ದೈಹಿಕ ಮತ್ತು ಮಾನಸಿಕವಾಗಿ ಸದೃಡಗೊಳಿಸಲು ಕ್ರೀಡೆ ಅಗತ್ಯ

Source: so news | Published on 10th January 2020, 12:11 AM | Coastal News | Don't Miss |


ಮಂಗಳೂರು; ಕ್ರೀಡೆ ವ್ಯಕ್ತಿಯನ್ನು  ದೈಹಿಕ ಮತ್ತು ಮಾನಸಿಕವಾಗಿ ಸದೃಡಗೊಳಿಸುತ್ತದೆ. ಹಾಗಾಗಿ ಸರ್ಕಾರಿ ನೌಕರರು ಕ್ರೀಡೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳುವುದು ತುಂಬಾ ಮುಖ್ಯ ಎಂದು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು ಹೇಳಿದರು.
ದಕ್ಷಿಣ ಕನ್ನಡ ಜಿಲ್ಲಾಡಳಿತ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಮಂಗಳೂರು ಮಹಾನಗರಪಾಲಿಕೆ, ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ (ರಿ) ದಕ್ಷಿಣ ಕನ್ನಡ ಶಾಖೆ ಮಂಗಳೂರು ಇವುಗಳ ಸಂಯುಕ್ತಾಶ್ರಯದಲ್ಲಿ ಗುರುವಾರ ಮಂಗಳಾ ಕ್ರೀಡಾಂಗಣದಲ್ಲಿ ಹಮ್ಮಿಕೊಂಡ ದಕ್ಷಿಣ ಜಿಲ್ಲಾ ಮಟ್ಟದ ಸರಕಾರಿ ನೌಕರರ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿದರು.
ಸರಕಾರಿ ನೌಕರರಿಗೆ ಕ್ರೀಡೆಯಲ್ಲಿ ಭಾಗವಹಿಸಲು ಇದೊಂದು ಉತ್ತಮ ವೇದಿಕೆಯಾಗಿದ್ದು, ಇದನ್ನು ಸದುಪಯೋಗಪಡಿಸಿಕೊಂಡು ಇನ್ನಷ್ಟು ಸಾಧಿಸಬೇಕು. ಈಗಾಗಲೇ ಅಂತರಾಷ್ಟ್ರೀಯ ಮಟ್ಟದಲ್ಲಿ ಸರಕಾರಿ ನೌಕರರು ಕ್ರೀಡೆಯಲ್ಲಿ ಸಾಧನೆ ಮಾಡಿದ್ದಾರೆ ಇದು ಹೆಮ್ಮೆ ಸಂಗತಿ ಎಂದರು. ವಯೋಮಾನದ ಮಿತಿಯಿಲ್ಲದೆ  ಕ್ರೀಡೆಯಲ್ಲಿ ಭಾಗವಹಿಸಬೇಕು. ಸರಕಾರಿ ಕೆಲಸ ಎಂದರೆ ದೇವರ ಕೆಲಸ, ಹಾಗಾಗಿ ದಿನನಿತ್ಯ ತಮ್ಮನ್ನು ತಾವು ಸೇವೆಯಲ್ಲಿ ತೊಡಗಿಸಿಕೊಳ್ಳಬೇಕು ಎಂದು ಹೇಳಿದರು.
ಕ್ರೀಡಾಕೂಟಕ್ಕೆ ಧ್ವಜಾರೋಹಣ ಮಾಡುವ ಮೂಲಕ ಚಾಲನೆ ನೀಡಿದ ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಸೆಲ್ವಮಣಿ ಆರ್ ಮಾತನಾಡಿ, ಕ್ರೀಡೆಯಲ್ಲಿ ಗೆಲ್ಲುವುದಕ್ಕಿಂತ ಭಾಗವಹಿಸುವುದು ಮುಖ್ಯ.  ಹಾಗಾಗಿ ಕ್ರೀಡೆಯಲ್ಲಿ ಭಾಗವಹಿಸಿ ತಮ್ಮ ದಿನನಿತ್ಯದ ಒತ್ತಡ ಕೆಲಸದಿಂದ  ವಿರಾಮಗೊಳ್ಳಲು ಸಾಧ್ಯವಾಗುತ್ತದೆ ಎಂದರು. ಮುಂದಿನ ದಿನಗಳಲ್ಲಿ ಜಿಲ್ಲೆಯ ಎಲ್ಲಾ ಸರಕಾರಿ ನೌಕರರು ಇನ್ನಷ್ಟು ಹೆಚ್ಚಿನ ಸಂಖ್ಯೆಯಲ್ಲಿ ಕ್ರೀಡಾಕೂಟದಲ್ಲಿ ಪಾಲ್ಗೊಳ್ಳಬೇಕು ಮತ್ತು ಭಾಗವಹಿಸಿದ ಎಲ್ಲಾ ಸರಕಾರಿ ನೌಕರರಿಗೆ ಮತ್ತು ಕ್ರೀಡಾಪಟುಗಳಿಗೆ ಅಭಿನಂಧನೆ ತಿಳಿಸಿದರು.
ಕಾರ್ಯಕ್ರಮದಲ್ಲಿ ಅಂತರಾಷ್ಟ್ರೀಯ ಮಟ್ಟದಲ್ಲಿ ಕ್ರೀಡೆಯಲ್ಲಿ ಸಾಧನೆ ಮಾಡಿದ ಹೇಮಚಂದ್ರ, ಭಾಗಿರಥಿ ರೈ, ವಿನ್ಸೆಂಟ್ ಪ್ರಕಾಶ್, ನಾಗರಾಜ್ ಖಾರ್ವಿ, ಕಾಶಿಮಠ ಈಶ್ವರ ಭಟ್ ಸರಕಾರಿ ನೌಕರರನ್ನು ಸನ್ಮಾನಿಸಲಾಯಿತು.
ಕಾರ್ಯಕ್ರಮದಲ್ಲಿ ಮಂಗಳೂರು ಮಹಾನಗರಪಾಲಿಕೆಯ ಸದಸ್ಯೆ ಸಂಧ್ಯಾ ಎಂ.ಆಚಾರ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಉಪ ನಿರ್ದೇಶಕ ಪ್ರದೀಪ್ ಡಿ ಸೋಜಾ, ಕಾರ್ಯದರ್ಶಿ ನವೀನ್ ಕುಮಾರ್, ಬೆಳ್ತಂಗಡಿ ತಹಶಿಲ್ದಾರ್ ಗಣಪತಿ ಶಾಸ್ತ್ರೀ, ಮಾಜಿ ಅಧ್ಯಕ್ಷ ಪ್ರಕಾಶ್ ನಾಯಕ್, ರಾಜ್ಯ ಸಂಘಟನಾ ಕಾರ್ಯದರ್ಶಿ ಹಾಗೂ ದ.ಕ ರಾಜ್ಯ ಪರಿಷತ್ ಸದಸ್ಯೆ ಶೆರ್ಲಿ, ಬಂಟ್ವಾಳ ತಾಲೂಕು ಅಧ್ಯಕ್ಷ  ಉಮನಾಥ್ ರೈ ಹಾಗೂ ಇನ್ನಿತರರು ಉಪಸ್ಥಿತರಿದ್ದರು.

