ಕೊಳೆಗೇರಿ ನಿವಾಸಿಗಳಿಗೆ  600ಮನೆ ನಿರ್ಮಾಣ-ಆರ್.ರಮೇಶ್

Source: sonews | By Staff Correspondent | Published on 3rd November 2018, 8:06 PM | State News | Don't Miss |

ಶ್ರೀನಿವಾಸಪುರ:  ಕೊಳೆಗೇರಿ ನಿವಾಸಿಗಳಿಗೆ  600ಮನೆಗಳನ್ನು ನಿರ್ಮಿಸಿಕೊಡಲಾಗುತ್ತಿದೆ. ಮೂಲ ಸೌಕರ್ಯ ಒದಗಿಸಲು ಆದ್ಯತೆ ನೀಡಲಾಗಿದೆ ಎಂದು ವಿಧಾನಸಭಾಧ್ಯಕ್ಷ ಕೆ.ಆರ್‌.ರಮೇಶ್ ಕುಮಾರ್‌ ಹೇಳಿದರು.

ಪಟ್ಟಣದ ಕಟ್ಟೆ ಕೆಳಗಿನ ಪಾಳ್ಯದ ಕೊಳೆಗೇರಿಯಲ್ಲಿ ರಾಜ್ಯ ಕೊಳೆಗೇರಿ ಅಭಿವೃದ್ಧಿ ಮಂಡಳಿ ವತಿಯಿಂದ ಸರ್ವರಿಗೂ ಸೂರು ಯೋಜನೆಯಡಿ ಶುಕ್ರವಾರ ಏರ್ಪಡಿಸಿದ್ದ ಸಮಾರಂಭದಲ್ಲಿ ವಿಧಾನಸಭಾಧ್ಯಕ್ಷ ಕೆ.ಆರ್‌.ರಮೇಶ್‌ ಕುಮಾರ್‌ ಮನೆಗಳ ನಿರ್ಮಾಣ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿ,  ಅವರು ತಮ್ಮ ಮಕ್ಕಳ ಶಿಕ್ಷಣಕ್ಕೆ ಆದ್ಯತೆ ನೀಡಬೇಕು. ಶಿಕ್ಷಣದ ಮೂಲಕ ಉತ್ತಮ ಬದುಕು ಕಟ್ಟಿಕೊಳ್ಳಬೇಕು ಎಂದು ಹೇಳಿದರು.

ಮಂಜೂರಾಗಿರುವ 600 ಮನೆಗಳ ಪೈಕಿ ಕಟ್ಟೆ ಕೆಳಗಿನ ಪಾಳ್ಯಕ್ಕೆ 67, ಜಗಜೀವನ ಪಾಳ್ಯಕ್ಕೆ 148, ಜಾಕೀರ್‌ ಹುಸೇನ್‌ ಮೊಹಲ್ಲಾಗೆ 150, ಸಂತೆ ಮೈದಾನಕ್ಕೆ 184 ಹಾಗೂ ಅಂಬೇಡ್ಕರ್‌ ಪಾಳ್ಯಕ್ಕೆ 51 ಮನೆಗಳನ್ನು ಹಂಚಿಕೆ ಮಾಡಲಾಗಿದೆ. ಪ್ರತಿ ಮನೆಯನ್ನು ರೂ.4.90 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾಗುವುದು. ಮನೆಗಳ ನಿರ್ಮಾಣದ ಒಟ್ಟು ವೆಚ್ಚ ರೂ.38 ಕೋಟಿ ಆಗುತ್ತದೆ ಎಂದು ಹೇಳಿದರು.

ಗುತ್ತಿಗೆದಾರರು ಗುಣಮಟ್ಟದ ಕೆಲಸ ಮಾಡಬೇಕು. ಸ್ವಚ್ಛತೆ ಕಾಪಾಡಲು ಅನುಕೂಲವಾಗುವಂತೆ ರಸ್ತೆ, ಚರಂಡಿ, ಶೌಚಾಲಯ ಹಾಗೂ ಕುಡಿಯುವ ನೀರು ಸರಬರಾಜು ವ್ಯವಸ್ಥೆ ಮಾಡಬೇಕು. ಇನ್ನೂ 100 ಮನೆಗಳ ಅಗತ್ಯವಿದ್ದು, ಮುಂದೆ ನಿರ್ಮಿಸಿಕೊಡಲಾಗುವುದು. ಫಲಾನುಭವಿಗಳಿಗೆ ಮನೆಯ ಖಾತೆ ಮಾಡಿಕೊಡಲಾಗುವುದು ಎಂದು ಹೇಳಿದರು.

ಪಟ್ಟಣದ ಕ್ರೀಡಾಂಗಣದ ಸಮೀಪ ನಿವೇಶನ ರಹಿತರಿಗೆ ನಿವೇಶನ ವಿತರಿಸಲು ನಿರ್ಧರಿಸಲಾಗಿತ್ತು. ಆದರೆ ಕೆಲವರು ಈ ಬಗ್ಗೆ ನ್ಯಾಯಾಲಯದ ಮೆಟ್ಟಲು ಹತ್ತಿದ್ದಾರೆ. ಸಮಸ್ಯೆ ಇತ್ಯರ್ಥವಾದ ಕೂಡಲೆ ಅರ್ಹ ಫಲಾನುಭವಿಗಳಿಗೆ ನಿವೇಶನ ಮಂಜೂರು ಮಾಡಲಾಗುವುದು. ಜಾತಿ, ಮತ, ಪಕ್ಷ ಭೇದವಿಲ್ಲದೆ ಅರ್ಹ ಫಲಾನುಭವಿಗಳನ್ನು ಗುರುತಿಸಿ ಸರ್ಕಾರದ ಸೌಲಭ್ಯ ನಿಡಲಾಗುತ್ತಿದೆ ಎಂದು ಹೇಳಿದರು.

