ಭಟ್ಕಳ: ಟೆಂಪೋ ಬೈಕ್ ನಡುವೆ ಭೀಕರ ಅಪಘಾತ; ಇಬ್ಬರ ಸಾವು

Source: sonews | By Staff Correspondent | Published on 7th August 2017, 7:01 PM | Coastal News | State News | Special Report | Don't Miss |

·    ಶಿರಾಲಿ ರಾ.ಹೆ.ಯಲ್ಲಿ ಸೋಮವಾರ ಬೆಳಗಿನ ಜಾವ ನಡೆದ ದುರ್ಘಟನೆ

ಭಟ್ಕಳ: ಪ್ಯಾಸೆಂಜರ್ ಟೆಂಪೋ ಹಾಗೂ ದ್ವಿಚಕ್ರ ವಾಹನದ ನಡುವೆ ನಡೆದ ಭೀಕರ ಅಪಘಾತದಲ್ಲಿ ಬೈಕ್ ಸವಾರರು ಸ್ಥಳದಲ್ಲೇ ಸಾವನ್ನಪ್ಪಿದ ಭೀಕರ ದುರ್ಘಟನೆ ಸೋಮವಾರ ಬೆಳಗಿನ ಜಾವಾ ೪.೨೦ಕ್ಕೆ ಶಿರಾಲಿಯ ರಾ.ಹೆ.ಯಲ್ಲಿ ಜರಗಿದೆ. 

ದುರ್ಘಟನೆಯಲ್ಲಿ ಮೃತಪಟ್ಟವರನ್ನು ಧಾರವಾಡ ಜಿಲ್ಲೆಯ ಕಲಘಟಗಿ ನಿವಾಸಿಗಳಾದ ಮಂಜುನಾಥ್ ಬಸವನ ಗೌಡ (೨೪) ಹಾಗೂ ಹನುಮಂತಪ್ಪ ಕಲ್ಲಪ್ಪ(೩೦) ಎಂದು ಗುರುತಿಸಲಾಗಿದೆ. 

ಇವರು ಉಡುಪಿಯಿಂದ ಕಲಘಟಗಿ ಗೆ ಹೋಗುತ್ತಿರುವಾಗ ಮುರುಡೇಶ್ವರದಿಂದ ಭಟ್ಕಳಕ್ಕೆ ಹೋಗುತ್ತಿರುವ ಪ್ಯಾಸೆಂಜರ್ ಟೆಂಪೋಗೆ ಡಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿದೆ ಎಂದು ಹೇಳಲಾಗಿದೆ. 

ನಸುಕಿನ ಜಾವ ಅತಿವೇಗವಾಗಿ ಚಲಾಯಿಸುತ್ತಿದ್ದ ದ್ವಿಚಕ್ರ ವಾಹನ ಟೆಂಪೋಗೆ ಡಿಕ್ಕಿ ಹೊಡೆದಿದ್ದು ಅದರ ಮುಂದಿನ ಗಾಲಿ ಬೈಕ್ ನಿಂದ ಬೇರ್ಪಡೆಗೊಂಡು ರಸ್ತೆ ಬದಿಗೆ ಬಿದ್ದಿದೆ. ಅಲ್ಲದೆ ಬೈಕ್ ಸವಾರರು ಹಾಕಿಕೊಂಡಿದ್ದ ಹೆಲ್ಮೆಟ್ ಕೂಡ ತಲೆಯಿಂದ ಬೇರ್ಪಟ್ಟಿದ್ದು ಕಂಡರೆ ಅಪಘಾತದ ತೀವ್ರತೆಯ ಅರಿವಾಗುತ್ತದೆ ಎಂದು ಸ್ಥಳಿಯರು ತಿಳಿಸಿದ್ದಾರೆ. 
ಅಪಘಾತದ ಸುದ್ದಿ ತಿಳಿಯುತ್ತಿದ್ದಂತೆ ಮುರ್ಡೇಶ್ವರ ಪೊಲೀಸರು ಘಟನಾಸ್ಥಳಕ್ಕೆ ಬಂದು ಪರಿಶೀಲಿಸಿದ್ದು ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಮುರುಡೇಶ್ವರ ಸರ್ಕಾರಿ ಆಸ್ಪತ್ರೆಗೆ ಸೇರಿಸಲಾಗಿದೆ. ಪ್ರಕರಣ ದಾಖಲಾಗಿದೆ. 

