಂದು ಆನೂರಿನ ಎಸ್.ಎನ್.ಕ್ರಿಯಾ ಟ್ರಸ್ಟ್‍ನ ಅಧ್ಯಕ್ಷ ಆಂಜಿನಪ್ಪ(ಪುಟ್ಟು) ಹೇಳಿದರು.
    ನಗರದ ಸಾರಿಗೆ ಬಸ್ ನಿಲ್ದಾಣದ ಬಳಿಯಿರುವ ಆನೂರಿನ ಎಸ್.ಎನ್.ಕ್ರಿಯಾ ಟ್ರಸ್ಟ್‍ನ ಕಾರ್ಯಾಲಯದಲ್ಲಿ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವಿತರಿಸಿ ಮಾತನಾಡಿದ ಅವರು ದೇಶದ ಒಟ್ಟು ಜನಸಂಖ್ಯೆಯಲ್ಲಿ ಸಿಂಹಪಾಲು ಹೊಂದಿರುವ ಯುವಕರು ಸಮಯವನ್ನು ವ್ಯರ್ಥ ಮಾಡದೆ ರಾಷ್ಟ್ರ ನಿರ್ಮಾಣದಲ್ಲಿ ಸಕ್ರೀಯವಾಗಿ ತೊಡಗಿಸಿಕೊಳ್ಳಬೇಕೆಂದು ಕಿವಿಮಾತು ಹೇಳಿ ಫೇಸ್‍ಬುಕ್-ವಾಟ್ಸಪ್‍ದಂತಹ ಸಾಮಾಜಿಕ ಜಾಲತಾಣಗಳಲ್ಲಿ ಸಮಯವನ್ನು ವ್ಯರ್ಥ ಮಾಡಬಾರದೆಂದು ಸಲಹೆ ನೀಡಿದರು.
    ಸಮಾಜದಲ್ಲಿರುವ ಪ್ರತಿಯೊಬ್ಬರು ಶೈಕ್ಷಣಿಕವಾಗಿ ಅಭಿವೃಧ್ಧಿ ಹೊಂದಲು ಟ್ರಸ್ಟ್‍ನ ಮೂಲಕ ಉತ್ತೇಜನ ನೀಡಲಾಗುತ್ತಿದೆ ಕ್ಷೇತ್ರದಲ್ಲಿ ಈಗಾಗಲೇ ಟ್ರಸ್ಟ್‍ನ ಮೂಲಕ ಅನೇಕ ರೀತಿಯ ಕಲ್ಯಾಣ ಕಾರ್ಯಕ್ರಮಗಳನ್ನು ನಡೆಸಲಾಗಿದೆ ಸಮಾಜದಲ್ಲಿರುವ ಪ್ರತಿಯೊಬ್ಬರು ಶೈಕ್ಷಣಿಕವಾಗಿ ಅಭಿವೃಧ್ಧಿ ಹೊಂದಲು ಅಗತ್ಯ ಸಾಮಾಗ್ರಿಗಳು ವಿಶೇಷವಾಗಿ ವಿದ್ಯಾರ್ಥಿಗಳಿಗೆ ಈಗಾಗಲೇ ಮೂರು ಹಂತದಲ್ಲಿ ಸುಮಾರು 1 ಸಾವಿರ ವಿದ್ಯಾರ್ಥಿಗಳಿಗೆ ಬಸ್‍ಪಾಸ್ ವಿತರಣೆ ಮಾಡುವ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಲಾಗಿದೆ ಎಂದರು.
    ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರದಲ್ಲಿ ಬಡವರ ಕಲ್ಯಾಣಕ್ಕಾಗಿ ಅನೇಕ ಯೋಜನೆಗಳನ್ನು ಜಾರಿಗೊಳಿಸಲಾಗಿದೆ ಎಲ್ಲಾ ಹೋಬಳಿ ಕೇಂದ್ರಗಳಲ್ಲಿ ಉಚಿತ ಆರೋಗ್ಯ ಶಿಬಿರಗಳನ್ನು ಆಯೋಜಿಸಿ ಚಿಕಿತ್ಸೆ-ಶಸ್ತ್ರಚಿಕಿತ್ಸೆ ಮತ್ತು ಉಚಿತ ಔಷಧಿಗಳನ್ನು ಪೂರೈಕೆ ಮಾಡಿದ್ದು ಯುವಕರಿಗೆ ಉದ್ಯೋಗ ನೀಡಲು ಕೌಶಲ್ಯಾಭಿವೃಧ್ಧಿ ತರಬೇತಿಗಳನ್ನು ನೀಡಲಾಗಿದೆ ಅಂಗವಿಕಲರು-ವಯೋವೃಧ್ಧರು ಸೇರಿದಂತೆ ಹಲವು ಮಂದಿಗೆ ಸರಕಾರದಿಂದ ಮಾಶಾಸನಗಳನ್ನು ಮಂಜೂರು ಮಾಡಿಸಿಕೊಡಲಾಗಿದೆ ಎಂದರು.
    ಈ ಸಂದರ್ಭದಲ್ಲಿ ಆನೂರಿನ ಎಸ್.ಎನ್.ಕ್ರಿಯಾ ಟ್ರಸ್ಟ್‍ನ ಕಾರ್ಯದರ್ಶಿ ವಿಶ್ವನಾಥ್, ಮುದ್ದೇಗೌಡ, ಆನೂರು ದೇವರಾಜ್,ಬೈರೇಗೌಡ, ನಟರಾಜ್,ಮುಖಂಡರಾದ ಅಫ್ಸರ್‍ಪಾಷ, ಟಿಪ್ಪುಸೆಕ್ಯೂಲರ್ ಸೇನೆಯ ತಾಲೂಕು ಅಧ್ಯಕ್ಷ ಮೌಲಾ, ತಲಕಾಯಲಬೆಟ್ಟ ಗ್ರಾಮ ಪಂಚಾಯಿತಿ ಸದಸ್ಯ ಅಶ್ವತ್ಥನಾರಾಯಣ,ನವೀನ್ ಮತ್ತಿತರರು ಉಪಸ್ಥಿತರಿದ್ದರು.

