ದೈಹಿಕ ಮತ್ತು ಮಾನಸಿಕ ನೆಮ್ಮದಿಗೆ ಕ್ರೀಡೆ ಸಹಕಾರಿ : ನ್ಯಾ.ಮಂಜುನಾಥ ನಾಯಕ್

Source: SO News | By Laxmi Tanaya | Published on 29th November 2023, 10:31 PM | State News | Don't Miss |

ಶಿವಮೊಗ್ಗ : ದಿನನಿತ್ಯ ಕೆಲಸದ ಒತ್ತಡದಲ್ಲಿಯೇ ದಿನಕಳೆಯುವ ಪೊಲೀಸ್ ಅಧಿಕಾರಿ-ಸಿಬ್ಬಂಧಿಗಳು ಕ್ರೀಡೆ ಮತ್ತು ಸಾಂಸ್ಕøತಿಕ ಚಟುವಟಿಕೆಗಳಲ್ಲಿ ತೊಡಗಿಕೊಳ್ಳುವುದರಿಂದ ವ್ಯಕ್ತಿಯ ದೈಹಿಕ ಮತ್ತು ಮಾನಸಿಕ ವಿಕಾಸಕ್ಕೆ ಸಹಕಾರಿಯಾಗಲಿದೆ ಎಂದು ಪ್ರಧಾನ ಜಿಲ್ಲಾ ಸತ್ರ ನ್ಯಾಯಾಧೀಶ ಮಂಜುನಾಥ ನಾಯ್ಕ್ ಅವರು ಹೇಳಿದರು.

ಶಿವಮೊಗ್ಗ ಜಿಲ್ಲಾ ಪೊಲೀಸ್ ಘಟಕವು ನಗರದ ಪೊಲೀಸ್ ಕವಾಯತು ಮೈದಾನದಲ್ಲಿ ಏರ್ಪಡಿಸಲಾಗಿದ್ದ ವಾರ್ಷಿಕ ಕ್ರೀಡಾಕೂಟವನ್ನು ಬಲೂನು ಹಾರಿಬಿಡುವ ಮೂಲಕ ಉದ್ಘಾಟಿಸಿ ಮಾತನಾಡುತ್ತಿದ್ದರು. ಕ್ರೀಡೆಯು ವ್ಯಕ್ತಿಯ ದೈಹಿಕ ಮತ್ತು ಮಾನಸಿಕ ವಿಕಾಸಕ್ಕೆ ಮಾತ್ರವಲ್ಲದೆ ವ್ಯಕ್ತಿ ದಿನವಿಡೀ ಸದಾ ಲವಲವಿಕೆಯಿಂದಿರಲು, ಉಲ್ಲಸಿತನಾಗಿರುವಲ್ಲಿ ಸಹಕಾರಿಯಾಗಲಿದೆ. ಇದರಿಂದ ವೃತ್ತಿಜೀವನ ಸಂತಸದಾಯಕವಾಗಿರಲಿದೆ ಎಂದವರು ನುಡಿದರು.

 ಸೋಲು ಸಾಮಾನ್ಯ ಸಂಗತಿ. ಪ್ರತಿ ಹಂತದಲ್ಲೂ ಗೆಲುವನ್ನೇ ನಿರೀಕ್ಷಿಸುವುದು ಸಾಧ್ಯವಿಲ್ಲ. ಅನೇಕ ಸಂದರ್ಭಗಳಲ್ಲಿ ಸೋಲುಗಳು ವ್ಯಾವಹಾರಿಕ ಬದುಕಿನಲ್ಲಿ ಗೆಲ್ಲುವುದನ್ನು, ಸವಾಲುಗಳಿಗೆ ಮುಖಾಮುಖಿಯಾಗುವುದನ್ನು ತಿಳಿಸುತ್ತವೆ. ಸೋಲು ಮುಂದಿನ ಗೆಲುವಿಗೆ ಮುನ್ನುಡಿಯಾಗುತ್ತವೆ ಎಂದರು.

 ಕ್ರೀಡೆಯು ವ್ಯಕ್ತಿಗೆ ಉಲ್ಲಾಸದಾಯಕ ವಾತಾವರಣ ನಿರ್ಮಿಸಲು ಸಹಕಾರಿಯಾಗಿರುವಂತೆಯೇ ತನ್ನಲ್ಲಿ ಸುಪ್ತವಾಗಿರುವ ಪ್ರತಿಭೆಯ ಅನಾವರಣಕ್ಕೆ ವೇದಿಕೆಯಾಗಲಿದೆ. ಆದ್ದರಿಂದ ಪ್ರತಿಯೊಬ್ಬರೂ ಸದಾ ಲವಲವಿಕೆಯಿಂದಿರಲು, ಕಾರ್ಯಕ್ಷೇತ್ರದಲ್ಲಿ ಉತ್ಸುಕರಾಗಿರಲು ಪೂರಕ ವಾತಾವರಣ ನಿರ್ಮಾಣವಾಗಲಿದೆ ಎಂದರು.

