ಸಮಾಜವಾದಿ ಪಕ್ಷದ ಸ್ಥಿತಿ ಹದಗೆಟ್ಟಿದೆ'; ಅಖಿಲೇಶ್ ವಿರುದ್ಧ ಮಾಯಾವತಿ ವಾಗ್ದಾಳಿ

Source: PTI | By MV Bhatkal | Published on 20th June 2021, 11:43 AM | National News | Don't Miss |

ಲಖನೌ: 'ಬೇರೆ ಬೇರೆ ಪ‍ಕ್ಷಗಳಲ್ಲಿ ನಿಷ್ಕ್ರಿಯವಾಗಿರುವ ಮತ್ತು ಉಚ್ಚಾಟನೆಯಾಗಿರುವ ನಾಯಕರನ್ನು ಸಮಾಜವಾದಿ ಪಕ್ಷದವರು ಸೇರಿಸಿಕೊಳ್ಳುತ್ತಿದ್ದಾರೆ' ಎಂದು ಬಿಎಸ್‌ಪಿ ಮುಖ್ಯಸ್ಥೆ ಮಾಯಾವತಿ ಅವರು ಎಸ್‌ಪಿ ಮುಖಂಡ ಅಖಿಲೇಶ್ ಯಾದವ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಕಳೆದ ವರ್ಷ ಬಹುಜನ ಸಮಾಜವಾದಿ ಪಕ್ಷ ಅಮಾನತುಗೊಳಿಸಿದ ಐವರು ಶಾಸಕರು ಸಮಾಜವಾದಿ ಪಕ್ಷದ ಮುಖಂಡರನ್ನು ಭೇಟಿಯಾಗಿದ್ದು, ಅವರೆಲ್ಲರೂ ಆ ಪಕ್ಷಕ್ಕೆ ಸೇರಬಹುದು ಎಂಬ ಊಹಾಪೋಹದ ಸುದ್ದಿಗೆ ಸಂಬಂಧಿಸಿದಂತೆ ಮಾಯಾವತಿ ಹೀಗೆ ವಾಗ್ದಾಳಿ ನಡೆಸಿದ್ದಾರೆ.
ಹಿಂದಿಯಲ್ಲಿ ಟ್ವೀಟ್‌ ಮಾಡಿರುವ ಮಾಯಾವತಿ, ‘ಸಮಾಜವಾದಿ ಪಕ್ಷದ ಸ್ಥಿತಿ ತುಂಬಾ ಹದಗೆಟ್ಟಿದೆ. ಆ ಪಕ್ಷದವರು ಪ್ರತಿದಿನ ಮಾಧ್ಯಮಗಳಲ್ಲಿ ಸುದ್ದಿಯಲ್ಲಿರಲು ಬಯಸುತ್ತಾರೆ. ಅದಕ್ಕಾಗಿ ಮಾಜಿ ಶಾಸಕರು ಮತ್ತು ಇತರ ಪಕ್ಷಗಳಿಂದ ಹೊರ ಹಾಕಲ್ಪಟ್ಟ ಸಣ್ಣ ಪುಟ್ಟ ಕಾರ್ಯಕರ್ತರು ಅಥವಾ ತಮ್ಮ ಪಕ್ಷದಲ್ಲೇ ನಿಷ್ಕ್ರಿಯರಾಗಿರುವ ನಾಯಕರನ್ನು ಆಗಾಗ್ಗೆ ಎಸ್‌ಪಿ ಮುಖ್ಯಸ್ಥರ ನೇತೃತ್ವದಲ್ಲೇ ಪಕ್ಷಕ್ಕೆ ಸೇರಿಸಿಕೊಳ್ಳುವ ಮೂಲಕ ಸದಾ ಸುದ್ದಿಯಲ್ಲಿರಲು ಪ್ರಯತ್ನಿಸುತ್ತಾರೆ' ಎಂದು ಟೀಕಿಸಿದ್ದಾರೆ.
‘ಸಮಾಜವಾದಿ ಪಕ್ಷದ ಮುಖಂಡರಿಗೆ, ಸ್ಥಳೀಯ ನಾಯಕರ ಮೇಲೆ ನಂಬಿಕೆ ಇಲ್ಲ' ಎಂದು ಆರೋಪಿಸಿರುವ ಮಾಯಾವತಿ, ‘ನಮ್ಮ ಪಕ್ಷಕ್ಕೆ ಸರಿಯಾದ ನಾಯಕರನ್ನು ಮಾತ್ರ ಸೇರಿಸಿಕೊಳ್ಳುತ್ತೇವೆ‘ ಎಂದು ಪ್ರತಿಪಾದಿಸಿದರು.

Read These Next

ಹುಬ್ಬಳ್ಳಿ: ಹುಬ್ಬಳ್ಳಿಯ ಚರ್ಚ್‌ಗೆ ನುಗ್ಗಿ ಭಜನೆ ಮಾಡಿದ ಸಂಘಪರಿವಾರದ ಕಾರ್ಯಕರ್ತರು

ಬಲವಂತದಿಂದ ಮತಾಂತರಗಳನ್ನು ಮಾಡಲಾಗುತ್ತಿದೆ ಎಂದು ಆರೋಪಿಸಿ ರವಿವಾರ ಬೆಳಗ್ಗೆ ಇಲ್ಲಿಯ ಭೈರಿದೇವರ ಕೊಪ್ಪದಲ್ಲಿರುವ ಚರ್ಚೆಂದಕ್ಕೆ ...

ಫೇಸ್ ಕ್ರೀಂನಲ್ಲಿ 24 ಲಕ್ಷ ರೂ. ಮೌಲ್ಯದ ಚಿನ್ನ ಕಳ್ಳಸಾಗಣೆ ಯತ್ನ: ಏರ್ ಪೋರ್ಟ್ ನಲ್ಲಿ ಆರೋಪಿ ಬಂಧನ

ಹೈದರಾಬಾದ್: ಹೈದರಾಬಾದ್ ಆರ್ ಜಿ ಐ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ಫೇಸ್ ಕ್ರೀಮ್ ನಲ್ಲಿ ಚಿನ್ನ ಕಳ್ಳಸಾಗಣೆ ಮಾಡುತ್ತಿದ್ದ ...

ಭಟ್ಕಳ: ಶ್ರೀವಲಿ ಪ್ರೌಢ ಶಾಲೆಯ ವಿದ್ಯಾರ್ಥಿನಿ ಪವಿತ್ರಾ ನಾಯ್ಕ ಪ್ರಬಂಧ ಸ್ಪರ್ಧೆಯಲ್ಲಿ ಪ್ರಥಮ

ಶ್ರೀವಲಿ ಪ್ರೌಢ ಶಾಲೆಯ ಹತ್ತನೇ ತರಗತಿಯ ವಿದ್ಯಾರ್ಥಿನಿ ಪವಿತ್ರಾ ಜಯಕರ ನಾಯ್ಕ ದಿಶಾ ಭಾರತ ಸಂಸ್ಥೆ ಹಾಗೂ ಈಸ್ಟ್ ವೆಸ್ಟ್ ...