ಹರ್ಷ ಕೊಲೆ ಪ್ರಕರಣ ಹಂತಕರು ಬಳಸಿದ್ದು ಬೇರೆ ರಾಜ್ಯದ ಕಾರು

Source: Vb | By I.G. Bhatkali | Published on 26th February 2022, 10:39 AM | State News |

ಶಿವಮೊಗ್ಗ: ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಹತ್ತು ಜನರನ್ನು ಬಂಧಿಸಿದ್ದೇವೆ. ವಶಕ್ಕೆ ಪಡೆದವರ ವಿಚಾರಣೆ ಆರಂಭಿಸುತ್ತೇವೆ. ವಿಚಾರಣೆ ಬಳಿಕ ಯಾರೆಲ್ಲ ಈ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎಂಬುದು ತಿಳಿಯಲಿದೆ. 14 ದಿನಗಳ ಬಳಿಕ ಆರೋಪಿಗಳನ್ನು ಪೊಲೀಸ್ ಕಸ್ಟಡಿಗೆ ತೆಗೆದು ಕೊಳ್ಳುತ್ತೇವೆ ಎಂದು ಶಿವಮೊಗ್ಗ ಎಸ್ಪಿ ಲಕ್ಷ್ಮಿ ಪ್ರಸಾದ್ ತಿಳಿಸಿದ್ದಾರೆ.

ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೊಲೆ ಮಾಡಲು ಬಳಸಿಕೊಂಡಿದ್ದ ಕಾರನ್ನು ಹಾಗೂ ಆರೋಪಿಗಳು ತಪ್ಪಿಸಿಕೊಳ್ಳಲು ಬಳಸಿದ್ದ ಕಾರು ಹಾಗೂ ಬೈಕನ್ನು ವಶಕ್ಕೆ ಪಡೆದಿದ್ದೇವೆ. ಕೊಲೆ ಮಾಡಲು ಬೇರೆ ರಾಜ್ಯದ ಕಾರನ್ನು ಬಳಸಿಕೊಂಡಿದ್ದಾರೆ. ಆ ಕಾರು ಯಾರದ್ದು?, ಶಿವಮೊಗ್ಗಕ್ಕೆ ಯಾಕೆ ಬಂತು?, ಕಾರಿನ ಮಾಲಕರು ಯಾರು ಎಂಬುದರ ಬಗ್ಗೆ ತನಿಖೆ ನಡೆಸುತ್ತಿದ್ದೇವೆ ಎಂದರು.

ವೀಡಿಯೊ ಕಾಲ್ ಮಾಡಿದವರ ಪತ್ತೆ ಹರ್ಷನ ಮೊಬೈಲ್ ಇದುವರೆಗೆ ಪತ್ತೆಯಾಗಿಲ್ಲ. ಆದರೆ ಆತನಿಗೆ ವೀಡಿಯೊ ಕರೆ ಮಾಡಿದವರನ್ನು ಪತ್ತೆ ಮಾಡಿದ್ದೇವೆ. ಪೊಲೀಸರಿಗೆ ಲಾಂಗ್ ಮಚ್ಚು ತೋರಿಸಿ ಬೆದರಿಕೆ ಹಾಕಿದವರು ಯಾರು ಎಂಬುದೂ ಗೊತ್ತಾಗಿದೆ. ಅವರನ್ನು ಶೀಘ್ರವೇ ಬಂಧಿಸುತ್ತೇವೆ ಎಂದು ಎಸ್ಪಿ ಮಾಹಿತಿ ನೀಡಿದರು.