‘ಕ್ಷೇತ್ರದಲ್ಲಿ ಯಾವುದೇ ಚುನಾವಣೆ ಇಲ್ಲದಿದ್ದರೂ, ಅಭಿವೃದ್ಧಿ ಕಾರ್ಯ ನಿಲ್ಲುವುದಿಲ್ಲ. ಬಡವರು ಗೌರವದಿಂದ ಬದುಕುವ ಪರಿಸರ ಕಲ್ಪಿಸುವುದು ನನ್ನ ಗುರಿ. ಯಾರನ್ನೂ ಟೀಕಿಸುವುದಿಲ್ಲ. ಬಡವರ ಅಭಿವೃದ್ಧಿಗಾಗಿ ಶಕ್ತಿ ಮೀರಿ ಶ್ರಮಿಸುತ್ತೇನೆ’ ಎಂದು ಹೇಳಿದರು.

ಜಿಲ್ಲಾ ಪಂಚಾಯಿತಿ ಸದಸ್ಯ ಮ್ಯಾಕಲ ನಾರಾಯಣಸ್ವಾಮಿ, ಪಿಎಲ್‌ಡಿ ಬ್ಯಾಂಕ್‌ ಅಧ್ಯಕ್ಷ ದಿಂಬಾಲ ಅಶೋಕ್, ರಾಜ್ಯ ಮಾವು ಅಭಿವೃದ್ಧಿ ಮಂಡಳಿ ಮಾಜಿ ಅಧ್ಯಕ್ಷ ಎಲ್‌.ಗೊಪಾಲಕೃಷ್ಣ, ಎಪಿಎಂಸಿ ಅಧ್ಯಕ್ಷ ಎನ್‌.ರಾಜೇಂದ್ರ ಪ್ರಸಾದ್‌, ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷರಾದ ಅಕ್ಬರ್‌ ಷರೀಫ್‌, ಸಂಜಯ್‌ ರೆಡ್ಡಿ, ಮುಖಂಡರಾದ ಆಲವಟ್ಟ ಮಂಜುನಾಥರೆಡ್ಡಿ, ಜಿ.ಗೋವಿಂದಗೌಡ, ಬಿ.ಎಲ್‌.ರಾಮಣ್ಣ, ಎಲ್‌.ವಿ.ಗೋವಿಂದಪ್ಪ, ಬಿ.ಎಲ್‌.ಪ್ರಕಾಶ್‌, ಮುಕ್ತಿಯಾರ್ ಅಹ್ಮದ್‌, ಕೃಷ್ಣೇಗೌಡ, ಆರ್‌.ಎನ್‌.ಚಂದ್ರಶೇಖರ್‌, ಚಂದ್ರೇಗೌಡ, ಸಹಾಯಕ ಕಾರ್ಯಪಾಲಕ ಎಂಜಿನಿಯರ್‌ ಸುಬ್ರಮಣಿ, ಸಹಾಯಕ ಎಂಜಿನಿಯರ್ ರಾಜ್‌ಕುಮಾರ್ ಇದ್ದರು.

Read These Next

'ಚುನಾವಣಾ ಬಾಂಡ್' ವಿಶ್ವದ ದೊಡ್ಡ ಹಗರಣ; ಬಿಜೆಪಿ ವಿರುದ್ಧ ರಾಹುಲ್‌ ಗಾಂಧಿ ವಾಗ್ದಾಳಿ

ಬಿಜೆಪಿಯ ಚುನಾ ವಣಾ ಬಾಂಡ್ ವಿಶ್ವದ ಅತ್ಯಂತ ದೊಡ್ಡ ಹಗರಣವಾಗಿದ್ದು, ಗೂಂಡಾಗಳ ರೀತಿಯಲ್ಲಿ ಕೆಲವು ಉದ್ಯಮಿಗಳನ್ನು ಬೆದರಿಸಿ ಹಫ್ತಾ ...

ಸಂವಿಧಾನ ಮತ್ತು  ಪ್ರಜಾಪ್ರಭುತ್ವ ಉಳಿಸುವುದಕ್ಕೆ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ಎಂದು ರಾಹುಲ್ ಗಾಂಧಿ ಕರೆ

ಮಾಲೂರು : ಈ ಲೋಕಸಭೆ ಚುನಾವಣೆಯು ಎರಡು ಸಿದ್ಧಾಂತಗಳ ನಡುವಿನ ಯುದ್ಧ ಇಂಡಿಯಾ ಬಣ ಒಂದು ಕಡೆ "ಸಂವಿಧಾನಕ್ಕಾಗಿ ಹೋರಾಟ" ನಡೆಸುತ್ತಿದೆ ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...