ಶಿರಸಿ ಪ್ರತ್ಯೇಕ ಜಿಲ್ಲೆಗೆ ಆಗ್ರಹ. ಸಿದ್ದಾಪುರದಲ್ಲಿ ಹೊರಾಟ ಸಮಿತಿಯಿಂದ ಪಂಜಿನ ಮೆರವಣಿಗೆ

Source: SO News | By Laxmi Tanaya | Published on 14th December 2020, 11:07 PM | State News | Don't Miss |

ಸಿದ್ದಾಪುರ :  ಶಿರಸಿ ಪ್ರತ್ಯೇಕ ಜಿಲ್ಲೆಗೆ ಆಗ್ರಹಿಸಿ ಪಟ್ಟಣದಲ್ಲಿ  ಪಂಜಿನ ಮೆರವಣಿಗೆ ನಡೆಸಲಾಯಿತು.

ಶೀಘ್ರದಲ್ಲಿ ನೂತನ ಜಿಲ್ಲೆ ರಚನೆಯಾಗಬೇಕೆಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಶಿರಸಿ ಜಿಲ್ಲಾ ಹೋರಾಟ ಸಮಿತಿಯ ಅಧ್ಯಕ್ಷ ಉಪೇಂದ್ರ ಪೈ ಮಾತನಾಡಿ, ಅಭಿವೃದ್ಧಿ ಮತ್ತು ಅನುಕೂಲತೆ ಕಾರಣದಿಂದ ಘಟ್ಟದ ಮೇಲಿನ ತಾಲೂಕುಗಳನ್ನು ಒಳಗೊಂಡ ನೂತನ ಶಿರಸಿ ಜಿಲ್ಲೆ ರಚನೆಯಾಗಬೇಕು. ಇದು ನಮ್ಮ ಹಲವಾರು ವರ್ಷಗಳ ಬೇಡಿಕೆಯಾಗಿತ್ತು. ಕಳೆದ ಕೆಲವು ದಿನಗಳಿಂದ ಹೋರಾಟವನ್ನು ತೀವ್ರಗೊಳಿಸಲಾಗುತ್ತಿದೆ. ಈ  ಹಿಂದೆ ಹಲವು ಕಡೆಗಳಲ್ಲಿ ಪಂಜಿನ ಮೆರವಣಿಗೆ ತಮಟೆ ಬಾರಿಸುವ ಮೂಲಕ ಸರ್ಕಾರದ ಗಮನವನ್ನು ಸೆಳೆಯಲಾಗಿತ್ತು. ಪ್ರತಿ ಒಂದು ಸಂದರ್ಭದಲ್ಲಿ ಜಿಲ್ಲಾ ಕೇಂದ್ರಕ್ಕೆ ಹೋಗಿ ಬರುವುದು ಕಷ್ಟ ಸಾಧ್ಯವಾಗಿದೆ‌ ಎಂದರು

ಮೆರವಣಿಗೆಯಲ್ಲಿ ಜಿಲ್ಲಾ ಹೋರಾಟ ಸಮಿತಿಯ ಕಾರ್ಯದರ್ಶಿ ಮಂಜುನಾಥ ಮೊಗೇರ, ತಾಲೂಕ ಘಟಕದ ಅಧ್ಯಕ್ಷ ಸಿ.ಎಸ್.ಗೌಡರ್,ಉಪಾಧ್ಯಕ್ಷರಾದ ಜಿ.ಜಿ.ಹೆಗಡೆ  ಬಾಳಗೋಡು,.ತಾಲೂಕ ಪ್ರಧಾನ ಕಾರ್ಯದರ್ಶಿ ಪಿ.ಬಿ.ಹೊಸೂರು, ಖಜಾಂಚಿ ವಾಸುದೇವ ಬಿಳಗಿ, ಪಟ್ಟಣ ಪಂಚಾಯತ ಸದಸ್ಯರುಗಳಾದ ಗುರುರಾಜ ಶಾನಭಾಗ, ನಂದನ್ ಬೋರ್ಕರ್, ಪ್ರಮುಖರಾದ ಪ್ರಶಾಂತ ಶೇಟ್, ರಾಘವೇಂದ್ರ ನಾಯ್ಕ,ಅಣ್ಣಪ್ಪ ನಾಯ್ಕ ಶಿರಳಗಿ ಮೊದಲಾದವರು ಉಪಸ್ಥಿತರಿದ್ದರು.

Read These Next

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಗದಗ: ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ ಭೇದಿಸಿದ ಪೊಲೀಸರು; ಸುಪಾರಿ ನೀಡಿದ ಮನೆಮಗ ಸಹಿತ 8 ಮಂದಿಯ ಬಂಧನ

ಮೂರು ದಿನಗಳ ಹಿಂದೆ ಗದಗದಲ್ಲಿ ನಡೆದಿದ್ದ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣವನ್ನು ಭೇದಿಸಿರುವ ಪೊಲೀಸರು ಎಂಟು ಮಂದಿ ...

ಧಾರವಾಡ ಲೋಕಸಭೆ : ಉಮೇದುವಾರಿಕೆ ಹಿಂಪಡೆದ ಎಂಟು ಅಭ್ಯರ್ಥಿಗಳು; ಅಂತಿಮವಾಗಿ ಚುನಾವಣಾ ಸ್ಪರ್ಧೆಯಲ್ಲಿ 17 ಅಭ್ಯರ್ಥಿಗಳು

ಧಾರವಾಡ : 11-ಧಾರವಾಡ ಚುನಾವಣಾ ಕ್ಷೇತ್ರದಿಂದ ಲೋಕಸಭೆಗೆ ನಡೆಯುವ ಚುನಾವಣೆಗೆ ಕ್ರಮಬದ್ದವಾಗಿ ನಾಮನಿರ್ದೇಶನ ಮಾಡಲ್ಪಟ್ಟಿದ್ದ 25 ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಧಾರವಾಡ ಲೋಕಸಭೆ : ಉಮೇದುವಾರಿಕೆ ಹಿಂಪಡೆದ ಎಂಟು ಅಭ್ಯರ್ಥಿಗಳು; ಅಂತಿಮವಾಗಿ ಚುನಾವಣಾ ಸ್ಪರ್ಧೆಯಲ್ಲಿ 17 ಅಭ್ಯರ್ಥಿಗಳು

ಧಾರವಾಡ : 11-ಧಾರವಾಡ ಚುನಾವಣಾ ಕ್ಷೇತ್ರದಿಂದ ಲೋಕಸಭೆಗೆ ನಡೆಯುವ ಚುನಾವಣೆಗೆ ಕ್ರಮಬದ್ದವಾಗಿ ನಾಮನಿರ್ದೇಶನ ಮಾಡಲ್ಪಟ್ಟಿದ್ದ 25 ...

ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ ಪ್ರಶ್ನೆ

ಬಾಳೆಹೊನ್ನೂರು: ಕಳೆದ ಹತ್ತು ವರ್ಷಗಳಿಂದ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ, ಮಲೆನಾಡಿನ ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ...