ಜಲಸಂವರ್ಧನೆ ಪರಿಣಾಮಕಾರಿ ಅನುಷ್ಠಾನಕ್ಕೆ ಶ್ವೇತಾ ದೇವರಾಜ್ ಸೂಚನೆ

Source: so news | By MV Bhatkal | Published on 12th June 2019, 7:49 PM | Coastal News | Don't Miss |

ಹಾಸನ:ಸರ್ಕಾರದ ಮಹತ್ವಾಕಾಂಕ್ಷೆಯ ಸ್ವಚ್ಚ ಮೇವ ಜಯತೆ ಹಾಗೂ ಜಲಾಮೃತ ಯೋಜನೆಗಳಿಗೆ ಅಧಿಕೃತವಾಗಿ ಇಂದು ಚಾಲನೆ ದೊರೆಕಿದೆ.
ಶಾಂತಿಗ್ರಾಮ ಬಳಿಯ ಮಡೆನೂರಿನ ಕೃಷಿ ಮಹಾವಿದ್ಯಾಲಯದಲ್ಲಿ ಸಂಶೋಧನಾ ಕೇಂದ್ರದ ಆವರಣದಲ್ಲಿಂದು ಜಿಲ್ಲಾ ಪಂಚಾಯಿತಿಯ ಅಧ್ಯಕ್ಷರಾದ ಶ್ವೇತಾ ದೇವರಾಜ್, ಉಪಾಧ್ಯಕ್ಷರಾದ ಹೆಚ್.ಪಿ.ಸ್ವರೂಪ್, ಜಿಲ್ಲಾಧಿಕಾರಿಯವರಾದ ಅಕ್ರಂ ಪಾಷಾ, ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಾಹಕಾಧಿಕಾರಿಯವರಾದ ಡಾ.ಕೆ.ಎನ್.ವಿಜಯ್ ಪ್ರಕಾಶ್, ಅರಣ್ಯ ಸಂರಕ್ಷಣಾಧಿಕಾರಿ ಸಿವರಾಂ ಬಾಬು, ಉಪವಿಭಾಗಾಧಿಕಾರಿ ಡಾ.ಎಚ್.ಎಲ್.ನಾಗರಾಜ್ ಕೃಷಿ ಮಹಾವಿದ್ಯಾಲಯದ ಡೀನ್‍ರಾದ ದೇವಕುಮಾರ್ ಮತ್ತಿತರರು ಗಿಡಗಳನ್ನು ನೆಡುವುದರ ಮೂಲಕ ಈ ಯೋಜನೆಗೆ ಚಾಲನೆ ನೀಡಿದರು.
ತದನಂತರ ನಡೆದ ವೇದಿಕೆ ಕಾರ್ಯಕ್ರಮದಲ್ಲಿ ಮಾತನಾಡಿದ ಜಿಲ್ಲಾ ಪಂಚಾಯಿತಿ ಅಧ್ಯಕ್ಷರಾದ ಶ್ವೇತಾ ದೇವಾರಾಜು ನೀರಿನ ಅಸಮರ್ಪಕ ನಿರ್ವಹಣೆಯಿಂದ ಭೂಮಿ ಬರಿದಾಗುತ್ತಿದೆ. ಈಗಾಲಾದರೂ ಜಾಗೃತರಾಗಿ ಪ್ರತಿಯೊಬ್ಬರೂ ಜಲ ಸಂರಕ್ಷಣೆ ಹಾಗೂ ಸಾಕ್ಷರತೆಗೆ ನೆರವಾಗಬೇಕು ಎಂದು ತಿಳಿಸಿದರು.
ಪರಿಸರಕ್ಕೆ ಅಪಾಯ ಎದುರಾಗಿರುವ ಈ ಸಂದರ್ಭದಲ್ಲಿ ಎಲ್ಲಾ ಇಲಾಖೆಗಳ ಕಾರ್ಯಕ್ರಮಗಳನ್ನು ಸಂಯೋಜಿಸಿ, ಜಲಸಂವರ್ಧನೆ ಯೋಜನೆಯನ್ನು ಅತ್ಯಂತ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ಅಗತ್ಯವಿದೆ ಎಂದು ಅವರು ತಿಳಿಸಿದರು.
