ಸಿಸೋಡಿಯಾಗೆ ಮಾ.20ರವರೆಗೆ ನ್ಯಾಯಾಂಗ ಬಂಧನ

Source: Vb | By I.G. Bhatkali | Published on 7th March 2023, 9:36 PM | National News | Don't Miss |

ಹೊಸದಿಲ್ಲಿ: ದಿಲ್ಲಿ ರಾಜ್ಯದ ನೂತನ ಅಧಿಕಾರಿ ನೀತಿಯಲ್ಲಿ ನಡೆದಿದೆಯೆನ್ನಲಾದ ಅವ್ಯವಹಾರಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ, ರಾಜ್ಯದ ಮಾಜಿ ಮುಖ್ಯಮಂತ್ರಿ ಮನೀಷ್ ಸಿಸೋಡಿಯಾರನ್ನು ದಿಲ್ಲಿಯ ನ್ಯಾಯಾಲಯವೊಂದು ಸೋಮವಾರ ಮಾರ್ಚ್ 20ರವರೆಗೆ ನ್ಯಾಯಾಂಗ ಬಂಧನಕ್ಕೆ ಕಳುಹಿಸಿದೆ.

ಸಿಬಿಐಯು ಫೆಬ್ರವರಿ 26ರಂದು ಸಿಸೋಡಿಯಾರನ್ನು ಬಂಧಿಸಿತ್ತು. ಒಂದು ದಿನದ ಬಳಿಕ, ದಿಲ್ಲಿಯ ನ್ಯಾಯಾಲಯವೊಂದು ಅವರನ್ನು ಮಾರ್ಚ್ 4ರವರೆಗೆ ಸಿಬಿಐ ಕಸ್ಟಡಿಗೆ ನೀಡಿತ್ತು. ನ್ಯಾಯಾಲಯವು ಮಾರ್ಚ್ 4ರಂದು ಅವರ ಸಿಬಿಐ ಕಸ್ಟಡಿ ಅವಧಿಯನ್ನು ಇನ್ನೂ ಎರಡು ದಿನಗಳ ಕಾಲ ವಿಸ್ತರಿಸಿತ್ತು.

ಅಂದು ಅವರ ಜಾಮೀನು ಅರ್ಜಿಯ ವಿಚಾರಣೆಯನ್ನೂ ನ್ಯಾಯಾಲಯವು ಮಾರ್ಚ್ 10ಕ್ಕೆ ಮುಂದೂಡಿತ್ತು.

ಸದ್ಯಕ್ಕೆ ಸಿಸೋಡಿಯಾರ ಪೊಲೀಸ್ ಕಸ್ಟಡಿಯನ್ನು ಕೇಳುವುದಿಲ್ಲ ಹಾಗೂ ಬಳಿಕ ಕೇಳಬಹುದು ಎಂದು ಸೋಮವಾರ ಸಿಬಿಐಯು ನ್ಯಾಯಾಲಯಕ್ಕೆ ಹೇಳಿತು. ಆದರೂ, ಸಿಸೋಡಿಯಾರ ಬೆಂಬಲಿಗರು ಮತ್ತು ಮಾಧ್ಯಮಗಳು ಈ ವಿಷಯದಲ್ಲಿ ರಾಜಕೀಯ ಮಾಡುತ್ತಿವೆ ಎಂದು ಸಿಬಿಐ ವಕೀಲರು ಆರೋಪಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಸಿಸೋಡಿಯಾರ ವಕೀಲ ಮೋಹಿತ್ ಮಾಥುರ್, ಈ ವಾದವನ್ನು ಕೇಳಿ ತನಗೆ ಆಘಾತವಾಗಿದೆ ಎಂದು ಹೇಳಿದರು. “ಅವರು ಮಾಧ್ಯಮಗಳಿಗೆ ಹೆದರುತ್ತಿದ್ದಾರೆಯೇ?” ಎಂದು ಪ್ರಶ್ನಿಸಿದರು.

ಧ್ಯಾನದ ಕೋಣೆ, ಭಗವದ್ಗೀತೆ ನೀಡಲು ನ್ಯಾಯಾಲಯ ಸೂಚನೆ ಸಿಸೋಡಿಯಾರನ್ನು ಜೈಲಿನ ಧ್ಯಾನದ ಕೋಣೆಯಲ್ಲಿರಿಸಬೇಕೆಂದು ಅವರ ವಕೀಲರು ನ್ಯಾಯಾಲಯದಲ್ಲಿ ಮನವಿ ಮಾಡಿದರು. ಅದಕ್ಕೆ ಪ್ರತಿಕ್ರಿಯಿಸಿದ ನ್ಯಾಯಾಧೀಶರು, ಈ ಮನವಿಯನ್ನು ಪರಿಗಣಿಸುವಂತೆ ಜೈಲಿನ ಅಧಿಕಾರಿಗಳಿಗೆ ಸೂಚನೆ ನೀಡಿದರು. ಜೊತೆಗೆ, ಭಗವದ್ಗೀತೆಯನ್ನು ಜೈಲಿನ ಕೋಣೆಗೆ ಒಯ್ಯಲು ಕೂಡ ನ್ಯಾಯಾಲಯವು ಆಪ್ ನಾಯಕನಿಗೆ ಅನುಮತಿ ನೀಡಿತು.

Read These Next

ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯಗಳ ಬಗ್ಗೆ ಮೂರು ದಿನಗಳಲ್ಲಿ ವರದಿ ಕೊಡಿ; ರಾಜ್ಯ ಡಿಜಿಪಿಗೆ ರಾಷ್ಟ್ರೀಯ ಮಹಿಳಾ ಆಯೋಗ ಸೂಚನೆ

ಹಾಸನ ಸಂಸದ ಪ್ರಜ್ವಲ್ ರೇವಣ್ಣ ಸಾವಿರಾರು ಮಹಿಳೆಯರ ಮೇಲೆ ನಡೆಸಿದ್ದಾರೆನ್ನಲಾದ ಲೈಂಗಿಕ ದೌರ್ಜನ್ಯಗಳ ಬಗ್ಗೆ ಮೂರು ದಿನಗಳಲ್ಲಿ ...

ನಾಮಪತ್ರ ಹಿಂಪಡೆದ ಇಂದೋರ್ ಕಾಂಗ್ರೆಸ್ ಅಭ್ಯರ್ಥಿ; ಅಕ್ಷಯ್ ಕಾಂತಿ ಬಮ್ ಬಿಜೆಪಿ ಸೇರ್ಪಡೆ

ಇಂದೋರ್ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಕ್ಷಯ್ ಕಾಂತಿ ಬಮ್ ಅವರು ತನ್ನ ನಾಮಪತ್ರವನ್ನು ಹಿಂಪಡೆದಿದ್ದಾರೆ ಹಾಗೂ ಬಿಜೆಪಿ ...

ಲೈಂಗಿಕ ಹಗರಣ; ಪ್ರಜ್ವಲ್ ರೇವಣ್ಣರನ್ನು ಮೋದಿ ರಕ್ಷಿಸುತ್ತಿದ್ದಾರೆ; ಕಾಂಗ್ರೆಸ್

ಮಹಿಳೆಯರ ವಿರುದ್ಧ ಲೈಂಗಿಕ ದೌರ್ಜನ್ಯದ ಆರೋಪವನ್ನು ಹೊತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣರನ್ನು ಪ್ರಧಾನಿ ನರೇಂದ್ರ ಮೋದಿಯವರು ...