ಮಾನಸಿಕ, ದೈಹಿಕ ಸದೃಢತೆಗೆ ಕ್ರೀಡೆಗಳು ಅತ್ಯವಶ್ಯಕ – ಜೆ. ಮಂಜುನಾಥ್

Source: sonews | By Staff Correspondent | Published on 11th September 2019, 11:25 PM | State News |

ಕೋಲಾರ: ಮಾನಸಿಕವಾಗಿ, ದೈಹಿಕವಾಗಿ ಸದೃಢರಾಗಲು ಕ್ರೀಡೆಗಳು ಅವಿಭಾಜ್ಯ ಅಂಗವಾಗಿದ್ದು, ಕ್ರೀಡೆಗಳಲ್ಲಿ ತೊಡಗಿಸಿಕೊಳ್ಳುವುದರಿಂದ ಸರ್ವಾಂಗೀಣ ಬೆಳವಣಿಗೆ ಸಾಧ್ಯವಾಗಲಿದೆ ಎಂದು ಜಿಲ್ಲಾಧಿಕಾರಿಗಳಾದ  ಜೆ. ಮಂಜುನಾಥ್ ಅವರು ತಿಳಿಸಿದರು.

ಇಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತ್ ಸಾರ್ವಜನಿಕ ಶಿಕ್ಷಣ ಇಲಾಖೆ ಕೋಲಾರ ವತಿಯಿಂದ ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ 2019-20ನೇ ಸಾಲಿನ ಕೋಲಾರ ಜಿಲ್ಲಾ ಮಟ್ಟದ 14 ಮತ್ತು 17 ವರ್ಷ ವಯೋಮಿತಿಯ ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಬಾಲಕ ಮತ್ತು ಬಾಲಕಿಯರ ಕ್ರೀಡಾಕೂಟವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಕ್ರೀಡೆಗಳನ್ನು ಆಡುವುದರಿಂದ ಮಕ್ಕಳಲ್ಲಿ ಹೊಂದಾಣಿಕೆ ಮನೋಭಾವ ಆತ್ಮ ಸ್ಥೈರ್ಯ ವೃದ್ದಿಯಾಗುತ್ತದೆ. ಜೀವನದಲ್ಲಿ ಬಹು ಮುಖ್ಯವಾಗಿ ಇರಬೇಕಾದಂತಹ ಗುಣಲಕ್ಷಣಗಳು ಅಭಿವೃದ್ದಿಯಾಗಲು ಸಾಧ್ಯವಾಗುತ್ತದೆ ಎಂದು ತಿಳಿಸಿದರು.

ಕ್ರೀಡಾ ಜ್ಯೋತಿಯ ಮುಂದೆ 5 ಸುರಳಿಯಾಕಾರದ ಒಲಂಪಿಕ್ ಚಿಹ್ನೆಯನ್ನು ಹೊಂದಿದ್ದು ಇದು ಬಲಶಾಲಿಯಾಗಿ, ವೇಗವಾಗಿ, ಹೆಚ್ಚಿನದನ್ನು ಸಾಧಿಸುವ ಛಲ ಹೊಂದುವುದು ಎಂಬರ್ಥವನ್ನು ನೀಡುವುದಾಗಿದೆ ಎಂದರು. 

ಎರಡು ದಿನಗಳ ಕಾಲ ವಾಲಿಬಾಲ್, ಥ್ರೋಬಾಲ್, ಕಬ್ಬಡಿ, ಖೋ ಖೋ, ಜಾವೆಲಿನ್, ಗುಂಡುಎಸೆತ, ವಿವಿಧ ಕ್ರೀಡೆಗಳು ಹಂತ ಹಂತವಾಗಿ ನಡೆಯಲಿವೆ. ಹೋಬಳಿ, ತಾಲ್ಲೂಕು ಮಟ್ಟದಲ್ಲಿ ಆಯ್ಕೆಯಾದ ಮಕ್ಕಳು ಜಿಲ್ಲಾ ಮಟ್ಟದಲ್ಲಿ ಸ್ವರ್ಧೆಯನ್ನು ಎದುರಿಸುತ್ತಿದ್ದು, ಇಲ್ಲಿ ಭಾಗವಹಿಸಿ ಮುಂದೆ ಗೆದ್ದಂತಹ ಮಕ್ಕಳು ರಾಜ್ಯ ಮಟ್ಟದಲ್ಲಿ ಹಾಗೂ ರಾಷ್ಟ್ರ ಮಟ್ಟದಲ್ಲಿ ಗುರುತಿಸಿಕೊಳ್ಳಲು ಸಾಧ್ಯವಾಗಲಿದೆ ಎಂದು ತಿಳಿಸಿದರು

ಕ್ರೀಡೆಗಳಲ್ಲಿ ಉತ್ಸಾಹದಿಂದ ಪಾಲ್ಗೊಳ್ಳಬೇಕು ಸೋಲು ಗೆಲುವು ಇಲ್ಲಿ ಮುಖ್ಯವಾಗುವುದಿಲ್ಲ ಭಾಗವಹಿಸುವುದು ತುಂಬಾ ಮುಖ್ಯ. ಹೆಚ್ಚಿನ ಸಂಖ್ಯೆಯಲ್ಲಿ ಜಿಲ್ಲೆಯ ಮಕ್ಕಳು ಕ್ರೀಡೆಗಳಲ್ಲಿ ಪಾಲ್ಗೊಳ್ಳಬೇಕು ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ಕ್ರೀಡಾಪಟುಗಳು ಜಿಲ್ಲೆಯನ್ನು ಪ್ರತಿನಿಧಿಸುವಂತಾಗಬೇಕು ಎಂದು ತಿಳಿಸಿದರು.