ಪ್ರತಿಯೊಂದು ನಗರ, ಪಟ್ಟಣ, ಗ್ರಾಮ ಮತ್ತು ಮನೆಗಳಲ್ಲಿ ಘನ ಹಾಗೂ ದ್ರವ ತ್ಯಾಜ್ಯಗಳ ವ್ಯವಸ್ಥಿತ ನಿರ್ವಹಣೆ ಮೂಲಕ ಪರಿಸರ ಸ್ವಚ್ಚತೆ ಕಾಪಾಡಬೇಕು ಆ ಮೂಲಕ ಎಲ್ಲರೂ ತಮ್ಮ ಸಾಮಾಜಿಕ ಜವಾಬ್ದಾರಿಯನ್ನು ಪ್ರದರ್ಶಿಸಬೇಕು ಎಂದು ತಿಳಿಸಿದರು. 
ಜಿಲ್ಲಾಧಿಕಾರಿ ಅಕ್ರಂ ಪಾಷಾ ಅವರು ಮಾತನಾಡಿ ದೇಶದಲ್ಲಿ ಸ್ವಚ್ಚತೆ ಮತ್ತು ಜಲಮೂಲಗಳ ಸಂರಕ್ಷಣೆಯ ಮಹತ್ವ ಮತ್ತು ಅನಿವಾರ್ಯಗಳನ್ನು ಮನಗಂಡಿರುವ ಸರ್ಕಾರಗಳು ಇದಕ್ಕೆ ಆಂದೋಲನದ ರೂಪ ನೀಡಿವೆ. ಸಾರ್ವಜನಿಕರೂ ಇದರಲ್ಲಿ ಕೈ ಜೋಡಿಸಬೇಕಿವೆ ಎಂದರು. 
ಪರಿಸರದ ಸಂರಕ್ಷಣೆ ಮತ್ತು ಜಲಸಂವರ್ಧನೆ ನಮ್ಮ ಆದ್ಯತೆ ಮ್ತತು ಧ್ಯೇಯವಾಗಬೇಕು. ಪ್ರತಿಯೊಬ್ಬರೂ ಜೀವನದಲ್ಲಿ ಇದನ್ನು ಅಳವಡಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಅವರು ಹೇಳಿದರು.
ನಮ್ಮ ಪೀಳಿಗೆ, ಪರಿಸರವನ್ನು ಅತ್ಯಂತ ಹೆಚ್ಚು ಹಾನಿ ಮಾಡಿದ್ದು ಈಗಾದರೂ ಅದನ್ನು ಸರಿಪಡಿಸುವ ಪ್ರಯತ್ನ ಪ್ರಾರಂಭಿಸಬೇಕು. ಸರ್ಕಾರ ಅಂಜರ್ತಲದ ವೃದ್ದಿ ಹಾಗೂ ಜಲಸಂರಕ್ಷಣೆಗೆ ಜಲಾಮೃತ ಯೋಜನೆ ಜಾರಿಗೆ ತಂದಿದ್ದು ಸಮುದಾಯದ ಸಹಭಾಗಿತ್ವದೊಂದಿಗೆ ಇದನ್ನು ವ್ಯವಸ್ಥಿತವಾಗಿ ಅನುಷ್ಠಾನಗೊಳಿಸಲಾಗಿದೆ ಎಂದು ಜಿಲ್ಲಾಧಿಕಾರಿ ಅಕ್ರಂ ಪಾಷ ಅವರು ತಿಳಿಸಿದರು.
ಜಾಗತಿಕ ಮಟ್ಟಕ್ಕೆ ಬೆಳೆಯುತ್ತಿರುವ ತಂತ್ರಜ್ಞಾನಗಳನ್ನು ಸದ್ಬಳಕೆ ಮಾಡಿ ಬೆಳವಣಿಗೆಗಳೊಂದಿಗೆ ಪರಿಸರ ಮತ್ತು ನೀರನ್ನು ಸಂರಕ್ಷಿಸುವುದರ ಮೂಲಕ ಮುಂದಿನ ಪೀಳಿಗೆಯನ್ನು ಕಾಪಾಡೋಣ ಎಂದರು.
ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಡಾ.ಕೆ.ಎನ್ ವಿಜಯ್ ಪ್ರಕಾಶ್ ಅವರು ಮಾತನಾಡಿ ಜನರ ಮನ ಪರಿವರ್ತನೆಯಿಂದ ಮಾತ್ರ ಬದಲಾವಣೆ ಸಾದ್ಯ ಎಂದರು.
ನೀರಿನ ಬಗ್ಗೆ ಅರಿವು, ಸಂರಕ್ಷಣೆ ಹೊಸ ಜಲಮೂಲಗಳ ಸೃಷ್ಠಿ ಮತ್ತು ಹಸಿರು ಹೊದಿಕೆಯನ್ನು ಹೆಚ್ಚಿಸುವುದಕ್ಕೆ ಸಮುದಾಯದ ಸಹಭಾಗಿತ್ವವನ್ನು ಖಾತ್ರಿಪಡಿಸುವ ಮೂಲಕ ಜಲಾಮೃತ ಎಂಬ ಈ ಆಂದೋಲನವು ನೀರಿನ ಬಳಕೆಯಲ್ಲಿ ಪ್ರಜ್ಞಾಪೂರ್ವಕ ಬದವಾಲಣೆಯನ್ನು ತಂದು ನಾಡಿನ ಜನತೆಯಲ್ಲಿ ಜಾಗೃತ ಮತ್ತು ಸುಸ್ಥಿರ ಜಲಸಂಸ್ಕøತಿಯ ನಿರ್ಮಾಣಕ್ಕೆ ಅನುವು ಮಾಡಿಕೊಡುತ್ತಿದೆ ಎಂದು ಅವರು ಹೇಳಿದರು.
ಪ್ರತಿಯೊಬ್ಬರೂ ನೀರಿನ ಜಾಗೃತಿ ಮತ್ತು ದಕ್ಷ ಉಪಯೋಗವನ್ನು ಪ್ರೋತ್ಸಾಹಿಸಬೇಕು, ಜಲ ಸುಸ್ಥಿರತೆಗೆ ಅರಣ್ಯೀಕರಣವನ್ನು ಒಂದು ಸಾಮೂಹಿಕ ಆಂದೋಲನವಾಗಿ ಮಾಡಬೇಕು. ಮುಂದಿನ ತಿಂಗಳ ಕಾಲ ತಾಲ್ಲೂಕು ಮತ್ತು ಗ್ರಾಮ ಪಂಚಾಯಿತಿ ಹಂತದಲ್ಲಿ ವಿವಿಧ ಜನ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಪ್ರತಿಯೊಂದು ಗ್ರಾಮದಲ್ಲೂ ಸ್ವಚ್ಚತೆಯ ವಾತಾವರಣವನ್ನು ನಿರ್ಮಾಣ ಮಾಡಬೇಕಿದೆ. ಎಂದರು.
ಈ ಬಾರಿ ಒಟ್ಟು 45.40 ಲಕ್ಷ ಸಸಿಗಳನ್ನು ನೆಡುವುದು ನಮ್ಮ ಗುರಿಯಾಗಿದೆ. ಜಿಲ್ಲಾ ಪಂಚಾಯಿತಿ ವತಿಯಿಂದ 96 ಸಣ್ಣ ನೀರಾವರಿ, 250 ಕೆರೆಗಳನ್ನು ಹೂಳೆತ್ತುವ ಕಾರ್ಯ ನಡೆಯುತ್ತಿದೆ. ಪ್ರತಿಯೊಂದು ಗ್ರಾಮ ಪಂಚಾಯಿತಿಗಳಲ್ಲಿ ಬಹು ಕಮಾನಿನ ಅಣೆಕಟ್ಟುಗಳನ್ನು ನಿರ್ಮಿಸಲು ಕ್ರಮ ಕೈಗೊಂಡಿದ್ದು 1335 ಕ್ಕೂ ಅಧಿಕ ಚೆಕ್ ಡ್ಯಾಂಗಳನ್ನು ನಿರ್ಮಿಸುವ ಗುರಿ ಹೊಂದಿದೆ ಎಂದು ತಿಳಿಸಿದರು.
