ದೈಹಿಕ,ಮಾನಸಿಕ ಆರೋಗ್ಯಕ್ಕೆ ಕ್ರೀಡೆ ಸಹಕಾರಿ: ಪ್ರೀತಂ ಜೆ. ಗೌಡ

Source: so news | Published on 19th October 2019, 12:09 PM | State News | Don't Miss |

 

ಹಾಸನ:ಕ್ರೀಡೆಗಳಿಂದ ದೈಹಿಕ ಪರಿಶ್ರಮದ ಜೊತೆ ಮಾನಸಿಕ ಆರೋಗ್ಯ ಸಮತೋಲಕ್ಕೆ ಕ್ರೀಡೆಗಳು ಸಹಕಾರಿಯಾಗಲಿವೆ ಎಂದು ಶಾಸಕರಾದ ಪ್ರೀತಂ ಜೆ.ಗೌಡ ಅವರು ತಿಳಿಸಿದ್ದಾರೆ.
ಜಿಲ್ಲಾ ಕ್ರೀಡಾಂಗಣದಲ್ಲಿಂದು  ಪದವಿ ಪೂರ್ವ ಶಿಕ್ಷಣ ಇಲಾಖೆ ಮತ್ತು ಮಾಸ್ಟರ್ಸ್ ಪದವಿ ಪೂರ್ವ ಕಾಲೇಜು ಇವರ ಸಂಯುಕ್ತಾಶ್ರಯದಲ್ಲಿ ಆಯೋಜಿಸಲಾಗಿದ್ದ ರಾಜ್ಯ ಮಟ್ಟದ ಪದವಿ ಪೂರ್ವ ಕಾಲೇಜುಗಳ ಷಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿಯನ್ನು ಕ್ರೀಡಾ ದ್ವಜಾರೋಹಣ ನೆರವೇರಿಸುವ ಮೂಲಕ ಚಾಲನೆ ನೀಡಿ ಅವರು ಮಾತನಾಡಿದರು. 
ತಮ್ಮ ವಿದ್ಯಾರ್ಥಿ ಜೀವನದ ಅನುಭವಗಳನ್ನು ಹಂಚಿಕೊಂಡ ಅವರು ಕ್ರೀಡಾ ಚಟುವಟಿಕೆಗಳು ಪ್ರತಿಯೊಬ್ಬರನ್ನು ವಿದ್ಯಾರ್ಥಿ ಜೀವನಕ್ಕೆ ಕರೆದೊಯ್ಯುವ ಸಂಗತಿಯಾಗಿದೆ ಎಂದು ಹೇಳಿದರು.
ಜಿಲ್ಲೆಯಲ್ಲಿ ರಾಜ್ಯ ಮಟ್ಟದ ಕ್ರೀಡಾಕೂಟವನ್ನು ಆಯೋಜಿಸಿರುವುದು ಹೆಮ್ಮೆಯಾಗಿದ್ದು ಪಂದ್ಯಾವಳಿಗೆ ಆಗಮಿಸಿರುವ ವಿವಿಧ ಜಿಲ್ಲೆಗಳ ಕ್ರೀಡಾಪಟುಗಳಿಗೆ ಯಾವುದೇ ರೀತಿಯ ಮೂಲಭೂತ ಸೌಕರ್ಯಗಳ ಕೊರತೆಯಾಗದಂತೆ ನೋಡಿಕೊಳ್ಳುವುದು ಪದವಿ ಪೂರ್ವ ಶಿಕ್ಷಣ ಇಲಾಖೆ ಹಾಗೂ ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ ಎಂದು ಶಾಸಕ ಪ್ರೀತಂ ಜೆ. ಗೌಡ ಹೇಳಿದರು.
ಪದವಿಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಜವರಯ್ಯ ಕೆ. ಅವರು ಮಾತನಾಡಿ ವಿವಿಧ ಜಿಲ್ಲೆಯ ವಿದ್ಯಾರ್ಥಿಗಳ ಪ್ರತಿಭೆಗಳನ್ನು ನಮ್ಮ ಜಿಲ್ಲೆಯಲ್ಲಿ ಪ್ರದರ್ಶಿಸಲು ಅವಕಾಶ ಒದಗಿರುವುದು ಶ್ಲಾಘನೀಯ ಎಂದರಲ್ಲದೆ ಆಗಮಿಸಿರುವ ಉತ್ಸಾಹಿ ಕ್ರೀಡಾಪಟುಗಳು ತೀರ್ಪುಗಾರರ ತೀರ್ಪಿಗೆ ಬದ್ದರಾಗಿ ಕ್ರೀಡಾ ಮನೋಭಾವದಿಂದ ಪಾಲ್ಗೊಳ್ಳುವ ಮೂಲಕ ಕ್ರೀಡಾಕೂಟವನ್ನು ಯಶಸ್ವಿಗೊಳಿಸಬೇಕು ಎಂದರು.
