ಬೆಂಗಳೂರು: ಉಡುಪಿ, ಶಿವಮೊಗ್ಗ ಸಹಿತ ಆರು ಜಿಲ್ಲೆಗಳಲ್ಲಿ ನಿರ್ಬಂಧ ಸಡಿಲಿಕೆ

Source: VB | By S O News | Published on 22nd June 2021, 4:09 PM | State News | Coastal News |

ಬೆಂಗಳೂರು: ಕೋವಿಡ್ ಪಾಸಿಟಿವಿಟಿ ದರ ಶೇ.5ಕ್ಕಿಂತ ಕಡಿಮೆ ಇರುವ ಉಡುಪಿ, ಬೆಂಗಳೂರು ಗ್ರಾಮಾಂತರ, ಶಿವಮೊಗ್ಗ, ಬಳ್ಳಾರಿ, ಚಿತ್ರದುರ್ಗ ಹಾಗೂ ವಿಜಯಪುರ ಈ ಆರು ಜಿಲ್ಲೆಗಳಲ್ಲಿ ಲಾಕ್‌ಡೌನ್ ಸಡಿಲಿಕೆ ಮಾಡಿ ಆದೇಶ ಹೊರಡಿಸಿರುವ ರಾಜ್ಯ ಸರಕಾರ, ಈ ಜಿಲ್ಲೆಗಳಲ್ಲಿ ಬೆಳಗ್ಗೆ 6 ಗಂಟೆಯಿಂದ ಸಂಜೆ 5 ಗಂಟೆವರೆಗೆ ಎಲ್ಲ ಅಂಗಡಿ-ಮುಂಗಟ್ಟುಗಳನ್ನು ತೆರೆಯಲು ಅನುವು ಮಾಡಿಕೊಟ್ಟಿದೆ. ಈ ಆದೇಶ ಜುಲೈ 5ರ ಮುಂಜಾನೆ 5 ಗಂಟೆಯವರೆಗೆ ಜಾರಿಯಲ್ಲಿರುತ್ತದೆ.

ಸೋಮವಾರ ಮೇಲ್ಕಂಡ ಆರು ಜಿಲ್ಲೆಗಳಲ್ಲಿ ಲಾಕ್‌ಡೌನ್ ನಿರ್ಬಂಧ ಸಡಿಲಿಕೆ ಸಂಬಂಧ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ ಪ್ರಸಾದ್ ಹೊರಡಿಸಿರುವ ಆದೇಶದಲ್ಲಿ ಕೆಎಸ್ಸಾರ್ಟಿಸಿ ಬಸ್ ಸೇರಿದಂತೆ ಶೇ.50ರಷ್ಟು ಆಸ ಸಾಮರ್ಥ್ಯದೊಂದಿಗೆ ಬಸ್, ಆಟೊರಿಕ್ಷಾ, ಟ್ಯಾಕ್ಸಿ ಸಹಿತ ವಾಹನಗಳ ಸಂಚಾರಕ್ಕೆ ಹಾಗೂ ಕೈಗಾರಿಕೆ,

ವಿವಿಧ ವಾಣಿಜ್ಯ ಚಟುವಟಿಕೆಗಳಿಗೆ ಷರತ್ತುಬದ್ಧ ಅವಕಾಶ ನೀಡಲಾಗಿದೆ. ಆದರೆ ರಾಜಕೀಯ-ಧಾರ್ಮಿಕ ಸಭೆ, ಸಮಾರಂಭ, ಸಮಾವೇಶಗಳಿಗೆ, ಮಾಲ್, ಸಿನೆಮಾಮಂದಿರ, ಪಬ್, ಈಜುಕೊಳಗಳನ್ನು ತೆರೆಯಲು ಅವಕಾಶ ನೀಡಲಾಗಿಲ್ಲ.

ಈಗಾಗಲೇ ರಾಜ್ಯದ 16 ಜಿಲ್ಲೆಗಳು ಜೂ.21ರಿಂದ ಅನ್‌ಲಾಕ್ ಆಗಿದ್ದು, ಆ ಜಿಲ್ಲೆಗಳ ಸಾಲಿಗೆ ಉಡುಪಿ ಸಹಿತ ಆರು ಜಿಲ್ಲೆಗಳ ಸೇರ್ಪಡೆಯಿಂದ ಒಟ್ಟು 22 ಜಿಲ್ಲೆಗಳಲ್ಲಿ ಕೋವಿಡ್ ಲಾಕ್‌ಡೌನ್ ನಿರ್ಬಂಧ ಸಡಿಲಿಸಿ ದಂತಾಗಿದೆ.

ಎಲ್ಲರೂ ಮಾಸ್ಕ್ ಧರಿಸಿ, ಅಂತರ ಕಾಯ್ದುಕೊಳ್ಳುವ ಮೂಲಕ ಕಡ್ಡಾಯವಾಗಿ ಕೋವಿಡ್ ಮಾರ್ಗಸೂಚಿ ಅನುಸರಿಸಬೇಕು ಎಂದು ಆದೇಶದಲ್ಲಿ ನಿರ್ದೇಶಿಸಲಾಗಿದೆ.

ಅಲ್ಲದೇ ಎಲ್ಲಾ ಜಿಲ್ಲೆಗಳಲ್ಲಿ ಪ್ರತಿದಿನ ಸಂಜೆ 7ರಿಂದ ಮರುದಿನ ಬೆಳಗ್ಗೆ 5ರವರೆಗೆ ರಾತ್ರಿ ಕರ್ಫ್ಯೂ ಹಾಗೂ ಪ್ರತಿ ಶುಕ್ರವಾರ ಸಂಜೆ 7ರಿಂದ ಸೋಮವಾರ ಬೆಳಗ್ಗೆ 5ರವರೆಗೆ ವಾರಾಂತ್ಯ ಕರ್ಫ್ಯೂ ಮುಂದುವರಿಯುತ್ತದೆ. ಪ್ರತಿದಿನ ಬೆಳಗ್ಗೆ 6ರಿಂದ ಸಂಜೆ 5 ರವರೆಗೆ ಎಲ್ಲಾ ಅಂಗಡಿ-ಮುಂಗಟ್ಟು ಗಳನ್ನು ತೆರೆಯಲು ಅನುಮತಿ ನೀಡಲಾಗಿದೆ.

Read These Next

ಸಂವಿಧಾನದ ಆಶಯವನ್ನು ಎತ್ತಿಹಿಡಿಯುವಲ್ಲಿ ನ್ಯಾಯಾಂಗದ ಪಾತ್ರ ದೊಡ್ಡದು: ಮುಖ್ಯಮಂತ್ರಿ ಸಿದ್ದರಾಮಯ್ಯ

ಭಾರತದ ನ್ಯಾಯಾಂಗವು ಸಂವಿಧಾನದ ಆಶಯಗಳನ್ನು ಎತ್ತಿ ಹಿಡಿಯುವಲ್ಲಿ ಪ್ರಮುಖ ಪಾತ್ರ ವಹಿಸುತ್ತಾ ಬಂದಿದೆ. ಮೂಲಭೂತ ಹಕ್ಕುಗಳಿಗೆ ...

ವಿದ್ಯಾರ್ಥಿಗಳ ಗೊಂದಲಕ್ಕೆ ತೆರೆ: 5, 8, 9ನೇ ತರಗತಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅಸ್ತು!

ವಿದ್ಯಾರ್ಥಿಗಳ ಗೊಂದಲಕ್ಕೆ ತೆರೆ: 5, 8, 9ನೇ ತರಗತಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅಸ್ತು!