ಭ್ರಷ್ಟಾಚಾರ ಕಂಡುಬಂದರೆ ದೂರು ದಾಖಲಿಸುವಂತೆ ಎಸ್ಪಿ ಕರೆ

Source: SO News | By Laxmi Tanaya | Published on 27th September 2022, 6:38 PM | Coastal News |

ಮಂಗಳೂರು : ಸರ್ಕಾರದ ಕಚೇರಿಗಳಲ್ಲಿ ಭ್ರಷ್ಟಾಚಾರ ಕಂಡುಬಂದಲ್ಲಿ ಅಥವಾ ಭ್ರಷ್ಟಾಚಾರಕ್ಕೆ ಸಂಬಂಧಿಸಿದ ಯಾವುದೇ ದೂರುಗಳಿದ್ದಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ವ್ಯಾಪ್ತಿಯ ಸಾರ್ವಜನಿಕರು ನೇರವಾಗಿ ಲೋಕಾಯುಕ್ತರಿಗೆ ದೂರು ಸಲ್ಲಿಸುವಂತೆ  ಮಂಗಳೂರು ಹಾಗೂ ಉಡುಪಿ ವಿಭಾಗದ ಲೋಕಾಯುಕ್ತ ಎಸ್.ಪಿ ಲಕ್ಷ್ಮೀ ಗಣೇಶ್  ಅವರು ತಿಳಿಸಿದರು.

ಸೋಮವಾರ ನಗರದ ಉರ್ವಾಸ್ಟೋರ್ ಹತ್ತಿರದಲ್ಲಿರುವ ಕರ್ನಾಟಕ ಲೋಕಾಯುಕ್ತ ಪೊಲೀಸ್ ಅಧೀಕ್ಷಕರ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಅವರು ಮಾತನಾಡಿದರು. 

ಸರ್ಕಾರಿ ಅಧಿಕಾರಿಗಳು ಭ್ರಷ್ಟಾಚಾರದಲ್ಲಿ ತೊಡಗಿದರೆ ಅಥವಾ ಗಳಿಕೆಗಿಂತ ಹೆಚ್ಚಿನ ಆಸ್ತಿಯನ್ನು ಹೊಂದಿದರೆ ಅವರ ವಿರುದ್ಧ ಸಾರ್ವಜನಿಕರು ದೂರು ಸಲ್ಲಿಸಿ ಪರಿಹಾರ ಕಂಡುಕೊಳ್ಳಬಹುದಾಗಿದೆ, ರಾಜ್ಯ ಸರ್ಕಾರ ಕರ್ನಾಟಕ ಲೋಕಾಯುಕ್ತವನ್ನು 2022ರ ಸೆ.9ರಿಂದ ಮತ್ತಷ್ಟು ಬಲಿಗೊಳಿಸುವುದರೊಂದಿಗೆ, ಪೊಲೀಸ್ ಠಾಣಾ ಅಧಿಕಾರದ ಜೊತೆಗೆ ಭ್ರಷ್ಟಾಚಾರವನ್ನು ನಿರ್ಮೂಲನೆ ಮಾಡಲು ಹೆಚ್ಚಿನ ಕೆಲಸ ಮಾಡುವ ಅಧಿಕಾರ ನೀಡಿದೆ. ಯಾರಾದರೂ ಸರ್ಕಾರಿ ಅಧಿಕಾರಿಗಳು ಭ್ರಷ್ಟಾಚಾರ, ಅಕ್ರಮ ಆಸ್ತಿ ಗಳಿಕೆ, ಅಧಿಕಾರ ದುರ್ಬಳಕೆ ಅಥವಾ ಕೆಲಸ ಮಾಡಿಕೊಡಲು ಹಣ ಕೇಳುತ್ತಿರುವ ಬಗ್ಗೆ ದೂರು ಬಂದರೆ ಅವರು ಆ ವ್ಯಕ್ತಿಯ ವಿರುದ್ಧ ದೂರು ನೀಡಿದರೆ ಅವರ  ವಿರುದ್ಧ ತನಿಖೆ ಆರಂಭಿಸಿಲು ಸೂಕ್ತ ಕ್ರಮ ವಹಿಸಲಾಗುವುದು ಎಂದು ಹೇಳಿದರು.