Read These Next

ರಾಜ್ಯದಲ್ಲಿ ಶೇ.69.23 ಮತದಾನ; ಮಂಡ್ಯದಲ್ಲಿ ಗರಿಷ್ಠ ಶೇ.81.48; ಬೆಂಗಳೂರು ಕೇಂದ್ರದಲ್ಲಿ ಕನಿಷ್ಠ ಶೇ.52.81

ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಶುಕ್ರವಾರ ನಡೆದ ಮೊದಲ ಹಂತದ ಮತದಾನವು ಬಹುತೇಕ ಶಾಂತಿಯುತವಾಗಿ ನೆರವೇರಿತು. ಒಟ್ಟಾರೆ ಶೇ.69.23ರಷ್ಟು ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...

ಪ್ರಜಾಸತ್ತೆಯ ಬಂಧನ!

ಭಾರತದಲ್ಲಿ ಮತ್ತೆ ಬ್ರಿಟಿಷ್ ಕ್ರೌರ್ಯದ ಕಾಲಕ್ಕೆ ಮರಳಿದೆ. ಮನುವಾದಿ ಶಕ್ತಿಗಳು ಆ ಕಾಲವನ್ನು ನಿಯಂತ್ರಿಸುತ್ತಿದೆ. ಏಕಲವ್ಯನ ಬೆರಳು ...

ಚಿಂದಿ ಆಯುವ ಹಕ್ಕು

ಗಂಭೀರವಾಗಿ ಚರ್ಚಿಸುವುದಾದಲ್ಲಿ ಒಂದು ಸಾಮಾಜಿಕವಾಗಿ ತಿರಸ್ಕಾರಕ್ಕೊಳಪಟ್ಟ ವೃತ್ತಿಯಾದ ಚಿಂದಿ ಆಯುವುದು ನೈತಿಕವಾಗಿ ...

ನಿಜಕ್ಕೂ ಸಾದಿಯಾ ಯಾರು?

ಗಣರಾಜೋತ್ಸವದಂದು ಕಾಶ್ಮೀರದಲ್ಲಿ ಬಾಂಬ್ ಸ್ಫೋಟಿಸಲು ಸಂಚು ನಡೆಸಿರುವಳೆಂದು ಶಂಕಿಸಿ ಬಂಧಿಸಲಾಗಿದ್ದ ಯುವತಿಯನ್ನು ಪೊಲೀಸರು ಫೆ. ...