ಮಹಿಳೆಯರ ತ್ಯಾಗ ಹಾಗೂ ಪರಿಶ್ರಮ ಪರಿಗಣಿಸಿ ವಿಶೇಷ ಗೌರವ

Source: sonews | By Staff Correspondent | Published on 31st March 2019, 10:01 PM | State News |

ಶ್ರೀನಿವಾಸಪುರ: ಸಮಾಜ ಹಾಗೂ ಕೌಟುಂಬಿಕ ವ್ಯವಸ್ಥೆಯಲ್ಲಿ ಮಹಿಳೆಯರ ತ್ಯಾಗ ಹಾಗೂ ಪರಿಶ್ರಮವನ್ನು ಪರಿಗಣಿಸಿ ವಿಶೇಷ ಗೌರವ ನೀಡಬೇಕು. ಮಹಿಳಾ ದಿನಾಚರಣೆಯನ್ನು ಪುರುಷರೇ ಆಚರಿಸಬೇಕು ಎಂದು ಜೆಎಂಎಫ್‌ಸಿ ನ್ಯಾಯಾಲಯದ ಪ್ರಧಾನ ಸಿವಿಲ್‌ ನ್ಯಾಯಾಧೀಶ ಮಹಮದ್‌ ರೋಷನ್‌ ಷಾ ಹೇಳಿದರು.

ಪಟ್ಟಣದ ನ್ಯಾಯಾಲಯದ ಆವರಣದಲ್ಲಿ ತಾಲ್ಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ, ಸಿಡಿಪಿಒ ಕಚೇರಿ ಹಾಗೂ ಪೊಲೀಸ್‌ ಇಲಾಖೆ ವತಿಯಿಂದ ಏರ್ಪಡಿಸಿದ್ದ ‘ವಿಶ್ವ ಮಹಿಳಾ ದಿನಾಚರಣೆ, ಜಲ ದಿನಾಚರಣೆ, ಗ್ರಾಹಕರ ದಿನಾಚರಣೆ ಹಾಗೂ ಕಾನೂನು ಅರಿವು ನೆರವು ಕಾರ್ಯಕ್ರಮ’ದಲ್ಲಿ ಮಾತನಾಡಿದರು.

ಸಂವಿಧಾನ ಪುರುಷ ಹಾಗೂ ಮಹಿಳೆಯರಿಗೆ ಸಮಾನ ಸ್ಥಾನಮಾನ ನೀಡಿದೆ. ಆದರೆ ಪುರಷ ಪ್ರಧಾನ ಸಮಾಜದಲ್ಲಿ ಮಹಿಳೆಯರ ಮೇಲೆ ದೌರ್ಜನ್ಯ ನಿಂತಿಲ್ಲ. ಇದಕ್ಕೆ ಹೆಣ್ಣು ಮಕ್ಕಳಲ್ಲಿ ಶಿಕ್ಷಣದ ಕೊರತೆ ಕಾರಣವಾಗಿದೆ. ಪೋಷಕರು ತಮ್ಮ ಹೆಣ್ಣು ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವುದರ ಮೂಲಕ ಶೋಷಣೆಯಿಂದ ಮುಕ್ತಗೊಳಿಸಬೇಕು. ಭ್ರೂಣ ಹತ್ಯೆ ನಿಲ್ಲಬೇಕು ಎಂದು ಹೇಳಿದರು.

ನೀರನ್ನು ಮಿತವಾಗಿ ಬಳಸಬೇಕು. ಯಾವುದೇ ಕಾರಣಕ್ಕೂ ಪೋಲು ಮಾಡಬಾರದು. ಜೀವ ಜಲ ಪ್ರಾಣಿ, ಪಕ್ಷಿಗಳಿಗೂ ಸಿಗುವಂತೆ ನೋಡಿಕೊಳ್ಳಬೇಕು. ಗ್ರಾಹಕರು ಎಚ್ಚರದಿಂದ ವ್ಯವಹಾರ ಮಾಡಬೇಕು. ತಾವು ಖರೀದಿಸಿದ ವಸ್ತು ಕಳಪೆ ಮಟ್ಟದ್ದಾಗಿದ್ದಲ್ಲಿ ಗ್ರಾಹಕರ ವೇದಿಕೆಯಿಂದ ನ್ಯಾಯ ಪಡೆದುಕೊಳ್ಳಬೇಕು ಎಂದು ಹೇಳಿದರು.

