ಶಿರಸಿ: ಅಕ್ಟೋಬರ 17 ರಂದು ಶಿರಸಿಯ ನಿಸರ್ಗ ಆಸ್ಪತ್ರೆಯಲ್ಲಿ ನೋವು ನಿವಾರಣೆಯಲ್ಲಿ ಆಯುರ್ವೇದ ಚಿಕಿತ್ಸೆ ಶಿಬಿರ ಆಯೋಜನೆ

Source: varthabhavan | By Arshad Koppa | Published on 14th October 2017, 11:41 AM | Coastal News | Special Report |

ಕಾರವಾರ ಅಕ್ಟೋಬರ 13 : ದನ್ವಂತರಿ ಜಯಂತಿ ಅಂಗವಾಗಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆಯುಷ್ ಇಲಾಖೆ ಹಾಗೂ ನಿಸರ್ಗ ಟ್ರಸ್ಟ್ ಶಿರಸಿ ಇವರ ಸಂಯುಕ್ತಾಶ್ರಯದಲ್ಲಿ ಅಕ್ಟೋಬರ 17 ರಂದು ಶಿರಸಿಯ ನಿಸರ್ಗ ಆಸ್ಪತ್ರೆಯಲ್ಲಿ ನೋವು ನಿವಾರಣೆಯಲ್ಲಿ ಆಯುರ್ವೇದ ಚಿಕಿತ್ಸೆ ಎಂಬ ಶಿಬಿರವನ್ನು ಆಯೋಜಿಸಲಾಗಿದೆ. 
 ಶಿಬಿರದಲ್ಲಿ ಆಯುರ್ವೇದ ತಜ್ಞವೈದ್ಯರಿಂದ ಹಾಗೂ ಸಂಪನ್ಮೂಲ ವ್ಯಕ್ತಿಗಳಿಂದ ಸಂಧಿವಾತ ರೋಗದ ಬಗ್ಗೆ ಮಾಹಿತಿ, ತಪಾಸಣೆ, ಚಿಕಿತ್ಸೆ, ವಸ್ತು ಪ್ರದರ್ಶನ, ಔಷದಿ ಸಸ್ಯಗಳ ಪರಿಚಯ, ಸುಲಭ ಚಿಕಿತ್ಸಾ ವಿಧಾನಗಳ ಪ್ರಾತ್ಯಕ್ಷಿತೆಯೊಂದಿಗೆ ಉಚಿತ ಚಿಕಿತ್ಸೆಯನ್ನು ನೀಡಲಾಗುವದು. ಆಸಕ್ತ ಸಾರ್ವಜನಿಕರು ಶಿಬಿರದ ಪ್ರಯೋಜನವನ್ನು ಪಡೆದುಕೊಳ್ಳುವಂತೆ ಜಿಲ್ಲಾ ಆಯುಷ್ ಅಧಿಕಾರಿ ಡಾ. ಸಿ.ಆರ್. ಬಸವರಾಜಯ್ಯ ಕೋರಿದ್ದಾರೆ. 

ಫೆಲೋಶಿಪ್ ಅರ್ಜಿ ಆಹ್ವಾನ
ಕಾರವಾರ ಅಕ್ಟೊಬರ 13: ಕರ್ನಾಟಕ ಯಕ್ಷಗಾನ ಅಕಾಡೆಮಿಯು ಪ್ರಸ್ತಕ ಸಾಲಿಗೆ  ಯಕ್ಷಗಾನ ಕ್ಷೇತ್ರದಲ್ಲಿ 5 ತೀಂಗಳುಗಳ ಕಾಲ ಸಂಶೋಧನಾ ಅಧ್ಯಯನ ಮಾಡಿ ಪ್ರಬಂಧ ಮಂಡಿಸಲು ಅರ್ಜಿ ಆಹ್ವಾನಿಸಿದೆ.
    ಅರ್ಜಿ ಸಲ್ಲಿಸ ಬಯಸುವರು ಪರಿಶಿಷ್ಟ ಪಂಗಡಕ್ಕೆ ಸೇರಿದವರಾಗಿರಬೇಕು. 45 ವರ್ಷ ವಯೋಮಿತಿಯೊಳಗಿರÀಬೇಕು.  ಕನ್ನಡ ಭಾಷಾ ವಿಜ್ಞಾನ, ಜಾನಪದ, ಸಮಾಜ ವಿಜ್ಞಾನ, ರಾಜ್ಯಶಾಸ್ತ್ರ, ಅರ್ಥಶಾಸ್ತ್ರ, ಮಹಿಳಾ ಅಧ್ಯಯನ, ಇತಿಹಾಸ, ಮಾನವಶಾಸ್ತ್ರ, ಪತ್ರಿಕೋದ್ಯಮ, ಗ್ರಂಥಾಲಯ ಮತ್ತು ಮಾಹಿತಿ ತಂತ್ರಜ್ಞಾನ, ಇಂಗ್ಲೀಷ ಹಿಂದಿ ಇತ್ಯಾದಿ ಮಾನವಿಕ ವಿಷಯಗಳಲ್ಲಿ ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡಿರುವರು ಅರ್ಜಿ ಸಲ್ಲಿಸಬಹುದಾಗಿದೆ. 
    ಅರ್ಜಿ ಸಲ್ಲಿಸಲು ಅಕ್ಟೋಬರ 31 ಕೊನೆಯ ದಿನವಾಗಿದ್ದು ಅಂಚೆ ಅಥವಾ ಇ-ಮೇಲ್ [email protected] ನ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ನಮೂನೆಯನ್ನು ಆಯಾ ಜಿಲ್ಲೆಯ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಪಡೆಯಬಹುದಾಗಿದೆ. ಆಸಕ್ತರು ಪ್ರಬಂದಕ್ಕೆ ಆಯ್ಕೆ ಮಾಡಿಕೊಳ್ಳುವ ಅದ್ಯಯನ ವಿಷಯದ ಮೇಲೆ ಸಾರಲೇಖ ಹಾಗೂ ತಮ್ಮ ಸಾಧನೆಯ ಕೀರು ಪರಿಚಯ ಮತ್ತು ಜಾತಿ ಪ್ರಮಾಣ ಪತ್ರದೊಂದಿಗೆ, ರಿಜಿಸ್ಟಾರ್, ಕರ್ನಾಟಕ ಯಕ್ಷಗಾನ ಅಕಾಡೆಮಿ, 2ನೇ ಮಹಡಿ, ಚಾಲುಕ್ಯ ವಿಭಾಗ, ಕನ್ನಡ ಭವನ, ಜೆ.ಸಿ.ರಸ್ತೆ ಬೆಂಗಳೂರು-2 ಇವರಿಗೆ ಅರ್ಜಿ ಸಲ್ಲಿಸಬಹುದಾಗಿದೆ.