ಹರ್ಷ ಕೊಲೆ ಪ್ರಕರಣದಲ್ಲಿ ಸಾತು ಆ್ಯಂಡ್ ಗ್ಯಾಂಗ್ ಭಾಗಿಯಾಗಿತ್ತೇ ಎಂಬುದರ ಬಗ್ಗೆ ತನಿಖೆ ನಡೆಸುತ್ತಿದ್ದೇವೆ. ಕೊಲೆಯ ಹಿಂದೆ ಯಾವುದಾದರೂ ಸಂಘಟನೆಗಳಿವೆಯೇ ಎಂಬುದರ ಬಗ್ಗೆಯೂ ತನಿಖೆ ನಡೆಸುತ್ತಿದ್ದೇವೆ. ಖಾಸಿಫ್, ಆಸಿಫ್ ಮೇಲೆ ಐದು, ರಿಹಾನ್ ಮೇಲೆ ಮೂರು ಹಾಗೂ ಅಫ್ಘಾನ್ ಮೇಲೆ ಎರಡು ಕಾನೂನು ಸುವ್ಯವಸ್ಥೆ ಪ್ರಕರಣಗಳಿವೆ. ಉಳಿದಂತೆ ಇವರ ಮೇಲೆ ಹಲವು ಡಕಾಯಿತಿ, ಕಳ್ಳತನ ಪ್ರಕರಣಗಳು ದಾಖಲಾಗಿವೆ. ಕೊಲೆಯಾದ ಹರ್ಷನ ಮೇಲೆ ಎರಡು ಕ್ರಿಮಿನಲ್ ಪ್ರಕರಣಗಳು ದಾಖಲಾಗಿದ್ದವು ಎಂದು ಎಸ್ಪಿ ಮಾಹಿತಿ ನೀಡಿದರು.

Read These Next

ರೇಪಿಷ್ಟ್ ಗಳ ಜೊತೆ ಬಿಜೆಪಿ ಹೊಂದಾಣಿಕೆ;  ಹೆಣ್ಣುಮಕ್ಕಳಿಗೆ ರಕ್ಷಣೆ ಕೊಡುವುದು ಅಂದರೆ ಇದೇನಾ? -ಸಿದ್ಧರಾಮಯ್ಯ

ಕುಮಟಾ: ಪ್ರಜ್ವಲ್ ರೇವಣ್ಣ ವಿಡಿಯೋ ಪ್ರಕರಣದ ಬಗ್ಗೆ ಗೊತ್ತಿದ್ದೂ ಬಿಜೆಪಿ ಜೆಡಿಸ್ ಜೊತೆ ಹೊಂದಾಣಿಕೆ ಮಾಡಿಕೊಂಡಿದೆ. ಇದೇನಾ ...

ಮುಂಡಗೋಡ: ಮೋದಿ ಸುಳ್ಳುಗಳ ಸರದಾರ, ಬಿಜೆಪಿ ಸುಳ್ಳಿನ ಕಾರ್ಖಾನೆ: ಸಿದ್ದರಾಮಯ್ಯ ವಾಗ್ದಾಳಿ

ಯುವಕರು ಕೆಲಸ ಕೊಡಿ ಎಂದರೆ ಪಕೋಡಾ ಮಾರಲು ಹೋಗಿ ಎಂದು ಪ್ರಧಾನಿ ಮೋದಿಯವರು ವಿದ್ಯಾವಂತ ಯುವಜನರಿಗೆ ಬೇಜವಾಬ್ದಾರಿ ಹೇಳಿಕೆ ಕೊಟ್ಟರು. ...

ಅತಿಕ್ರಮಣದಾರರ ವಿಚಾರದಲ್ಲೂ ಬಿಜೆಪಿಯಿಂದ ರಾಜಕೀಯ; ಮುಂಡಗೋಡದಲ್ಲಿ ಡಿಕೆಶಿ ವಾಗ್ದಾಳಿ

ರೈತರ ವಿಚಾರದಲ್ಲಿ ಬಿಜೆಪಿ ರಾಜಕಾರಣ ಮಾಡುತ್ತಿದೆ. ಆದಾಯ ಡಬಲ್ ಮಾಡುತ್ತೇವೆಂದು ಹೇಳಿ ರೈತರಿಗೆ ಮರಳು ಮಾಡಿದೆ. ಅತಿಕ್ರಮಣದಾರರ ...

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ಬಿಜೆಪಿ ಮುಖಂಡನಿಗೆ ಪೆನ್‌ಡ್ರೈವ್ ನೀಡಿದ್ದೆ; ಪ್ರಜ್ವಲ್ ಕಾರು ಚಾಲಕನಿಂದ ಹೇಳಿಕೆ

ಪ್ರಜ್ವ ರೇವಣ್ಣರದ್ದು ಎನ್ನಲಾದ ಅಶ್ಲೀಲ ವೀಡಿಯೊ ಪೆನ್ ಡ್ರೈವ್ ಬಿಜೆಪಿ ಮುಖಂಡರೂ ಆಗಿರುವ ವಕೀಲ ದೇವರಾಜೇಗೌಡ ಬಿಟ್ಟು ಬೇರೆ ಯಾರಿಗೂ ...