ಗಾಯಕಿಯ ಅತ್ಯಾಚಾರ ಪ್ರಕರಣ; ಮಾಜಿ ಶಾಸಕ ವಿಜಯ್ ಮಿಶ್ರಾಗೆ 15 ವರ್ಷಗಳ ಕಾರಾಗೃಹ ಶಿಕ್ಷೆ

Source: Vb | By I.G. Bhatkali | Published on 5th November 2023, 8:50 AM | National News |

ಲಕ್ನು: ಇಪ್ಪತ್ತೆಂಟು ವರ್ಷದ ಗಾಯಕಿಯ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಾಜಿ ಶಾಸಕ ವಿಜಯ್ ಮಿಶ್ರಾಗೆ ಭದೋಹಿಯ ವಿಶೇಷ ಎಂಪಿ-ಎಂಎಲ್‌ಎ ನ್ಯಾಯಾಲಯ 15 ವರ್ಷ ಜೈಲು ಶಿಕ್ಷೆ ಹಾಗೂ 1 ಲಕ್ಷ ರೂ. ದಂಡ ವಿಧಿಸಿ ತೀರ್ಪು ನೀಡಿದೆ.

ಜ್ಞಾನಪುರ ಕ್ಷೇತ್ರದ ಶಾಸಕರಾಗಿ ನಾಲ್ಕು ಬಾರಿ ಆಯ್ಕೆಯಾಗಿದ್ದ ಮಿಶ್ರಾ ಅವರು ಸಮಾಜವಾದಿ ಪಕ್ಷದ ಮಾಜಿ ಸದಸ್ಯ. ಪ್ರಸಕ್ತ ಅವರು ಆಗ್ರಾ ಕಾರಾಗೃಹದಲ್ಲಿ ಇದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿ ಭದೋಹಿ ನ್ಯಾಯಾಲಯ ಮಿಶ್ರಾ ಅವರನ್ನು ಶುಕ್ರವಾರ ದೋಷಿ ಎಂದು ಘೋಷಿಸಿತ್ತು ಹಾಗೂ ಮಿಶ್ರಾ ಅವರ ಪುತ್ರ ವಿಷ್ಣು ಹಾಗೂ ಸೋದರಳಿಯ ಜ್ಯೋತಿ ಆಲಿಯಾಸ್ ವಿಕಾಸ್ ಮಿಶ್ರಾ ಅವರನ್ನು ಖುಲಾಸೆ ಗೋಳಿಸಿತ್ತು.

ಇಬ್ಬರನ್ನೂ ಸಂಶಯದ ಲಾಭದ ಮೇರೆಗೆ ಪ್ರಕರಣದಿಂದ ಖುಲಾಸೆಗೊಳಿಸಲಾಗಿದೆ ಎಂದು ಭದೋಹಿ ಜಿಲ್ಲಾಡಳಿತದ ಪರ ನ್ಯಾಯವಾದಿ ದಿನೇಶ್ ಪಾಂಡೆ ತಿಳಿಸಿದ್ದಾರೆ.

Read These Next

ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯಗಳ ಬಗ್ಗೆ ಮೂರು ದಿನಗಳಲ್ಲಿ ವರದಿ ಕೊಡಿ; ರಾಜ್ಯ ಡಿಜಿಪಿಗೆ ರಾಷ್ಟ್ರೀಯ ಮಹಿಳಾ ಆಯೋಗ ಸೂಚನೆ

ಹಾಸನ ಸಂಸದ ಪ್ರಜ್ವಲ್ ರೇವಣ್ಣ ಸಾವಿರಾರು ಮಹಿಳೆಯರ ಮೇಲೆ ನಡೆಸಿದ್ದಾರೆನ್ನಲಾದ ಲೈಂಗಿಕ ದೌರ್ಜನ್ಯಗಳ ಬಗ್ಗೆ ಮೂರು ದಿನಗಳಲ್ಲಿ ...

ನಾಮಪತ್ರ ಹಿಂಪಡೆದ ಇಂದೋರ್ ಕಾಂಗ್ರೆಸ್ ಅಭ್ಯರ್ಥಿ; ಅಕ್ಷಯ್ ಕಾಂತಿ ಬಮ್ ಬಿಜೆಪಿ ಸೇರ್ಪಡೆ

ಇಂದೋರ್ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಕ್ಷಯ್ ಕಾಂತಿ ಬಮ್ ಅವರು ತನ್ನ ನಾಮಪತ್ರವನ್ನು ಹಿಂಪಡೆದಿದ್ದಾರೆ ಹಾಗೂ ಬಿಜೆಪಿ ...

ಲೈಂಗಿಕ ಹಗರಣ; ಪ್ರಜ್ವಲ್ ರೇವಣ್ಣರನ್ನು ಮೋದಿ ರಕ್ಷಿಸುತ್ತಿದ್ದಾರೆ; ಕಾಂಗ್ರೆಸ್

ಮಹಿಳೆಯರ ವಿರುದ್ಧ ಲೈಂಗಿಕ ದೌರ್ಜನ್ಯದ ಆರೋಪವನ್ನು ಹೊತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣರನ್ನು ಪ್ರಧಾನಿ ನರೇಂದ್ರ ಮೋದಿಯವರು ...