ವಕೀಲರ ಸಂಘದ ಅಧ್ಯಕ್ಷ ಎಸ್‌.ವಿ.ಜಯರಾಮೇಗೌಡ ಮಾತನಾಡಿ, ಅರ್ಹ ವ್ಯಕ್ತಿಗಳು ನ್ಯಾಯಾಲಯದ ವಿವಿಧ ಯೋಜನೆಗಳ ಪ್ರಯೋಜನ ಪಡೆಯಬೇಕು. ಶೋಷಣೆ ಇಲ್ಲದ ಸಮಾಜ ನಿರ್ಮಾಣಕ್ಕೆ ಎಲ್ಲರೂ ಸಹಕರಿಸಬೇಕು. ಅದರಲ್ಲೂ ಮಹಿಳೆಯರ ತ್ಯಾಗವನ್ನು ಮರೆಯಬಾರದು ಎಂದರು.

ವಿಶ್ವ ಜಲ ದಿನಾಚರಣೆ ಬಗ್ಗೆ ವಕೀಲ ಕೆ.ಶಿವಪ್ಪ ಮಾತನಾಡಿದರು. ವಿಶ್ವ ಮಹಿಳಾ ದಿನಾಚರಣೆ ಕುರಿತು ತಾಲ್ಲೂಕು ದಾಸ ಸಾಹಿತ್ಯ ಪರಿಷತ್ತಿನ ಅಧ್ಯಕ್ಷೆ ಮಾಯಾ ಬಾಲಚಂದ್ರ ಉಪನ್ಯಾಸ ನೀಡಿದರು. ವಿಶ್ವ ಗ್ರಾಹಕರ ದಿನಾಚರಣೆ ಬಗ್ಗೆ ವಕೀಲೆ ಕೆ.ವಿ.ರೂಪಶ್ರೀ ಮಾತನಾಡಿದರು.

ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ಕೆ.ಎಸ್‌.ಶ್ರೀನಿವಾಸ್‌, ವಕೀಲ ಟಿ.ವಿ.ವೆಂಕಟೇಶ್‌, ರಾಜಗೋಪಾಲರೆಡ್ಡಿ, ಸಿಡಿಪಿಒ ನಾನಮ್ಮ ಇದ್ದರು.

ಕೋಲಾರ ಜಿಲ್ಲೆ ಜಲ ಕ್ಷಾಮ ಎದುರಿಸುತ್ತಿದೆ. ಅಂತರ್ಜಲ ಕುಸಿತ ಹಲವು ಸಮಸ್ಯೆಗಳನ್ನು ತಂದೊಡ್ಡಿದೆ. ಇಂಥ ಸಂದರ್ಭದಲ್ಲಿ ಲಭ್ಯವಿರುವ ನೀರನ್ನು ಮಿತವಾಗಿ ಬಳಿಸಿ ನಾಗೇಶ್ ನಾಯ್ಕ, ಅಪರ ಸಿವಿಲ್‌ ನ್ಯಾಯಾಧೀಶ.

ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ 

Read These Next

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಗದಗ: ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ ಭೇದಿಸಿದ ಪೊಲೀಸರು; ಸುಪಾರಿ ನೀಡಿದ ಮನೆಮಗ ಸಹಿತ 8 ಮಂದಿಯ ಬಂಧನ

ಮೂರು ದಿನಗಳ ಹಿಂದೆ ಗದಗದಲ್ಲಿ ನಡೆದಿದ್ದ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣವನ್ನು ಭೇದಿಸಿರುವ ಪೊಲೀಸರು ಎಂಟು ಮಂದಿ ...