Read These Next

ಗಣರಾಜ್ಯೋತ್ಸವ ಸಮಾರಂಭದಲ್ಲಿ ನ್ಯೂ ಶಮ್ಸ್ ಶಾಲಾ ವಿದ್ಯಾರ್ಥಿಗಳಿಂದ ಸಂವಿಧಾನದ ಪ್ರಸ್ತಾವನೆ ಓದು

ಭಟ್ಕಳ: ಇಲ್ಲಿನ ತರಬಿಯತ್ ಎಜ್ಯುಕೇಶನ್ ಸೂಸೈಟಿ ನ್ಯೂ ಶಮ್ಸ್ ಸ್ಕೂಲ್ ನಲ್ಲಿ ರವಿವಾರ ಜರಗಿದ 71ನೆ ಗಣರಾಜ್ಯೋತ್ಸವ ಅತ್ಯಂತ ...

ಗಣರಾಜ್ಯೋತ್ಸವ ಸಮಾರಂಭದಲ್ಲಿ ನ್ಯೂ ಶಮ್ಸ್ ಶಾಲಾ ವಿದ್ಯಾರ್ಥಿಗಳಿಂದ ಸಂವಿಧಾನದ ಪ್ರಸ್ತಾವನೆ ಓದು

ಭಟ್ಕಳ: ಇಲ್ಲಿನ ತರಬಿಯತ್ ಎಜ್ಯುಕೇಶನ್ ಸೂಸೈಟಿ ನ್ಯೂ ಶಮ್ಸ್ ಸ್ಕೂಲ್ ನಲ್ಲಿ ರವಿವಾರ ಜರಗಿದ 71ನೆ ಗಣರಾಜ್ಯೋತ್ಸವ ಅತ್ಯಂತ ...