ಕ್ರೀಡೆಗಳಲ್ಲಿ ಎಲ್ಲಾ ತಾಲ್ಲೂಕಿನ ವಿವಿಧ ಶಾಲೆಗಳ  ಸುಮಾರು ಎರಡು ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಇದೇ ಸಂದರ್ಭದಲ್ಲಿ ರಾಷ್ಟ್ರಮಟ್ಟದ ಕ್ರೀಡೆಗಳಲ್ಲಿ ಭಾಗವಹಿಸಿ ಪ್ರಶಸ್ತಿ ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಜೂಡೋ ಕ್ರೀಡೆಯಲ್ಲಿ ಕೋಲಾರ ಜಿಲ್ಲೆಯ ಸರ್ಕಾರಿ ಪ್ರೌಢಶಾಲಾ ತೊರದೇವಂಡಹಳ್ಳಿಯ 3 ವಿದ್ಯಾರ್ಥಿಗಳಾದ ರಕ್ಷಿತ, ಸುಷ್ಮಾ, ನಂದುಶ್ರೀ, ವಿಶೇಷ ಅಗತ್ಯ ಮಕ್ಕಳ ಕ್ರೀಡಾಕೂಟದಲ್ಲಿ ಶ್ರೀನಿವಾಸಪುರ ತಾಲ್ಲೂಕಿನ ವಿದ್ಯಾರ್ಥಿನಿಯಾದ ಕೀರ್ತಿಶ್ರೀಲಕ್ಷ್ಮಿ, ಅಥ್ಲೆಟಿಕ್ಸ್ ಕ್ರೀಡೆಯಲ್ಲಿ ಮಾಲೂರು ತಾಲ್ಲೂಕಿನ ವಿದ್ಯಾರ್ಥಿ ಅಜಿತ್ ಅವರನ್ನು ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಕೆ.ರತ್ನಯ್ಯ, ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾದ ಅಶೋಕ್, ಕ್ಷೇತ್ರ ಶಿಕ್ಷಣಾಧಿಕಾರಿಯಾದ ನಾಗರಾಜಗೌಡ, ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿಯಾದ ಎಂ. ಮಂಜುನಾಥ್, ಜಿಲ್ಲಾ ಪ್ರೌಢ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರಾದ ಶಂಕರಪ್ಪ, ರಾಜ್ಯದ ಪರಿಶಿಷ್ಠ ಜಾತಿ ಹಾಗೂ ಪರಿಶಿಷ್ಠ ಪಂಗಡದ ನೌಕರರ ಅಧ್ಯಕ್ಷರಾದ ಮುನಿಯಪ್ಪ, ಜಿಲ್ಲಾ ನೌಕರರ ಸಂಘದ ಪ್ರಧಾನ ಕಾರ್ಯದರ್ಶಿಯಾದ ಮುರುಳಿ ಮೋಹನ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರಾದ ಮುಕುಂದ, ಚೌಡಪ್ಪ ಸೇರಿದಂತೆ ತಾಲ್ಲೂಕು ಮಟ್ಟದ ದೈಹಿಕ ಶಿಕ್ಷಕರು ಮತ್ತಿತರರು ಉಪಸ್ಥಿತರಿದ್ದರು.

ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ

Read These Next

'ಚುನಾವಣಾ ಬಾಂಡ್' ವಿಶ್ವದ ದೊಡ್ಡ ಹಗರಣ; ಬಿಜೆಪಿ ವಿರುದ್ಧ ರಾಹುಲ್‌ ಗಾಂಧಿ ವಾಗ್ದಾಳಿ

ಬಿಜೆಪಿಯ ಚುನಾ ವಣಾ ಬಾಂಡ್ ವಿಶ್ವದ ಅತ್ಯಂತ ದೊಡ್ಡ ಹಗರಣವಾಗಿದ್ದು, ಗೂಂಡಾಗಳ ರೀತಿಯಲ್ಲಿ ಕೆಲವು ಉದ್ಯಮಿಗಳನ್ನು ಬೆದರಿಸಿ ಹಫ್ತಾ ...

ಸಂವಿಧಾನ ಮತ್ತು  ಪ್ರಜಾಪ್ರಭುತ್ವ ಉಳಿಸುವುದಕ್ಕೆ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ಎಂದು ರಾಹುಲ್ ಗಾಂಧಿ ಕರೆ

ಮಾಲೂರು : ಈ ಲೋಕಸಭೆ ಚುನಾವಣೆಯು ಎರಡು ಸಿದ್ಧಾಂತಗಳ ನಡುವಿನ ಯುದ್ಧ ಇಂಡಿಯಾ ಬಣ ಒಂದು ಕಡೆ "ಸಂವಿಧಾನಕ್ಕಾಗಿ ಹೋರಾಟ" ನಡೆಸುತ್ತಿದೆ ...