ಹಿಂದುಳಿದ ವರ್ಗಗಳ ವಿದ್ಯಾರ್ಥಿ ವೇತನ ಬಿಡುಗಡೆಗೆ ಎಸ್.ಐ.ಓ ಆಗ್ರಹ

Source: sonews | By Staff Correspondent | Published on 3rd December 2019, 5:31 PM | Coastal News | Don't Miss |

ಭಟ್ಕಳ: ಹಿಂದುಳಿದ ವರ್ಗಗಳ ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನ ರದ್ದುಗೊಳಿಸುವ ಸಂಬಂಧ ರಾಜ್ಯಸರ್ಕಾರ ಹೊರಡಿಸಿದ ಸುತ್ತೋಲೆಯಿಂದಾಗಿ ರಾಜ್ಯ 15ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳ ಭವಿಷ್ಯ ಅಡಕತ್ತರಿಯಲ್ಲಿದೆ. ಈ ಸುತ್ತೋಲೆಯನ್ನು  ಸರ್ಕಾರ ಕೂಡಲೆ ಹಿಂಪಡೆಯುವಂತೆ ಆಗ್ರಹಿಸಿ ಇಲ್ಲಿನ ಸ್ಟೂಡೆಂಟ್ಸ್ ಇಸ್ಲಾಮಿಕ್ ಆರ್ಗನೈಝೇಶನ್ ಆಫ್ ಇಂಡಿಯಾ ಎಸ್.ಐ.ಓ ತಹಸಿಲ್ದಾರರ ಮೂಲಕ ಮುಖ್ಯಮಂತ್ರಿಗೆ ಮನವಿ ಪತ್ರವೊಂದನ್ನು ಸಲ್ಲಿಸಿದೆ. 
2019-20ನೆ ಸಾಲಿ ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನ ರದ್ದುಗೊಳಿಸಿದ್ದು ಸರಿಯಾದ ಕ್ರಮವಲ್ಲ. ಈಗಾಗಲೆ ರಾಜ್ಯಾದ್ಯಂತ 15ಲಕ್ಷ ವಿದ್ಯಾರ್ಥಿಗಳು ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಿದ್ದಾರೆ. ಬಡ ವಿದ್ಯಾರ್ಥಿಗಳು ವಿದ್ಯಾರ್ಥಿವೇತನ ಹಣದಿಂದಲೆ ತಮ್ಮ ಮುಂದಿನ ವಿದ್ಯಾಭ್ಯಾಸವನ್ನು ಪೂರ್ಣಗೊಳಿಸುತ್ತಿದ್ದು ಇಂತಹ ವಿದ್ಯಾರ್ಥಿಗಳಿಗೆ ಈ ಸುತ್ತೋಲೆಯಿಂದ ತೊಂದರೆಯಾಗಿದೆ. ಇದು ಮಕ್ಕಳ ಶೈಕ್ಷಣಿಕ ಹಕ್ಕಿನ ಮೇಲೆ ಸರ್ಕಾರ ಪ್ರಹಾರ ಮಾಡಿದಂತಾಗಿದೆ ಎಂದು ಮನವಿ ಪತ್ರದಲ್ಲಿ ಆರೋಪಿಸಲಾಗಿದ್ದು ಸರ್ಕಾರ ತನ್ನ ನಿರ್ಧಾರ ಬದಲಿಸದೆ ಇದ್ದಲ್ಲಿ ರಾಜ್ಯದ್ಯಂತ ಉಗ್ರಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗುವುದು ಎಂದು ಮನವಿ ಪತ್ರದಲ್ಲಿ ಎಚ್ಚರಿಸಲಾಗಿದೆ. 
ಎಸ್.ಐ.ಓ ಭಟ್ಕಳ ಶಾಖಾಧ್ಯಕ್ಷ ಸನಾವುಲ್ಲಾ ಅಸದಿ, ಮಾಜಿ ಜಿಲ್ಲಾಧ್ಯಕ್ಷ ಆಸಿಫ್ ಅಬೂದ್, ಇಸ್ಮಾಯಿಲ್ ರಾಜಾ, ಆಸೀಫ್ ಶೇಖ್, ಮುಹಮ್ಮದ್ ಬಿಲಾಲ್ ರುಕ್ನುದ್ದೀನ್ ಮತ್ತಿತರರು ಉಪಸ್ಥಿತರಿದ್ದರು. 

Read These Next

ಕಾರವಾರ: ಸಾರ್ವಜನಿಕರಿಗೆ ಕರಪತ್ರ ವಿತರಿಸಿ ಮತದಾನ ಜಾಗೃತಿ ಮೂಡಿಸಿದ ಜಿಲ್ಲಾಧಿಕಾರಿ

ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಮೇ 7 ರಂದು ನಡೆಯಲಿರುವ ಸಾರ್ವತ್ರಿಕ ಲೋಕಸಭಾ ಚುನಾವಣೆಯ ಪ್ರಯುಕ್ತ , ಸಾರ್ವಜನಿಕರು ಹೆಚ್ಚಿನ ...

ಕಾರವಾರ: 16.41 ಲಕ್ಷ ಮತದಾರರು: 1977 ಮತಗಟ್ಟೆಗಳು: 6939 ಸಿಬ್ಬಂದಿಗಳು; ಲೋಕಸಭಾ ಚುನಾವಣೆಗೆ ನಾವ್ ರೆಡಿ ಎಂದ ಜಿಲ್ಲಾಡಳಿತ

ಲೋಕಸಭಾ ಸಾರ್ವತ್ರಿಕ ಚುನಾವಣೆ-2024ಕ್ಕೆ ಸಂಬAಧಿಸಿದAತೆ, ಮುಕ್ತ, ಪಾರದರ್ಶಕ ಮತ್ತು ಶಾಂತಿಯುತ ಚುನಾವಣೆಗಾಗಿ ಜಿಲ್ಲೆಯಲ್ಲಿ ಸಕಲ ...