ಬೀದರ ಜಿಲ್ಲೆಯಲ್ಲಿ ಸೋಯಾಬಿನ್ ಅತ್ಯಧಿಕ ಪ್ರಮಾಣದಲ್ಲಿ ಬಿತ್ತನೆ: ಸಚಿವರ ಮೆಚ್ಚುಗೆ

Source: SO News | By Laxmi Tanaya | Published on 4th September 2021, 8:38 PM | State News | Don't Miss |

ಬೀದರ : ಮಾರುಕಟ್ಟೆಯಲ್ಲಿ ಲಾಭದಾಯಕ ಎಣ್ಣೆ ಕಾಳು ಬೆಳೆ ಎಂದು ಗುರುತಿಸಿಕೊಂಡಿರುವ ಸೋಯಾಬಿನ್ ಬೆಳೆಯನ್ನು ಬೀದರ ಜಿಲ್ಲೆಯಲ್ಲಿ ದಾಖಲೆಯ ಪ್ರಮಾಣ 2,02,000 ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಮಾಡಿರುವುದು ಪ್ರಗತಿಯ ಲಕ್ಷಣವಾಗಿದೆ ಎಂದು ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವರಾದ ಶೋಭಾ ಕರಂದ್ಲಾಜೆ ಅವರು ಮೆಚ್ಚುಗೆ ವ್ಯಕ್ತಪಡಿಸಿದರು.

ಜಿಲ್ಲಾ ಪಂಚಾಯತ್ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಅವರು ಮಾತನಾಡಿದರು.

ರೈತರಿಗೆ ಮಾರುಕಟ್ಟೆ ತುಂಬಾ ಮುಖ್ಯ. ನಾವು ಇದನ್ನು ಅರಿಯಬೇಕು. ದೇಶದಲ್ಲಿ ಎಣ್ಣೆ ಕಾಳು ಬೆಳೆಗಳಿಗೆ ಹೆಚ್ಚಿನ ಬೇಡಿಕೆ ಇದೆ. ವಿವಿಧ ಎಣ್ಣೆ ಕಾಳುಗಳನ್ನು ಬೆಳೆಯುವಂತಹ ವಾತಾವರಣವು ನಮ್ಮ ದೇಶದಲ್ಲಿದೆ. ಅಂತಹ ಮಣ್ಣು ಕೂಡ ಇದೆ. ಇಂತಹ ವಿಷಯಗಳನ್ನು ರೈತರಿಗೆ ತಿಳಿಸಿ ಲಾಭದಾಯಕ ಎಣ್ಣೆ ಕಾಳುಗಳ ಬೆಳೆಗಳನ್ನು ಬೆಳೆಯಲು ಪ್ರೋತ್ಸಾಹ ನೀಡಬೇಕು ಎಂದರು.

ಯಾವುದೇ ಬೆಳೆಗಳನ್ನು ಗುಣಮಟ್ಟದ ರೀತಿಯಲ್ಲಿ ಬೆಳೆದರೆ ಅದಕ್ಕೆ ಬೇಡಿಕೆಯು ಹೆಚ್ಚಿರುತ್ತದೆ. ಒಣ ಬೇಸಾಯ ಇಲ್ಲವೇ ನೀರಾವರಿಯಲ್ಲಿ ಕೂಡ ಉತ್ತಮ ಗುಣಮಟ್ಟದ ಬೆಳೆಗಳನ್ನು ಬೆಳೆಯಲು ಅವಕಾಶವಿದೆ. ಈ ದೃಷ್ಟಿಕೋನವಿಟ್ಟುಕೊಂಡು ಕೃಷಿ ಮತ್ತು ತೋಟಗಾರಿಕೆ ಇಲಾಖೆಗಳು ಕೆಲಸ ಮಾಡಬೇಕಿದೆ. ರೈತರ ಆದಾಯವು ದ್ವಿಗುಣವಾಗಬೇಕು ಎಂದರೆ ನಾವು ಅವರಿಗೆ ಒಳ್ಳೆಯ ಮಾರುಕಟ್ಟೆ ಕಲ್ಪಿಸಬೇಕು. ಕೃಷಿ ಮತ್ತು ತೋಟಗಾರಿಕಾ ಇಲಾಖೆಯ ಅಧಿಕಾರಿಗಳು ಈ ಬಗ್ಗೆ ಚಿಂತನ ಮಂಥನ ನಡೆಸಿ ರೈತರಿಗೆ ಸಹಾಯ ಮಾಡಬೇಕು. ಲಾಭದಾಯಕ ಬೆಳೆ ತೆಗೆಯುವ ಮತ್ತು ಮಾರುಕಟ್ಟೆಯ ಬಗ್ಗೆ ರೈತರಿಗೆ ಹೆಚ್ಚಿನ ಅರಿವು ಮೂಡಿಸಲು ಮುಂದಾಗಬೇಕು ಎಂದು ಸಲಹೆ ಮಾಡಿದರು.