Read These Next

ಹನೂರು: ಇಂಡಿಗನ ಮತಗಟ್ಟೆ ಮೇಲೆ ಕಲ್ಲು ತೂರಾಟ, ಇವಿಎಂಗೆ ಹಾನಿ ತಹಶೀಲ್ದಾರ್, ಇನ್‌ಸ್ಪೆಕ್ಟರ್, ಚುನಾವಣಾಧಿಕಾರಿ ಸಹಿತ ಹಲವರಿಗೆ ಗಾಯ

ಮಹದೇಶ್ವರ ಬೆಟ್ಟ ಸಮೀಪದ ಇಂಡಿಗನತ್ತ ಮೆಂದಾರೆ ಮತಗಟ್ಟೆ ಬಳಿ ಮತದಾನ ನಡೆಯುವ ಬದಲು ರಣರಂಗವಾಗಿ ಮಾರ್ಪಟ್ಟು ಮತಗಟ್ಟೆ ಸಂಪೂರ್ಣ ...

ರಾಜ್ಯದಲ್ಲಿ ಶೇ.69.23 ಮತದಾನ; ಮಂಡ್ಯದಲ್ಲಿ ಗರಿಷ್ಠ ಶೇ.81.48; ಬೆಂಗಳೂರು ಕೇಂದ್ರದಲ್ಲಿ ಕನಿಷ್ಠ ಶೇ.52.81

ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಶುಕ್ರವಾರ ನಡೆದ ಮೊದಲ ಹಂತದ ಮತದಾನವು ಬಹುತೇಕ ಶಾಂತಿಯುತವಾಗಿ ನೆರವೇರಿತು. ಒಟ್ಟಾರೆ ಶೇ.69.23ರಷ್ಟು ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ದಹನಕಾರಿ ಹೇಳಿಕೆಗಳಿಗೆ ಹೆಸರಾದ ಅನಂತ್ ಕುಮಾರ್ ಹೆಗಡೆ ಸಂಸತ್ತಿನಲ್ಲೇಕೆ ಮೌನವಾಗಿದ್ದಾರೆ?

ಪ್ರಜಾಪ್ರಭುತ್ವದಲ್ಲಿ, ಜನರ ಧ್ವನಿಯನ್ನು ಚುನಾಯಿತ ಪ್ರತಿನಿಧಿಗಳ ಮೂಲಕ ಕೇಳಬೇಕು. ಆದಾಗ್ಯೂ, ಸಂಸತ್ತಿನ ಕೆಲವು ಸದಸ್ಯರು (ಸಂಸದರು) ...

ಭಟ್ಕಳದಲ್ಲಿ ಹೆಚ್ಚಿದ ಹೆಣ್ಣು ಮಕ್ಕಳ ಸಂಖ್ಯೆ: ಗರಿಷ್ಠ ಲಿಂಗಾನುಪಾತ; ಕಾರವಾರ ಮತ್ತು ಮುಂಡಗೋಡನಲ್ಲಿ ಅತೀ ಕಡಿಮೆ ಲಿಂಗಾನುಪಾತ

ಹೆಣ್ಣು ಮತ್ತು ಗಂಡು ನಡುವಿನ ಲಿಂಗಾನುಪಾತದ ವ್ಯತ್ಯಾಸ ದೇಶಾದ್ಯಂತ ವ್ಯಾಪಕವಾಗಿ ಕಂಡು ಬರುತ್ತಿದ್ದು, ಈಗಾಗಲೇ ಈ ವ್ಯತ್ಯಾಸದಿಂದ ...

ಕಾರವಾರ: ವಿಶೇಷ ಚೇತನರಿಗೆ ಯುಡಿಐಡಿ ಕಾರ್ಡ್ ವಿತರಣೆ; ಉತ್ತರ ಕನ್ನಡ ಜಿಲ್ಲೆ ರಾಜ್ಯದಲ್ಲಿ ದ್ವಿತೀಯ

ವಿಶೇಷ ಚೇತನರಿಗಾಗಿ ರೂಪಿಸಲಾಗುವ ಸರ್ಕಾರದ ವಿವಿಧ ಯೋಜನೆಗಳ ಸೌಲಭ್ಯಗಳನ್ನು ವಿಶೇಷ ಚೇತನರಿಗೆ ಪರಿಣಾಮಕಾರಿಯಾಗಿ ತಲುಪಿಸುವ ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...