ರಂಗಭೂಮಿಯ ವೃತ್ತಿಪರತೆಯನ್ನು ಗಟ್ಟಿಗೊಳಿಸುವಲ್ಲಿ ಶಿವಮೊಗ್ಗ ರಂಗಾಯಣ ಹೆಜ್ಜೆ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ

Source: SO News | By Laxmi Tanaya | Published on 5th January 2021, 10:30 PM | State News | Don't Miss |

ಶಿವಮೊಗ್ಗ : ರಂಗಭೂಮಿಯ ವೃತ್ತಿಪರತೆಯನ್ನು ಗಟ್ಟಿಗೊಳಿಸುವ ನಿಟ್ಟಿನಲ್ಲಿ ಶಿವಮೊಗ್ಗ ರಂಗಾಯಣ ಕಳೆದ 10 ವರ್ಷಗಳಲ್ಲಿ ದೃಢವಾದ ಹೆಜ್ಜೆಯನ್ನು ಇರಿಸಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಹೇಳಿದರು.

 ಶಿವಮೊಗ್ಗ ರಂಗಾಯಣದ ನೂತನ ವೆಬ್‍ಸೈಟ್ ಅನಾವರಣಗೊಳಿಸಿ ಮಾತನಾಡಿದರು.
ಶಿವಮೊಗ್ಗ ರಂಗಾಯಣ ನಿರಂತರ ರಂಗ ಚಟುವಟಿಕೆಗಳ ಮೂಲಕ ರಂಗಾಸಕ್ತರನ್ನು ಸೆಳೆಯುತ್ತಿದೆ. ರಂಗಸಂಕ್ರಾತಿ ರಾಷ್ಟ್ರೀಯ ನಾಟಕೋತ್ಸವ, ವಿಶ್ವಮಾನವ ಅಂತಾರಾಷ್ಟ್ರೀಯ ರಂಗೋತ್ಸವ, ವಿಶ್ವರಂಗಭೂಮಿ ದಿನಾಚರಣೆ, ರೆಪರ್ಟರಿಯ ಹಲವಾರು ನಾಟಕಗಳನ್ನು ರಂಗತೇರು ಹೆಸರಿನಲ್ಲಿ ರಾಜ್ಯದಾದ್ಯಂತ ಪ್ರದರ್ಶನ ನಡೆಸಿದೆ. ಕೋವಿಡ್ ಹಿನ್ನೆಲೆಯಲ್ಲಿ ರಂಗ ಚಟುವಟಿಕೆಗಳಿಗೆ ಹಿನ್ನಡೆ ಉಂಟಾದರೂ ಆನ್‍ಲೈನ್ ಕಾರ್ಯಕ್ರಮಗಳ ಮೂಲಕ ರಂಗಚಟುವಟಿಕೆಗಳನ್ನು ಜೀವಂತವಾಗಿರಿಸಿರುವುದು ಪ್ರಶಂಸನೀಯ ಎಂದರು.

ರಂಗ ದಿಗ್ಗಜ ಬಿ.ವಿ.ಕಾರಂತರ ಕನಸಿನ ಕೂಸಾದ ರಂಗಾಯಣ ಮೈಸೂರಿನಿಂದ ಪ್ರಾರಂಭವಾಗಿ ಇಂದು ರಾಜ್ಯದ 4ಭಾಗಗಳಲ್ಲಿ ತನ್ನ ಶಾಖೆಯನ್ನು ವಿಸ್ತರಿಸಿಕೊಂಡಿದೆ. ಶಿವಮೊಗ್ಗದಲ್ಲಿ ರಂಗಾಯಣಕ್ಕೆ ಸುಸಜ್ಜಿತವಾದ ಸುವರ್ಣ ಸಾಂಸ್ಕøತಿಕ ಭವನವನ್ನು ಒದಗಿಸಲಾಗಿದ್ದು, ರಂಗ ಚಟುವಟಿಕೆಗಳಿಗೆ ಎಲ್ಲಾ ಪ್ರೋತ್ಸಾಹ ನೀಡಲಾಗುತ್ತಿದೆ ಎಂದರು.

ಶಿವಮೊಗ್ಗ ರಂಗಾಯಣ ನಿರ್ದೇಶಕ ಸಂದೇಶ ಜವಳಿ ಅವರು ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ, ಶಾಸಕ ಅರಗ ಜ್ಞಾನೇಂದ್ರ, ವಿಧಾನ ಪರಿಷತ್ ಸದಸ್ಯರಾದ ಆಯನೂರು ಮಂಜುನಾಥ, ರುದ್ರೇಗೌಡ, ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವೈಶಾಲಿ, ರಂಗಸಮಾಜದ ಸದಸ್ಯ ಹಾಲಸ್ವಾಮಿ ಮತ್ತಿತರರು ಉಪಸ್ಥಿತರಿದ್ದರು.

Read These Next

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...