ವಿಧಾನಸಭೆಯಲ್ಲಿ ಶರ್ಟ್ ಬಿಚ್ಚಿದ ಶಾಸಕ, ಕೆರಳಿದ ಸ್ಪೀಕರ್..!

Source: S.O. News Service | By MV Bhatkal | Published on 4th March 2021, 7:37 PM | State News | Don't Miss |

ಬೆಂಗಳೂರು:ಸದನದಲ್ಲಿ ಪ್ರತಿಭಟನೆ ನಡೆಯುತ್ತಿದ್ದ ವೇಳೆ ಕಾಂಗ್ರೆಸ್ ಶಾಸಕ ಬಿ.ಕೆ.ಸಂಗಮೇಶ್ ಶರ್ಟ್ ಬಿಚ್ಚಿದ್ದನ್ನು ಕಂಡ ವಿಧಾನಸಭೆ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಈ ರೀತಿ ನಡೆದುಕೊಂಡರೆ ಸದನದಿಂದ ಹೊರ ಕಳಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ ಪ್ರಸಂಗ ನಡೆಯಿತು.
ವಿಧಾನಸಭೆಯಲ್ಲಿ ಒಂದು ರಾಷ್ಟ್ರ ಒಂದು ಚುನಾವಣೆ ಕುರಿತಾಗಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ತಮ್ಮ ಭಾಷಣ ಮುಗಿಸಿ ಸದಸ್ಯರೆಲ್ಲರೂ ತಮ್ಮ ತಮ್ಮ ಆಸನಗಳಿಗೆ ಹಿಂತಿರುಗಬೇಕೆಂದು ಮನವಿ ಮಾಡಿದರು. ಆಗ ಭದ್ರಾವತಿ ಕ್ಷೇತ್ರದ ಶಾಸಕ ಬಿ.ಕೆ.ಸಂಗಮೇಶ್ ಅವರು ಸದನದ ಬಾವಿಗಿಳಿದು ಪ್ರತಿಭಟನೆ ನಡೆಸುತ್ತಿದ್ದರು.
ತಮ್ಮ ಶರ್ಟ್ ಕಳಚಿ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗುತ್ತಿದ್ದರು. ಇದನ್ನು ಕಂಡು ಕೆರಳಿದ ಸ್ಪೀಕರ್ ಅವರು,50 ವರ್ಷ ಆಡಳಿತ ನಡೆಸಿದ ರಾಷ್ಟ್ರೀಯ ಪಕ್ಷದ ಸದಸ್ಯರು ನಡೆದುಕೊಳ್ಳುವ ರೀತಿ ಇದೇನಾ ? ನಿಮ್ಮ ಅಭಿಪ್ರಾಯಗಳು ಏನೇ ಇರಲಿ ಮೊದಲು ನಿಮ್ಮ ನಿಮ್ಮ ಸ್ಥಾನಗಳಿಗೆ ಮರಳಿ. ಈ ವಿಷಯ ಕುರಿತಾಗಿ ನಾನು ಸದನದಲ್ಲೇ ಮಾಹಿತಿ ನೀಡಿದ್ದೇನೆ.
ಈ ವಿಷಯದ ಮೇಲೆ ಇಂತಿಂತವರೇ ಚರ್ಚೆ ಮಾಡುತ್ತೇವೆ ಎಂದು ಹೆಸರುಗಳನ್ನೂ ಕೊಟ್ಟಿದ್ದೀರಿ ಇಂದು ಬೆಳಗ್ಗೆಯಿಂದ ನಿಮ್ಮ ನಿಲುವು ಬದಲಾದರೆ ನಾನೇನು ಮಾಡಲಿ ಎಂದು ಪ್ರಶ್ನಿಸಿದರು.
ಈ ಹಂತದಲ್ಲೂ ಶಾಸಕ ಸಂಗಮೇಶ್ ಅವರು ತಮ್ಮ ಶರ್ಟ್ ಕಳಚಿ ತೋಳನ್ನು ಮೇಲೆತ್ತಿ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗುತ್ತಿದ್ದರು. ಇದರಿಂದ ಮತ್ತಷ್ಟು ಕೆರಳಿದ ಕಾಗೇರಿ ಅವರು, ಒಬ್ಬ ಹಿರಿಯ ಸದಸ್ಯರಾಗಿ ನಡೆದುಕೊಳ್ಳುವುದು ಹೀಗೆನಾ? ನಿಮ್ಮ ನಡವಳಿಕೆಯನ್ನು ತಿದ್ದಿಕೊಳ್ಳದಿದ್ದರೆ ಕ್ರಮ ಕೈಗೊಳ್ಳಬೇಕಾಗುತ್ತದೆ. ಸದನದಿಂದ ಹೊರ ಹಾಕಬೇಕಾಗುತ್ತದೆ ಎಂದು ಗಂಭೀರ ಎಚ್ಚರಿಕೆ ನೀಡಿದರು.
ಆಗ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮತ್ತಿತರರು ಬಂದು ಸಂಗಮೇಶ್ ಅವರಿಗೆ ಶರ್ಟ್ ಹಾಕಿಸಿದರು. ಸದಸ್ಯರ ಗದ್ದಲ ಮುಂದುವರಿದಿದ್ದರಿಂದ ಕಲಾಪವನ್ನು ಸಭಾಧ್ಯಕ್ಷರು 15 ನಿಮಿಷಗಳ ಕಾಲ ಮುಂದೂಡಿದರು.

Read These Next

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಗದಗ: ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ ಭೇದಿಸಿದ ಪೊಲೀಸರು; ಸುಪಾರಿ ನೀಡಿದ ಮನೆಮಗ ಸಹಿತ 8 ಮಂದಿಯ ಬಂಧನ

ಮೂರು ದಿನಗಳ ಹಿಂದೆ ಗದಗದಲ್ಲಿ ನಡೆದಿದ್ದ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣವನ್ನು ಭೇದಿಸಿರುವ ಪೊಲೀಸರು ಎಂಟು ಮಂದಿ ...