ಉಪವಿಭಾಗಾದಿಕಾರಿ ಡಾ.ಎಚ್.ಎಲ್.ನಾಗರಾಜ್ ಮಾತನಾಡಿ ಅಂತರ್ಜಲ ಸಂರಕ್ಷಣೆ ಕೆರೆಗಳ ಪುನಶ್ಚೇತನ ಹಾಗೂ ಜಲ ಮರು ಪೂರ್ಣಕ್ಕೆ ಜಲಾಮೃತ ಯೋಜನೆ ವರದಾನವಾಗಿದೆ. ಈಗಾಗಲೇ ಅನೇಕ ಕೆರೆಗಳನ್ನು ಈ ಯೋಜನೆಯಡಿ ಕೈಗೆತ್ತಿಕೊಳ್ಳಲಾಗಿದ್ದು, ಪ್ರತಿ ಗ್ರಾಮದಲ್ಲಿ ಸಾರ್ವಜನಿಕರು ಈ ಕಾರ್ಯದಲ್ಲಿ ತೊಡಗಿ ಭೂ ದೇವಿಗೆ ತಮ್ಮ ಕೊಡುಗೆ ನೀಡಬೇಕು ಎಂದರು.
ತಾಲ್ಲೂಕು ಪಂಚಾಯಿತಿ ಅಧ್ಯಕ್ಷರಾದ ನಿಂಗೇಗೌಡ, ಜಿಲ್ಲಾ ಪಂಚಾಯಿತಿ ಸದಸ್ಯರಾದ ಹನುಮೇಗೌಡ, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಪುಟ್ಟಸ್ವಾಮಿ, ಉಪಅರಣ್ಯ ಸಂರಕ್ಷಣಾಧಿಕಾರಿ ಸಿವರಾಂ ಬಾಬು ಮತ್ತಿತರರು ಜಲ, ಪರಿಸರ ಸಂರಕ್ಷಣೆ ಹಾಗೂ ಸ್ವಚ್ಚತೆಯ ಬಗ್ಗೆ ಮಾತನಾಡಿದರು.
ಇದೇ ವೇಳೆ ಸ್ವಚ್ಚತೆ ಹಾಗೂ ಪರಿಸರ ಸಂರಕ್ಷಣೆ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು ಹಾಗೂ ಬಿತ್ತಿಚಿತ್ರವನ್ನು ಬಿಡುಗಡೆಗೊಳಿಸಲಾಯಿತು.
ಶ್ರದಾಂಜಲಿ ಕಾರ್ಯಕ್ರಮದಲ್ಲಿ ಜ್ಞಾನ ಪೀಠ ಪ್ರಶಸ್ತಿ ಪುರಸ್ಕøತರಾದ ದಿವಂಗತ ಗಿರೀಶ್ ಕಾರ್ನಾಡ್ ಅವರ ಗೌರವಾರ್ಥ ಮೌನಾಚರಣೆ ಮಾಡಿ ಶ್ರದ್ದಾಂಜಲಿ ಸಮರ್ಪಿಸಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷರಾದ ಸ್ವರೂಪ್, ಜಿಲ್ಲಾ ಪಂಚಾಯಿತಿಯ ಯೋಜನಾಧಿಕಾರಿ ಅರುಣ್ ಕುಮಾರ್, ಮುಖ್ಯ ಯೋನಜಾಧಿಕಾರಿ ಪರಪ್ಪಸ್ವಾಮಿ, ತಾಲ್ಲೂಕು ಪಂಚಾಯಿತಿ ಸದಸ್ಯರಾದ ಸುರೇಂದ್ರ ಹಾಜರಿದ್ದರು.

Read These Next

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...