ಈ ಸಂದರ್ಭದಲ್ಲಿ ಕೃಷಿ ಇಲಾಖೆಯ ಜಂಟಿ ನಿರ್ದೇಶಕಿ ತಾರಾಮಣಿ ಜಿ.ಎಚ್. ಮಾತನಾಡಿ, ಒಂದು ಜಿಲ್ಲೆ ಒಂದು ಬೆಳೆ ಯೋಜನೆಗೆ ಬೀದರ ಜಿಲ್ಲೆಯಿಂದ ಹಸಿ ಶುಂಠಿ ಆಯ್ಕೆಯಾಗಿದೆ. ಜಿಲ್ಲೆಯಲ್ಲಿ ತುಂಬಾ ಬೇಡಿಕೆ ಇರುವ ಬೆಳೆಗಳನ್ನು ಬೆಳೆಯಲು ರೈತರಿಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಅವರಿಗೆ ಸಾಲ ಸೌಲಭ್ಯ ಒದಗಿಸಲು ಕೂಡ ಪ್ರಯತ್ನಿಸಲಾಗುತ್ತಿದೆ ಎಂದು ತಿಳಿಸಿದರು.

ಸಭೆಯಲ್ಲಿ ಪಶು ಸಂಗೋಪನೆ ಹಾಗೂ ಬೀದರ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಭು ಚವ್ಹಾಣ್, ಬೀದರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಬಾಬು ವಾಲಿ, ನಿಗಮ ಮಂಡಳಿಯ ಅಧ್ಯಕ್ಷರಾದ ಡಾ.ಶೈಲೇಂದ್ರ ಬೆಲ್ದಾಳೆ, ಜಿಲ್ಲಾ ಪಂಚಾಯತ್ ಸಿಇಓ ಜಹೀರಾ ನಸೀಂ, ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಡಾ.ಗೋಪಾಲ್ ಎಂ.ಬ್ಯಾಕೋಡ್ ಹಾಗೂ ಇತರರು ಇದ್ದರು.

Read These Next

ಸಂವಿಧಾನ ಮತ್ತು  ಪ್ರಜಾಪ್ರಭುತ್ವ ಉಳಿಸುವುದಕ್ಕೆ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ಎಂದು ರಾಹುಲ್ ಗಾಂಧಿ ಕರೆ

ಮಾಲೂರು : ಈ ಲೋಕಸಭೆ ಚುನಾವಣೆಯು ಎರಡು ಸಿದ್ಧಾಂತಗಳ ನಡುವಿನ ಯುದ್ಧ ಇಂಡಿಯಾ ಬಣ ಒಂದು ಕಡೆ "ಸಂವಿಧಾನಕ್ಕಾಗಿ ಹೋರಾಟ" ನಡೆಸುತ್ತಿದೆ ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...