ಶಿಡ್ಲಘಟ್ಟ: ಕುಂದಲಗುರ್ಕಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

Source: tamim | By Arshad Koppa | Published on 24th August 2017, 8:46 AM | State News | Special Report |

ಶಿಡ್ಲಘಟ್ಟ,ಆಗಸ್ಟ್21: ಕ್ಷೇತ್ರದಲ್ಲಿ ಬಡವರು-ಕೂಲಿ ಕಾರ್ಮಿಕರ ಅನುಕೂಲಕ್ಕಾಗಿ ಟ್ರಸ್ಟ್‍ನ ಮೂಲಕ ಈಗಾಗಲೇ 18 ಆರೋಗ್ಯ ತಪಾಸಣೆ ಮತ್ತು ಶಸ್ತ್ರಚಿಕಿತ್ಸಾ ಶಿಬಿರಗಳನ್ನು ಆಯೋಜಿಸಲಾಗಿದೆ ಸರ್ವರಿಗೂ ಶಿಕ್ಷಣ ಮತ್ತು ಸರ್ವರಿಗೂ ಉತ್ತಮ ಆರೋಗ್ಯ ಕಲ್ಪಿಸಬೇಕೆಂಬುದೇ ತಮ್ಮ ಮೂಲ ಉದ್ದೇಶವಾಗಿದೆ ಎಂದು ಆನೂರು ಎಸ್.ಎನ್.ಕ್ರಿಯಾ ಟ್ರಸ್ಟ್‍ನ ಅಧ್ಯಕ್ಷ ಆಂಜಿನಪ್ಪ(ಪುಟ್ಟು) ಹೇಳಿದರು.


    ತಾಲೂಕಿನ ಕುಂದಲಗುರ್ಕಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಆನೂರು ಎಸ್.ಎನ್.ಕ್ರಿಯಾ ಟ್ರಸ್ಟ್‍ನ ಹಾಗೂ ಹೊಸಕೋಟೆ ಎಂವಿಜೆ ಆಸ್ಪತ್ರೆಯ ಸಂಯುಕ್ತಾಶ್ರಯದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದ ಅವರು ಗ್ರಾಮೀಣ ಪ್ರದೇಶದಲ್ಲಿ ಅನೇಕ ರೀತಿಯ ಆರೋಗ್ಯ ಸಮಸ್ಯೆಗಳಿಂದ ನರಳುತ್ತಿದ್ದಾರೆ ಸಕಾಲದಲ್ಲಿ ಆರೋಗ್ಯವನ್ನು ಸುಧಾರಿಸಿಕೊಳ್ಳದೆ ಸಂಕಷ್ಟದಲ್ಲಿ ಸಿಲುಕಿದ್ದಾರೆ ಮನುಷ್ಯನಿಗೆ ಆರೋಗ್ಯ ದೊಡ್ಡ ಸಂಪತ್ತು ಆಗಿದ್ದು ಅದನ್ನು ಸಂರಕ್ಷಣೆ ಮಾಡುವ ವಿಚಾರದಲ್ಲಿ ಜನರಲ್ಲಿ ವ್ಯಾಪಕ ಜಾಗೃತಿ ಮೂಡಿಸಬೇಕಾಗಿದೆ ಎಂದ ಅವರು ವಯೋವೃಧ್ಧರು-ಅಂಗವಿಕಲರು,ಅವಿವಾಹಿತರಿಗೆ ಸರಕಾರದಿಂದ ದೊರೆಯುವ ಸೌಲಭ್ಯಗಳನ್ನು ಒದಗಿಸಲು ಟ್ರಸ್ಟ್ ಸೇತುವೆಯಾಗಿ ಕಾರ್ಯನಿರ್ವಹಿಸಲಿದೆ ಎಂದರು.
    ಕುಂದಲಗುರ್ಕಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಕೆ.ಎಂ.ವೆಂಕಟೇಶ್ ಮಾತನಾಡಿ ಹಿಂದುಳಿದ ಪ್ರದೇಶವಾಗಿರುವ ಕುಂದಲಗುರ್ಕಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಹೆಚ್ಚಾಗಿ ಕೂಲಿ ಕಾರ್ಮಿಕರು ಮತ್ತು ಬಡವರು ಹೆಚ್ಚಾಗಿದ್ದಾರೆ ಏನಾದೂರು ಆರೋಗ್ಯ ಸಮಸ್ಯೆ ಎದುರಾದರೆ ತಾಲೂಕು ಕೇಂದ್ರದ ಆಸ್ಪತ್ರೆಗಳಿಗೆ ಹೋಗಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ ಟ್ರಸ್ಟ್‍ನ ಮೂಲಕ ಉಚಿತವಾಗಿ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಿರುವುದರಿಂದ ಬಹಳ ಅನುಕೂಲವಾಗಿದೆ ಎಂದರು.
ಈ ಸಂದರ್ಭದಲ್ಲಿ ಆನೂರು ಎಸ್.ಎನ್.ಕ್ರಿಯಾ ಟ್ರಸ್ಟ್‍ನ ಕಾರ್ಯದರ್ಶಿ ವಿಶ್ವನಾಥ್, ತಾಪಂ ಸದಸ್ಯ ಶ್ರೀನಿವಾಸ್,ತಲಕಾಯಲಬೆಟ್ಟ ಗ್ರಾಪಂ ಸದಸ್ಯ ಅಶ್ವತ್ಥನಾರಾಯಣ, ಮಳಮಾಚನಹಳ್ಳಿ ಬೈರೇಗೌಡ,ಆನೂರು ನಟರಾಜ್,ಟಿಪ್ಪುಸೆಕ್ಯೂಲರ್ ಸೇನೆಯ ಅಫ್ಸರ್‍ಪಾಷ,ಬೆಂಗಳೂರು ಉತ್ತರ ತಾಪಂ ಮಾಜಿ ಅಧ್ಯಕ್ಷ ನಾಗರಾಜ್,ಗ್ರಾಮ ಪಂಚಾಯಿತಿ ಸದಸ್ಯ ಸೋಮಶೇಖರ್ ಮತ್ತಿತರರು ಉಪಸ್ಥಿತರಿದ್ದರು.
ಸುಧ್ಧಿಚಿತ್ರ,ಆಗಸ್ಟ್21 ಎಸ್.ಡಿ.ಎಲ್.ಪಿ01 ಶಿಡ್ಲಘಟ್ಟ ತಾಲೂಕಿನ ಕುಂದಲಗುರ್ಕಿ ಗ್ರಾಮದಲ್ಲಿ ಆಯೋಜಿಸಿದ್ದ ಉಚಿತ ಆರೋಗ್ಯ ತಪಾಸಣೆ ಶಿಬಿರದಲ್ಲಿ ಭಾಗವಹಿಸಿರುವ ಗ್ರಾಮಸ್ಥರು.

 

Read These Next

'ಚುನಾವಣಾ ಬಾಂಡ್' ವಿಶ್ವದ ದೊಡ್ಡ ಹಗರಣ; ಬಿಜೆಪಿ ವಿರುದ್ಧ ರಾಹುಲ್‌ ಗಾಂಧಿ ವಾಗ್ದಾಳಿ

ಬಿಜೆಪಿಯ ಚುನಾ ವಣಾ ಬಾಂಡ್ ವಿಶ್ವದ ಅತ್ಯಂತ ದೊಡ್ಡ ಹಗರಣವಾಗಿದ್ದು, ಗೂಂಡಾಗಳ ರೀತಿಯಲ್ಲಿ ಕೆಲವು ಉದ್ಯಮಿಗಳನ್ನು ಬೆದರಿಸಿ ಹಫ್ತಾ ...

ಸಂವಿಧಾನ ಮತ್ತು  ಪ್ರಜಾಪ್ರಭುತ್ವ ಉಳಿಸುವುದಕ್ಕೆ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ಎಂದು ರಾಹುಲ್ ಗಾಂಧಿ ಕರೆ

ಮಾಲೂರು : ಈ ಲೋಕಸಭೆ ಚುನಾವಣೆಯು ಎರಡು ಸಿದ್ಧಾಂತಗಳ ನಡುವಿನ ಯುದ್ಧ ಇಂಡಿಯಾ ಬಣ ಒಂದು ಕಡೆ "ಸಂವಿಧಾನಕ್ಕಾಗಿ ಹೋರಾಟ" ನಡೆಸುತ್ತಿದೆ ...

ದಹನಕಾರಿ ಹೇಳಿಕೆಗಳಿಗೆ ಹೆಸರಾದ ಅನಂತ್ ಕುಮಾರ್ ಹೆಗಡೆ ಸಂಸತ್ತಿನಲ್ಲೇಕೆ ಮೌನವಾಗಿದ್ದಾರೆ?

ಪ್ರಜಾಪ್ರಭುತ್ವದಲ್ಲಿ, ಜನರ ಧ್ವನಿಯನ್ನು ಚುನಾಯಿತ ಪ್ರತಿನಿಧಿಗಳ ಮೂಲಕ ಕೇಳಬೇಕು. ಆದಾಗ್ಯೂ, ಸಂಸತ್ತಿನ ಕೆಲವು ಸದಸ್ಯರು (ಸಂಸದರು) ...

ಭಟ್ಕಳದಲ್ಲಿ ಹೆಚ್ಚಿದ ಹೆಣ್ಣು ಮಕ್ಕಳ ಸಂಖ್ಯೆ: ಗರಿಷ್ಠ ಲಿಂಗಾನುಪಾತ; ಕಾರವಾರ ಮತ್ತು ಮುಂಡಗೋಡನಲ್ಲಿ ಅತೀ ಕಡಿಮೆ ಲಿಂಗಾನುಪಾತ

ಹೆಣ್ಣು ಮತ್ತು ಗಂಡು ನಡುವಿನ ಲಿಂಗಾನುಪಾತದ ವ್ಯತ್ಯಾಸ ದೇಶಾದ್ಯಂತ ವ್ಯಾಪಕವಾಗಿ ಕಂಡು ಬರುತ್ತಿದ್ದು, ಈಗಾಗಲೇ ಈ ವ್ಯತ್ಯಾಸದಿಂದ ...

ಕಾರವಾರ: ವಿಶೇಷ ಚೇತನರಿಗೆ ಯುಡಿಐಡಿ ಕಾರ್ಡ್ ವಿತರಣೆ; ಉತ್ತರ ಕನ್ನಡ ಜಿಲ್ಲೆ ರಾಜ್ಯದಲ್ಲಿ ದ್ವಿತೀಯ

ವಿಶೇಷ ಚೇತನರಿಗಾಗಿ ರೂಪಿಸಲಾಗುವ ಸರ್ಕಾರದ ವಿವಿಧ ಯೋಜನೆಗಳ ಸೌಲಭ್ಯಗಳನ್ನು ವಿಶೇಷ ಚೇತನರಿಗೆ ಪರಿಣಾಮಕಾರಿಯಾಗಿ ತಲುಪಿಸುವ ...