ಮಾಸ್ಟರ್ಸ್ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಗೌಡೇಗೌಡ ಅವರು ಉಪನ್ಯಾಸ ನುಡಿಗಳನ್ನಾಡುತ್ತಾ ಮಕ್ಕಳಲ್ಲಿ ದೈಹಿಕ ಮಾನಸಿಕ ಸದೃಡತೆಗಾಗಿ ವಿದ್ಯಾಭ್ಯಾಸದ ಜೊತೆ ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸುವ ಮನೋಭಾವನೆ ಬೆಳೆಸುವುದು ಅಗತ್ಯ ಎಂದರು. ಸೋಲು ಗೆಲುವು ಎಲ್ಲವನ್ನೂ ಸಮಾನವಾಗಿ ಸ್ವೀಕರಿಸಿ ಕ್ರೀಡಾಕೂಟದ ಯಶಸ್ವಿಗೆ ಸಹಕರಿಸಿ ಎಂದು ಕ್ರೀಡಾಪಟುಗಳಿಗೆ ಶುಭ ಕೋರಿದರು.
ಕಾರ್ಯಕ್ರಮದ ಅಂಗವಾಗಿ ಕ್ರೀಡಾಂಗಣದ ಆವರಣದಲ್ಲಿ ಸಸಿ ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರಲ್ಲದೆ ಪ್ರಸ್ತುತ ವರ್ಷದಲ್ಲಿ ವಯೋನಿವೃತ್ತಿ ಹೊಂದಲಿರುವ ಜಿಲ್ಲೆಯ ವಿವಿಧ ಕಾಲೇಜುಗಳ ದೈಹಿಕ ಶಿಕ್ಷಕರಿಗೆ ಶಾಸಕರಾದ ಪ್ರೀತಂ ಜೆ. ಗೌಡ ಅವರು ಸನ್ಮಾನಿಸಿದರು.
ಪದವಿ ಪೂರ್ವ ಕಾಲೇಜು ಪ್ರಾಂಶುಪಾಲರ ಸಂಘದ ಅಧ್ಯಕ್ಷರಾದ ಹೆಚ್.ಬಿ ಜೀವಣ್ಣ, ಸರ್ಕಾರಿ ಪದವಿಪೂರ್ವ ಶಿಕ್ಷಣ ಇಲಾಖೆಯ ಕ್ರೀಡಾ ಸಂಯೋಜಕರಾದ ಎಂ.ಆರ್ ಗೋಪಾಲಕೃಷ್ಣ, ಚನ್ನರಾಯಪಟ್ಟಣ ನವೋದಯ ಪದವಿ ಪೂರ್ವ ಕಾಲೇಜಿನ ನಿವೃತ್ತ ಉಪನ್ಯಾಸಕರಾದ ಶಿವಕುಮಾರ್ ಕೆ.ಆರ್, ರಾಜ್ಯ ಮಟ್ಟದ ಪದವಿ ಪೂರ್ವ ಕಾಲೇಜುಗಳ ಕ್ರೀಡಾಕೂಟದ ಕ್ರೀಡಾ ಕಾರ್ಯದರ್ಶಿಗಳಾದ ಗಣೇಶ್ ಮೂರ್ತಿ, ಮಾಸ್ಟರ್ಸ್ ಎಜುಕೇಶನ್ ಟ್ರಸ್ಟ್‍ನ ಅಧ್ಯಕ್ಷರಾದ ಹೆಚ್.ಸಿ ನಂದಿನಿ, ಉಪಾಧ್ಯಕ್ಷರಾದ ಟಿ.ಎ.ಹೆಚ್ ರಾಯುಡು, ಕಾರ್ಯದರ್ಶಿ ಬಿ.ಎಸ್ ಮಂಜುನಾಥ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ಪ್ರಕಾಶ್ ಎಂ. ಸರಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.

Read These Next

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...