 ಕ್ರೀಡಾಕೂಟದ ಉದ್ಘಾಟನಾ ಸಮಾರಂಭದಲ್ಲಿ ಜಿಲ್ಲಾ ಪೊಲೀಸ್ ಅಧೀಕ್ಷಕ ಜಿ.ಕೆ.ಮಿಥುನ್‍ಕುಮಾರ್, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಅನಿಲ್‍ಕುಮಾರ್ ಭೂಮರೆಡ್ಡಿ ಸೇರಿದಂತೆ ಜಿಲ್ಲೆಯ ಎಲ್ಲಾ ಠಾಣೆಗಳ ಪೊಲೀಸ್ ಅಧಿಕಾರಿ-ಸಿಬ್ಬಂಧಿಗಳು ಹಾಗೂ ಕ್ರೀಡಾಳುಗಳು ಉಪಸ್ಥಿತರಿದ್ದರು

Read These Next

ಶಿರೂರು ಗುಡ್ಡ ಕುಸಿತ; ಗಂಗಾವಳಿ ನದಿಯಲ್ಲಿ ಟ್ರಕ್ಕೊಂದು ಮುಳುಗಿರುವುದನ್ನಖಚಿತ ಪಡಿಸಿದ ರಾಜ್ಯ ಸರ್ಕಾರ

ಬೆಂಗಳೂರು: ಅಂಕೋಲಾದ ಶಿರೂರಿನಲ್ಲಿ ಜುಲೈ 16ರಂದು ಸಂಭವಿಸಿದ ಭೂಕುಸಿತದಲ್ಲಿ ತಮ್ಮ ಟ್ರಕ್‌ನೊಂದಿಗೆ ನಾಪತ್ತೆಯಾಗಿದ್ದ ...

ಅಂಕೋಲಾ ಗುಡ್ಡ ಕುಸಿದು ಮೃತಪಟ್ಟ ಕುಟುಂಬಕ್ಕೆ ತಲಾ 5 ಲಕ್ಷ ರೂ ಪರಿಹಾರ; ಸರ್ಕಾರದಿಂದ ಘೋಷಣೆ

ಘಟನೆಯಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ತಲಾ 5ಲಕ್ಷ ರೂ.ಪರಿಹಾರ ನೀಡುವಂತೆ ಜಿಲ್ಲಾಡಳಿತಕ್ಕೆ ಸೂಚಿಸಲಾಗಿದೆ ಎಂದು ಕಂದಾಯ ಸಚಿವ ...

ಮನೆಯಂಗಳದಲ್ಲಿ 7 ಅಡಿ ಉದ್ದದ ಹೆಬ್ಬಾವು ಪತ್ತೆ: ಸುರಕ್ಷಿತವಾಗಿ‌ ಕಾಡಿಗೆ ಬಿಟ್ಟ ಉರಗ ಪ್ರೇಮಿಗಳು 

ಭಟ್ಕಳ ಕರಾವಳಿ ಭಾಗದಲ್ಲಿ ಮಳೆಯು  ಅಬ್ಬರಿಸುತ್ತಿದೆ. ಮಳೆಯಿಂದಾಗಿ ಕಾಡಿನಿಂದ ಮನೆಗಳತ್ತ ಹಾವುಗಳು ಬರುತ್ತಿದ್ದು ತಾಲೂಕಿನ ...

ಗುಡ್ಡ ಕುಸಿತದಿಂದ ಮೃತಪಟ್ಟ ಕುಟುಂಬಕ್ಕೆ ಸರ್ಕಾರದಿಂದ ತಲಾ ೫ಲಕ್ಷ ರೂ ಪರಿಹಾರ ನೀಡಿದ ಜಿಲ್ಲಾ ಉಸ್ತುವಾರಿ ಸಚಿವ

ಅಂಕೋಲಾ : ಇತ್ತಿಚೆಗೆ ಬಿದ್ದ ಭಾರಿ ಮಳೆಯಿಂದಾಗಿ ಉ.ಕ. ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರಿನಲ್ಲಿ  ಗುಡ್ಡ ಕುಸಿದು ಮೃತ ಪಟ್ಟವರ ...