ಚಿನ್ನ ಕಳ್ಳಸಾಗಣೆ ಪ್ರಕರಣ: ಮತ್ತೆ ಆರು ಮಂದಿ ಬಂಧನ

Source: PTI | Published on 3rd August 2020, 12:25 AM | National News | Don't Miss |


ನವದೆಹಲಿ: ಕೇರಳದಲ್ಲಿ ರಾಜತಾಂತ್ರಿಕ ಮಾರ್ಗವನ್ನು ದುರುಪಯೋಗಪಡಿಸಿಕೊಂಡು ಚಿನ್ನ ಕಳ್ಳ ಸಾಗಣೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಮತ್ತೆ ಆರು ಜನರನ್ನು ಬಂಧಿಸಿದೆ ಎಂದು ಅಧಿಕಾರಿಯೊಬ್ಬರು ಭಾನುವಾರ ತಿಳಿಸಿದ್ದಾರೆ.
ಈ ಪ್ರಕರಣದಲ್ಲಿ ಈವರೆಗೆ ಒಟ್ಟು ಹತ್ತು ಮಂದಿಯನ್ನು ಬಂಧಿಸಲಾಗಿದೆ. ಆರೋಪಿಗಳ ಮನೆ ಶೋಧ ನಡೆಸಿದ ಎನ್‌ಐಎ ಹಾರ್ಡ್‌ ಡಿಸ್ಕ್‌, ಕಂಪ್ಯೂಟರ್‌, ಮೊಬೈಲ್‌ ಫೋನ್‌, ಸಿಮ್‌ ಕಾರ್ಡ್‌, ಡಿಜಿಟಲ್‌ ವಿಡಿಯೊ ರೆಕಾರ್ಡರ್‌ ಮತ್ತು ಐದು ಡಿವಿಡಿ, ಬ್ಯಾಂಕ್‌ ಪಾಸ್‌ಬುಕ್‌, ಡೆಬಿಟ್‌, ಕ್ರೆಡಿಟ್‌ ಕಾರ್ಡ್‌, ಪ್ರವಾಸ ಮತ್ತು ಗುರುತಿನ ದಾಖಲೆಗಳನ್ನು ವಶಕ್ಕೆ ಪಡೆದಿದೆ.
ಈ ಪ್ರಕರಣದ ಪ್ರಮುಖ ಆರೋಪಿಯಾಗಿರುವ ರಮೀಸ್‌ ಕೆ.ಟಿ ಜೊತೆಗೆ ಸಂಪರ್ಕ ಹೊಂದಿದ, ಪಿತೂರಿಯ ಭಾಗವಾಗಿದ್ದ ಆರೋಪದಲ್ಲಿ ಎರ್ನಾಕುಲಂನ ಜಲಾಲ್‌ ಎ.ಎಂ ಮತ್ತು ಮಲಪ್ಪುರಂನ ಸೈಯದ್ ಅಳವಿ ಇ ಎಂಬುವರನ್ನು ಜೂನ್‌ 30ರಂದು ಬಂಧಿಸಲಾಗಿದೆ ಎಂದು ಎನ್‌ಐಎ ತಿಳಿಸಿದೆ. 
ಜೂನ್‌ 31ರಂದು ಮಲಪ್ಪುರಂ ನಿವಾಸಿಗಳಾದ ಮೊಹಮ್ಮದ್ ಶಫಿ ಮತ್ತು ಅಬ್ದು ಪಿ.ಟಿ ಎಂಬ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಆಗಸ್ಟ್‌ 1ರಂದು ಎರ್ನಾಕುಲಂನ ಮಹಮ್ಮದ್‌ ಅಲಿ ಇಬ್ರಾಹಿಂ, ಮೊಹಮ್ಮದ್‌ ಅಲಿ ಎಂಬುವರನ್ನು ಬಂಧಿಸಲಾಗಿದೆ ಎಂದು ಎನ್‌ಐಎ ಮಾಹಿತಿ ನೀಡಿದೆ. 
ಮಹಮ್ಮದ್‌ ಅಲಿ, ಪಾಪ್ಯುಲರ್‌ ಫ್ರಂಟ್‌ ಆಫ್‌ ಇಂಡಿಯಾ (ಪಿಎಫ್‌ಐ) ಸಂಘಟನೆಯ ಸದಸ್ಯನಾಗಿದ್ದಾನೆ.  ಪ್ರಾಧ್ಯಾಪಕರೊಬ್ಬರ ಅಂಗೈ ಕತ್ತರಿಸಿದ ಆರೋಪದಲ್ಲಿ ಈತನನ್ನು ಈ ಹಿಂದೆ ಬಂಧಿಸಲಾಗಿತ್ತು, ಆದರೆ, ಆರೋಪ ಸಾಬೀತಾಗದೆ ಖುಲಾಸೆಗೊಂಡಿದ್ದ. 
ಪ್ರಕರಣವೇನು?: ಜುಲೈ 5ರಂದು ತಿರುವನಂತಪುರ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಗಲ್ಫ್‌ನಿಂದ ಬಂದ ಏರ್‌ ಕಾರ್ಗೊದಲ್ಲಿದ್ದ ಬ್ಯಾಗ್ ಒಂದರಲ್ಲಿ 15 ಕೋಟಿ ಮೌಲ್ಯದ 30 ಕೆ.ಜಿ. ಬಂಗಾರವನ್ನು ಕಸ್ಟಮ್ಸ್‌ ಅಧಿಕಾರಿಗಳು ವಶಕ್ಕೆ ಪಡೆದಿದ್ದರು. ಪ್ರಕರಣದ ತನಿಖೆಯನ್ನು ಕಸ್ಟಮ್ಸ್‌, ಎನ್‌ಐಎ ಹಾಗೂ ಆದಾಯ ತೆರಿಗೆ ಇಲಾಖೆ ಕೈಗೆತ್ತಿಕೊಂಡಿತ್ತು. ಜುಲೈ 11ರಂದು ಎನ್‌ಐಎ, ಪ್ರಕರಣದ ಪ್ರಮುಖ ಆರೋಪಿ ಸ್ವಪ್ನಾ ಸುರೇಶ್ ಹಾಗೂ ಆಕೆಯ ಜೊತೆಗಿದ್ದ ಸಂದೀಪ್‌ ನಾಯರ್‌ ಎಂಬಾತನನ್ನು ಬೆಂಗಳೂರಿನಲ್ಲಿ ಬಂಧಿಸಿತ್ತು

