ಶಿವಮೊಗ್ಗ: ಭೀಕರ ಬಸ್ ಅಪಘಾತ ತಾಯಿ,ಮಗಳು ಸೇರಿ ಮೂವರು ಸಾವು

Source: so news | By MV Bhatkal | Published on 19th April 2019, 12:11 AM | State News | Don't Miss |

ಶಿವಮೊಗ್ಗ: ಶಿವಮೊಗ್ಗದಲ್ಲಿ ಖಾಸಗಿ ಬಸ್ಸೊಂದು ಉರುಳಿ ಬಿದ್ದ ಪರಿಣಾಮ ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ತಾಯಿ, ಮಗಳು ಸೇರಿ ಮೂವರು ಸಾವನ್ನಪ್ಪಿ, ಇತರ 20ಕ್ಕೂ ಅಧಿಕ ಮಂದಿ ಗಾಯಗೊಂಡಿರುವ ಘಟನೆ ಗುರುವಾರ ನಡೆದಿದೆ.
ಬೆಳಗ್ಗಿನ ಜಾವ ಸಾಗರ ತಾಲೂಕಿನ ಉಳ್ಳೂರು ಕ್ರಾಸ್‌ ಬಳಿ ಈ ಅಪಘಾತ ಸಂಭವಿಸಿದ್ದು, ಹೆದ್ದಾರಿಯ ಸೂಕ್ಷ್ಮ ತಿರುವೊಂದರಲ್ಲಿ ಬಸ್‌ ತಿರುಗುತ್ತಿದ್ದಾಗ ಈ ಅವಘಡ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ. 
ಇನ್ನು ಮೃತರನ್ನು ಕೀರ್ತನಾ (12 ವರ್ಷ), ಸುಜಾತ ಕೃಷ್ಣಕುಮಾರ್‌ (40 ವರ್ಷ) ಹಾಗೂ ಮುಹಮ್ಮದ್‌ ಯಾಸೀನ್ (16 ವರ್ಷ) ಎಂದು ಗುರುತಿಸಲಾಗಿದೆ. ಗಾಯಗೊಂಡವರನ್ನು ಸಾಗರದ ಸರ್ಕಾರಿ ಆಸ್ಪತ್ರೆ ಹಾಗೂ ಮ್ಯಾಕ್ಸ್ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಬಸ್‍ ರಸ್ತೆಯಲ್ಲೇ ಮಗುಚಿ ಬಿದ್ದಿದ್ದರಿಂದ ವಾಹನ ಸಂಚಾರಕ್ಕೆ ಅಡಚಣೆಯಾಗಿತ್ತು. ಪೊಲೀಸರು ಮತ್ತು ಸ್ಥಳೀಯರು ರಕ್ಷಣಾ ಕಾರ್ಯದಲ್ಲಿ ಪಾಲ್ಗೊಂಡು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದರು. 
ಜೆಸಿಬಿ, ಕ್ರೇನ್ ‍ಮೂಲಕ ಬಸ್ಸನ್ನು ರಸ್ತೆ ಬದಿಗೆ ಸರಿಸಿ ಸುಗಮ ಸಂಚಾರಕ್ಕೆ ಅವಕಾಶ ಮಾಡಿಕೊಡಲಾಯಿತು. ಘಟನೆ ಕುರಿತು ಸಾಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಗಾಯಾಳುಗಳಿಗೆ ನೆರವಾದ ಶಾಸಕ ಹರತಾಳು ಹಾಲಪ್ಪಗಾಯಾಳುಗಳನ್ನು ಸಾಗಿಸುತ್ತಿದ್ದಾಗ ಅದೇ ಮಾರ್ಗವಾಗಿ ಶಾಸಕ ಹರತಾಳು ಹಾಲಪ್ಪ ಬರುತ್ತಿದ್ದರು. ಈ ವೇಳೆ ಅವರು ಕೂಡ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲು ನೆರವಾದರು ಎಂದು ತಿಳಿದುಬಂದಿದೆ.

Read These Next

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಗದಗ: ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ ಭೇದಿಸಿದ ಪೊಲೀಸರು; ಸುಪಾರಿ ನೀಡಿದ ಮನೆಮಗ ಸಹಿತ 8 ಮಂದಿಯ ಬಂಧನ

ಮೂರು ದಿನಗಳ ಹಿಂದೆ ಗದಗದಲ್ಲಿ ನಡೆದಿದ್ದ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣವನ್ನು ಭೇದಿಸಿರುವ ಪೊಲೀಸರು ಎಂಟು ಮಂದಿ ...

ಧಾರವಾಡ ಲೋಕಸಭೆ : ಉಮೇದುವಾರಿಕೆ ಹಿಂಪಡೆದ ಎಂಟು ಅಭ್ಯರ್ಥಿಗಳು; ಅಂತಿಮವಾಗಿ ಚುನಾವಣಾ ಸ್ಪರ್ಧೆಯಲ್ಲಿ 17 ಅಭ್ಯರ್ಥಿಗಳು

ಧಾರವಾಡ : 11-ಧಾರವಾಡ ಚುನಾವಣಾ ಕ್ಷೇತ್ರದಿಂದ ಲೋಕಸಭೆಗೆ ನಡೆಯುವ ಚುನಾವಣೆಗೆ ಕ್ರಮಬದ್ದವಾಗಿ ನಾಮನಿರ್ದೇಶನ ಮಾಡಲ್ಪಟ್ಟಿದ್ದ 25 ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಧಾರವಾಡ ಲೋಕಸಭೆ : ಉಮೇದುವಾರಿಕೆ ಹಿಂಪಡೆದ ಎಂಟು ಅಭ್ಯರ್ಥಿಗಳು; ಅಂತಿಮವಾಗಿ ಚುನಾವಣಾ ಸ್ಪರ್ಧೆಯಲ್ಲಿ 17 ಅಭ್ಯರ್ಥಿಗಳು

ಧಾರವಾಡ : 11-ಧಾರವಾಡ ಚುನಾವಣಾ ಕ್ಷೇತ್ರದಿಂದ ಲೋಕಸಭೆಗೆ ನಡೆಯುವ ಚುನಾವಣೆಗೆ ಕ್ರಮಬದ್ದವಾಗಿ ನಾಮನಿರ್ದೇಶನ ಮಾಡಲ್ಪಟ್ಟಿದ್ದ 25 ...

ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ ಪ್ರಶ್ನೆ

ಬಾಳೆಹೊನ್ನೂರು: ಕಳೆದ ಹತ್ತು ವರ್ಷಗಳಿಂದ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ, ಮಲೆನಾಡಿನ ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ...