ದೆಹಲಿ ರೈತರ ಚಳುವಳಿ ಬೆಂಬಲಿಸಿ ವೆಲ್ಫೇರ್ ಪಾರ್ಟಿ ಸಹಿ ಸಂಗ್ರಹ ಅಭಿಯಾನ

Source: SOnews | By Staff Correspondent | Published on 25th January 2021, 12:00 AM | Coastal News | Don't Miss |

ಭಟ್ಕಳ: ಕೇಂದ್ರದ ಕರಾಳ ಕೃಷಿ ಕಾನೂನು ವಿರೋಧಿಸಿ ಕಳೆದ ಹಲವಾರು ದಿನಗಳಿಂದ ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತ ಹೋರಾಟ ಬೆಂಬಲಿಸಿ ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ಕರ್ನಾಟಕ ರಾಜ್ಯದ್ಯಂತ ಆರಂಭಿಸಿರುವ ಸಹಿ ಸಂಗ್ರಹ ಅಭಿಯಾನಕ್ಕೆ ರವಿವಾರ ಭಟ್ಕಳದ ಸಂತೆ ಮಾರುಕಟ್ಟೆಯಲ್ಲಿ ಉ.ಕ.ಜಿಲ್ಲಾಧ್ಯಕ್ಷ ಡಾ.ನಸೀಮ್ ಖಾನ್ ಚಾಲನೆ ನೀಡಿದರು. 

ನಂತರ ಮಾತನಾಡಿದ ಅವರು, ದೆಹಲಿಯ ಮೈನಸ್ ಡಿಗ್ರಿ ಚಳಿಯನ್ನು ಲೆಕ್ಕಿಸದೆ ಕಳೆದ ಎರಡು ತಿಂಗಳಿOದ ರೈತು ಕೇಂದ್ರದ ಕೃಷಿ ಕಾನೂನು ವಿರೋಧಿಸಿ ನಡೆಸುತ್ತಿರುವ ಹೋರಾಟಕ್ಕೆ ವೆಲ್ಫೇರ್ ಪಾರ್ಟಿ ಸಂಪೂರ್ಣ ಬೆಂಬ ನೀಡುತ್ತಿದ್ದು ಕೇಂದ್ರದ ಕರಾಳ ಕಾನೂನುಗಳನ್ನು ಹಿಂಪಡೆಯುವAತೆ ಆಗ್ರಹಿಸುತ್ತದೆ  ಎಂದರು. ಕೇಂದ್ರ ಸರ್ಕಾರ ದೇಶದ ರೈತರ ಹಿತ ಕಾಪಾಡುವ ಬದುಲು ಅವರನ್ನು ಬೀದಿಗೆ ತಳ್ಳುತ್ತಿದೆ ಎಂದು ಆರೋಪಿಸಿದ ಅವರು, ರೈತರನ್ನು ಬೆಂಬಲಿಸಿ ಹಾಗೂ ಕಾನೂನು ವಿರೋಧಿಸಿ ವೆಲ್ಫೇರ್ ಪಾರ್ಟಿ ರಾಜ್ಯಾದ್ಯಂತ ಸಿಗ್ನಿಚರ್ ಕ್ಯಾಂಪೇನ್ ನಡೆಸುತ್ತಿದೆ ಎಂದರು. 

ಮುಖಂಡ ಅಬ್ದುಲ್ ಜಬ್ಬಾರ್ ಅಸದಿ ಮಾತನಾಡಿ, ರೈತರು ಕೆಂದ್ರ ಸರ್ಕಾರದ ಕರಾಳ ಕಾನೂನು ವಿರೋಧಿಸಿ ನಡೆಸುತ್ತಿರುವ ಹೋರಾಟವನ್ನು ನಾವು ಬೆಂಬಲಿಸುತ್ತೇವೆ. ಇದಕ್ಕಾಗಿ ಸಾರ್ವಜನಿಕರಿಂದ ಸಹಿ ಸಂಗ್ರಹ ನಡೆಸಲಾಗುತ್ತಿದ್ದು ಭಟ್ಕಳದಲ್ಲಿ ಸುಮಾರು ೨೦೦೦ಕ್ಕೂ ಅಧಿಕ ಸಹಿ ಸಂಗ್ರಹಿಸುವ ಗುರಿ ಹೊಂದಿದೆ ಎಂದರು. 
ಈ ಸಂದರ್ಭದಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ  ಆಸಿಫ್ ಶೇಖ್, ಉಪಾಧ್ಯಕ್ಷ ಶೌಕತ್ ಖತೀಬ್, ಸೇರಿದಂತೆ ಪಕ್ಷದ ಮುಖಂಡರು ಕಾರ್ಯಕರ್ತರು ಉಪಸ್ಥಿತರಿದ್ದರು. 
 

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...