ಲೋಕಾಯುಕ್ತ ಮಂಗಳೂರು ವಿಭಾಗ ಎಂದರೆ ಮಂಗಳೂರು ಹಾಗೂ ಉಡುಪಿ ಜಿಲ್ಲೆ ಎರಡು ಜೊತೆಗೂಡುತ್ತದೆ. ಈಗಾಗಲೇ ಎಸಿಬಿ ಯಲ್ಲಿರುವ ಹಳೆಯ ಪ್ರಕರಣಗಳನ್ನು ಲೋಕಾಯುಕ್ತಕ್ಕೆ ವರ್ಗಾವಣೆ ಮಾಡುವ ಕಾರ್ಯ ನಡೆಯುತ್ತಿದೆ. ವರ್ಗಾವಣೆಯಾದ ಬಳಿಕ ಇರುವ ಪ್ರಕರಣಗಳ ವಿರುದ್ಧ ತನಿಖೆಯನ್ನು ಕೈಗೆತ್ತಿಕೊಳ್ಳಲಾಗುತ್ತದೆ. ಈಗಾಗಲೇ ಮಂಗಳೂರು ವಿಭಾಗದಲ್ಲಿ 2 ಡಿವೈಎಸ್ಪಿ ಹಾಗೂ 1 ಇನ್ಸ್‍ಪೆಕ್ಟರ್ ಹುದ್ದೆ ಇದ್ದರೆ 1 ಇನ್ಸಪೆಕ್ಟರ್ ಹಾಗೂ 6 ಪಿಸಿ ಗಳ ಹುದ್ದೆಗಳು ಖಾಲಿ ಉಳಿದಿದೆ.
 ಉಡುಪಿಯಲ್ಲಿ 1 ಡಿವೈಎಸ್ಪಿ ಹಾಗೂ 1 ಇನ್ಸಪೆಕ್ಟರ್ ಹುದ್ದೆ ಇರುತ್ತದೆ. ಇದರಲ್ಲಿ 1 ಇನ್ಸಪೆಕ್ಟರ್ ಹುದ್ದೆ ಖಾಲಿಯಿದೆ. ಈ ಖಾಲಿ ಇರುವ ಹುದ್ದೆಗಳನ್ನು  ಶೀಘ್ರದಲ್ಲಿಯೇ ಭರ್ತಿ ಮಾಡಲಾಗುವುದು. ಲೋಕಾಯುಕ್ತಕ್ಕೆ ಈಗ ಹೆಚ್ಚಿನ ಅಧಿಕಾರ ನೀಡಿರುವ ಜೊತೆಗೆ ಪಿಸಿ ಕಾಯಿದೆ (ಭ್ರಷ್ಟಾಚಾರ ನಿರ್ಮೂಲನಾ ಕಾಯಿದೆ)ಯ ಹೊಣೆಗಾರಿಕೆ ಕೂಡ ಲೋಕಾಯುಕ್ತಕ್ಕೆ ದೊರಕಿದೆ. ಇನ್ನುಳಿದಂತೆ ಪೊಲೀಸ್ ಠಾಣೆಯ ರೀತಿಯಲ್ಲಿ ಲೋಕಾಯುಕ್ತ ಇನ್ನು ಮುಂದೆ ಕಾರ್ಯಾಚರಣೆಯನ್ನು ನಡೆಸುತ್ತದೆ. ಭ್ರಷ್ಟಾಚಾರದ ವಿರುದ್ದ ದೂರು ನೀಡಿದರೆ  ಅದರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಾಗುತ್ತದೆ. ಎಸಿಬಿಗಿಂತ ಮೊದಲು ಲೋಕಾಯುಕ್ತ ಅಧಿಕಾರದಲ್ಲಿದ್ದಾಗ ಮಂಗಳೂರು ವಿಭಾಗ 12 ಪ್ರಕರಣಗಳಿಗೆ ಶಿಕ್ಷೆ ವಿಧಿಸಲಾಗಿತ್ತು ಎಂದು ಮಾಹಿತಿ ನೀಡಿದರು.

ಲೋಕಾಯುಕ್ತದ ಉಡುಪಿ ಡಿವೈಎಸ್ಪಿ ಜಗದೀಶ್, ಮಂಗಳೂರು ಡಿವೈಎಸ್ಪಿ ಚಲುವರಾಜು, ಕಲಾವತಿ, ಉಡುಪಿ ಪೊಲೀಸ್ ನಿರೀಕ್ಷಕರಾದ ಜಯರಾಮ ಡಿ. ಗೌಡ ಹಾಗೂ ಮಂಗಳೂರು ಪೊಲೀಸ್ ನಿರೀಕ್ಷಕ ಎನ್. ಅಮಾನುಲ್ಲಾ ಗೋಷ್ಠಿಯಲ್ಲಿದ್ದರು.

Read These Next

ಉತ್ತರಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು 19 ಅಭ್ಯರ್ಥಿಗಳಿಂದ 36 ನಾಮಪತ್ರ ಸಲ್ಲಿಕೆ.

ಕಾರವಾರ :12- ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ , ನಾಮಪತ್ರಗಳ ಸಲ್ಲಿಕೆಗೆ ಕೊನೆಯ ದಿನವಾದ ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...