ಮಣಗುತ್ತಿ: ಶಿವಾಜಿ ಪ್ರತಿಮೆ ವಿವಾದ ಅಂತ್ಯ

Source: Prajavani | Published on 12th August 2020, 12:40 AM | State News | Don't Miss |

 

 


ಯಮಕನಮರಡಿ: ಹುಕ್ಕೇರಿ ತಾಲ್ಲೂಕಿನ ಮಣಗುತ್ತಿ ಗ್ರಾಮದಲ್ಲಿ ಉಂಟಾಗಿದ್ದ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆ ತೆರವು ವಿವಾದ ಬಗೆಹರಿದಿದೆ.
ಗ್ರಾಮದಲ್ಲಿ ಮಂಗಳವಾರ ಪೊಲೀಸ್ ಅಧಿಕಾರಿಗಳ ಸಮ್ಮುಖದಲ್ಲಿ ಸಭೆ ಸೇರಿದ್ದ ವಿವಿಧ ಸಮುದಾಯಗಳ ಮುಖಂಡರು, ಹೋದ ವರ್ಷ ಚರ್ಚೆಯಾಗಿದ್ದಂತೆ ಶಿವಾಜಿ, ಬಸವಣ್ಣ, ಡಾ.ಬಿ.ಆರ್. ಅಂಬೇಡ್ಕರ್, ವಾಲ್ಮೀಕಿ ಹಾಗೂ ಶ್ರೀಕೃಷ್ಣ ಪ್ರತಿಮೆಗಳನ್ನು ಏಕಕಾಲದಲ್ಲಿ ಪ್ರತಿಷ್ಠಾಪಿಸುವ ಬಗ್ಗೆ ತೀರ್ಮಾನಿಸಿದರು. ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಣಗುತ್ತಿ, ಬೊಶ್ಯಾನಹಟ್ಟಿ, ಬೆನಕನಹೊಳಿ ಮುಖಂಡರು ಪಾಲ್ಗೊಂಡಿದ್ದರು.
ಗ್ರಾಮದ ಹೊರವಲಯದ ಬಸವಣ್ಣ ಗುಡಿಯ ಸಮೀಪದ ಜಾಗದಲ್ಲಿ ಪ್ರತಿಷ್ಠಾಪನೆಗೆ ತೀರ್ಮಾನಿಸಲಾಯಿತು. ಸಭೆ ಬಳಿಕ ಪ್ರತಿಮೆಗಳನ್ನು ಪ್ರತಿಷ್ಠಾಪಿಸಲು ನಿಗದಿಪಡಿಸಿದ ಜಾಗದಲ್ಲಿ ಮುಖಂಡರು ಭೂಮಿ ಪೂಜೆಯನ್ನೂ ನೆರವೇರಿಸಿದರು

Read These Next

ಸಂವಿಧಾನದ ಆಶಯವನ್ನು ಎತ್ತಿಹಿಡಿಯುವಲ್ಲಿ ನ್ಯಾಯಾಂಗದ ಪಾತ್ರ ದೊಡ್ಡದು: ಮುಖ್ಯಮಂತ್ರಿ ಸಿದ್ದರಾಮಯ್ಯ

ಭಾರತದ ನ್ಯಾಯಾಂಗವು ಸಂವಿಧಾನದ ಆಶಯಗಳನ್ನು ಎತ್ತಿ ಹಿಡಿಯುವಲ್ಲಿ ಪ್ರಮುಖ ಪಾತ್ರ ವಹಿಸುತ್ತಾ ಬಂದಿದೆ. ಮೂಲಭೂತ ಹಕ್ಕುಗಳಿಗೆ ...

ವಿದ್ಯಾರ್ಥಿಗಳ ಗೊಂದಲಕ್ಕೆ ತೆರೆ: 5, 8, 9ನೇ ತರಗತಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅಸ್ತು!

ವಿದ್ಯಾರ್ಥಿಗಳ ಗೊಂದಲಕ್ಕೆ ತೆರೆ: 5, 8, 9ನೇ ತರಗತಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅಸ್ತು!

ಭಾಷಾ ಜ್ಞಾನದ ಕುರಿತು ಯಾರ ಬಗ್ಗೆಯೂ ಕೇವಲವಾಗಿ ಮಾತನಾಡಿಲ್ಲ: ಜೆ.ಪಿ.ಹೆಗ್ಡೆ ಸ್ವಷ್ಟನೆ

ಉಡುಪಿ: ಈವರೆಗಿನ ರಾಜಕೀಯ ಜೀವನದಲ್ಲಿ ಯಾರ ಮನಸ್ಸನ್ನೂ ನೋಯಿಸುವುದಾಗಲಿ ಅಥವಾ ಕೇವಲವಾಗಿ ಮಾತನಾಡುವುದನ್ನಾಗಲಿ ಮಾಡದೆ ಇರುವ ನಾನು ...