Read These Next

ಪ್ರಧಾನಿ ಮೋದಿಯಿಂದ ದ್ವೇಷ ಭಾಷಣ! ಚುನಾವಣಾ ಆಯೋಗದ ನಿಷ್ಕ್ರಿಯತೆಗೆ ಪ್ರತಿಪಕ್ಷಗಳ ಆಕ್ರೋಶ

ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮ್ ಸಮುದಾಯದ ವಿರುದ್ದ ಆಕ್ಷೇಪಕಾರಿ ಭಾಷಣಗೈದು ತೀವ್ರ ವಿವಾದಕ್ಕೆ ಗುರಿಯಾಗಿದ್ದಾರೆ. ...

ಅಣಕು ಮತದಾನದ ವೇಳೆ ಬಿಜೆಪಿಗೆ ಮತ

ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದವೇಳೆ ಇವಿಎಂಗಳು ತಪ್ಪಾಗಿ ಬಿಜೆಪಿ ಪರವಾಗಿ ಮತಗಳನ್ನು ದಾಖಲಿಸಿವೆ ಎಂದು ಅರ್ಜಿದಾರರೊಬ್ಬರು ...

ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯವಿರಬೇಕು; ಆಯೋಗಕ್ಕೆ ಹೇಳಿದ ಸುಪ್ರೀಂ ಕೋರ್ಟ್

ಚುನಾವಣಾ ಪ್ರಕ್ರಿಯೆ ಯಲ್ಲಿ ಪಾವಿತ್ರ್ಯವಿರಬೇಕು ಎಂದು ಚುನಾವಣಾ ಆಯೋಗಕ್ಕೆ ಇಂದು ಸುಪ್ರೀಂ ಕೋರ್ಟ್ ಹೇಳಿದೆಯಲ್ಲದೆ ಸ್ವತಂತ್ರ ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಧಾರವಾಡ ಲೋಕಸಭೆ : ಉಮೇದುವಾರಿಕೆ ಹಿಂಪಡೆದ ಎಂಟು ಅಭ್ಯರ್ಥಿಗಳು; ಅಂತಿಮವಾಗಿ ಚುನಾವಣಾ ಸ್ಪರ್ಧೆಯಲ್ಲಿ 17 ಅಭ್ಯರ್ಥಿಗಳು

ಧಾರವಾಡ : 11-ಧಾರವಾಡ ಚುನಾವಣಾ ಕ್ಷೇತ್ರದಿಂದ ಲೋಕಸಭೆಗೆ ನಡೆಯುವ ಚುನಾವಣೆಗೆ ಕ್ರಮಬದ್ದವಾಗಿ ನಾಮನಿರ್ದೇಶನ ಮಾಡಲ್ಪಟ್ಟಿದ್ದ 25 ...

ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ ಪ್ರಶ್ನೆ

ಬಾಳೆಹೊನ್ನೂರು: ಕಳೆದ ಹತ್ತು ವರ್ಷಗಳಿಂದ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ, ಮಲೆನಾಡಿನ ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ...