ಉತ್ತರಪ್ರದೇಶ, ಗೋವಾ ವಿಧಾನಸಭಾ ಚುನಾವಣೆಯಲ್ಲಿ ಶಿವಸೇನೆ ಸ್ಪರ್ಧೆ: ಸಂಜಯ್ ರಾವತ್

Source: VB News | By MV Bhatkal | Published on 12th September 2021, 7:13 PM | National News | Don't Miss |

ಮುಂಬೈ: ತಮ್ಮ ಪಕ್ಷವು ಉತ್ತರ ಪ್ರದೇಶ ಹಾಗೂ  ಗೋವಾದಲ್ಲಿ ಮುಂದಿನ ವರ್ಷದ ಆರಂಭದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲಿದೆ. ಪಶ್ಚಿಮ ಉತ್ತರಪ್ರದೇಶದ ರೈತ ಸಂಘಟನೆಗಳು ತಮ್ಮ ಪಕ್ಷವನ್ನು ಬೆಂಬಲಿಸಲು ಸಿದ್ಧವಾಗಿವೆ ಎಂದು ಶಿವಸೇನೆಯ ಸಂಸದ ಸಂಜಯ್ ರಾವತ್ ರವಿವಾರ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ರಾವತ್, ಶಿವಸೇನೆ ಉತ್ತರಪ್ರದೇಶದಲ್ಲಿ 80 ರಿಂದ 100 ಸ್ಥಾನಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸುತ್ತದೆ (ಉತ್ತರಪ್ರದೇಶ 403 ಸದಸ್ಯರ ಅಸೆಂಬ್ಲಿ ಸ್ಥಾನ ಹೊಂದಿದೆ), ಆದರೆ ಗೋವಾ ವಿಧಾನಸಭೆಯಲ್ಲಿ ಸುಮಾರು 20 ಸ್ಥಾನಗಳಲ್ಲಿ ಸ್ಪರ್ಧಿಸಲಿದೆ (ಇದರಲ್ಲಿ 40 ಸ್ಥಾನಗಳಿವೆ) ಎಂದರು.
"ಪಶ್ಚಿಮ ಉತ್ತರಪ್ರದೇಶದಲ್ಲಿ ರೈತ ಸಂಘಟನೆಗಳು ಶಿವಸೇನೆಯನ್ನು ಬೆಂಬಲಿಸಲು ತಮ್ಮ ಇಚ್ಛೆಯನ್ನು ವ್ಯಕ್ತಪಡಿಸಿವೆ ಹಾಗೂ  ನಾವು ಸಣ್ಣ ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಳ್ಳಬಹುದು. ಗೋವಾದಲ್ಲಿ ಎಂವಿಎಯಂತಹ ಸೂತ್ರವನ್ನು ಅನ್ವೇಷಿಸಲು ಪ್ರಯತ್ನಗಳು ನಡೆಯುತ್ತಿವೆ. ನಾವು ಯಶಸ್ವಿಯಾಗುತ್ತೇವೆಯೇ ಎಂದು ನೋಡೋಣ" ಎಂದು ರಾಜ್ಯಸಭಾ ಸದಸ್ಯರು ಹೇಳಿದರು.
ಶಿವಸೇನೆ ಈ ಎರಡು ರಾಜ್ಯಗಳಲ್ಲಿ ತನ್ನ ಕಾರ್ಯಕರ್ತರನ್ನು ಹೊಂದಿದೆ. ಯಶಸ್ಸು ಅಥವಾ ವೈಫಲ್ಯವನ್ನು ಲೆಕ್ಕಿಸದೆ ಚುನಾವಣೆಯಲ್ಲಿ ಸ್ಪರ್ಧಿಸುತ್ತಿದೆ ಎಂದು ರಾವತ್ ಹೇಳಿದರು

 

Read These Next

ಪ್ರಧಾನಿ ಮೋದಿಯಿಂದ ದ್ವೇಷ ಭಾಷಣ! ಚುನಾವಣಾ ಆಯೋಗದ ನಿಷ್ಕ್ರಿಯತೆಗೆ ಪ್ರತಿಪಕ್ಷಗಳ ಆಕ್ರೋಶ

ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮ್ ಸಮುದಾಯದ ವಿರುದ್ದ ಆಕ್ಷೇಪಕಾರಿ ಭಾಷಣಗೈದು ತೀವ್ರ ವಿವಾದಕ್ಕೆ ಗುರಿಯಾಗಿದ್ದಾರೆ. ...

ಅಣಕು ಮತದಾನದ ವೇಳೆ ಬಿಜೆಪಿಗೆ ಮತ

ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದವೇಳೆ ಇವಿಎಂಗಳು ತಪ್ಪಾಗಿ ಬಿಜೆಪಿ ಪರವಾಗಿ ಮತಗಳನ್ನು ದಾಖಲಿಸಿವೆ ಎಂದು ಅರ್ಜಿದಾರರೊಬ್ಬರು ...

ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯವಿರಬೇಕು; ಆಯೋಗಕ್ಕೆ ಹೇಳಿದ ಸುಪ್ರೀಂ ಕೋರ್ಟ್

ಚುನಾವಣಾ ಪ್ರಕ್ರಿಯೆ ಯಲ್ಲಿ ಪಾವಿತ್ರ್ಯವಿರಬೇಕು ಎಂದು ಚುನಾವಣಾ ಆಯೋಗಕ್ಕೆ ಇಂದು ಸುಪ್ರೀಂ ಕೋರ್ಟ್ ಹೇಳಿದೆಯಲ್ಲದೆ ಸ್ವತಂತ್ರ ...

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...