Read These Next

ಉತ್ತರಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು 19 ಅಭ್ಯರ್ಥಿಗಳಿಂದ 36 ನಾಮಪತ್ರ ಸಲ್ಲಿಕೆ.

ಕಾರವಾರ :12- ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ , ನಾಮಪತ್ರಗಳ ಸಲ್ಲಿಕೆಗೆ ಕೊನೆಯ ದಿನವಾದ ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...

ದಹನಕಾರಿ ಹೇಳಿಕೆಗಳಿಗೆ ಹೆಸರಾದ ಅನಂತ್ ಕುಮಾರ್ ಹೆಗಡೆ ಸಂಸತ್ತಿನಲ್ಲೇಕೆ ಮೌನವಾಗಿದ್ದಾರೆ?

ಪ್ರಜಾಪ್ರಭುತ್ವದಲ್ಲಿ, ಜನರ ಧ್ವನಿಯನ್ನು ಚುನಾಯಿತ ಪ್ರತಿನಿಧಿಗಳ ಮೂಲಕ ಕೇಳಬೇಕು. ಆದಾಗ್ಯೂ, ಸಂಸತ್ತಿನ ಕೆಲವು ಸದಸ್ಯರು (ಸಂಸದರು) ...

ಭಟ್ಕಳದಲ್ಲಿ ಹೆಚ್ಚಿದ ಹೆಣ್ಣು ಮಕ್ಕಳ ಸಂಖ್ಯೆ: ಗರಿಷ್ಠ ಲಿಂಗಾನುಪಾತ; ಕಾರವಾರ ಮತ್ತು ಮುಂಡಗೋಡನಲ್ಲಿ ಅತೀ ಕಡಿಮೆ ಲಿಂಗಾನುಪಾತ

ಹೆಣ್ಣು ಮತ್ತು ಗಂಡು ನಡುವಿನ ಲಿಂಗಾನುಪಾತದ ವ್ಯತ್ಯಾಸ ದೇಶಾದ್ಯಂತ ವ್ಯಾಪಕವಾಗಿ ಕಂಡು ಬರುತ್ತಿದ್ದು, ಈಗಾಗಲೇ ಈ ವ್ಯತ್ಯಾಸದಿಂದ ...

ಕಾರವಾರ: ವಿಶೇಷ ಚೇತನರಿಗೆ ಯುಡಿಐಡಿ ಕಾರ್ಡ್ ವಿತರಣೆ; ಉತ್ತರ ಕನ್ನಡ ಜಿಲ್ಲೆ ರಾಜ್ಯದಲ್ಲಿ ದ್ವಿತೀಯ

ವಿಶೇಷ ಚೇತನರಿಗಾಗಿ ರೂಪಿಸಲಾಗುವ ಸರ್ಕಾರದ ವಿವಿಧ ಯೋಜನೆಗಳ ಸೌಲಭ್ಯಗಳನ್ನು ವಿಶೇಷ ಚೇತನರಿಗೆ ಪರಿಣಾಮಕಾರಿಯಾಗಿ ತಲುಪಿಸುವ ...