ಭಟ್ಕಳ: ಅಂತರ ಕಾಲೇಜು ಕ್ರೀಡಾಕೂಟದಲ್ಲಿ ಶ್ರೀ ಗುರು ಸುಧೀಂದ್ರ ಕಾಲೇಜಿನ ವಿದ್ಯಾರ್ಥಿಗಳ ಸಾಧನೆ

Source: S O News | By I.G. Bhatkali | Published on 30th January 2024, 12:26 AM | Coastal News |

ಭಟ್ಕಳ:  ಶ್ರೀ ಗುರು ಸುಧೀಂದ್ರ ಕಾಲೇಜಿನ ವಿದ್ಯಾರ್ಥಿಗಳು ಇತ್ತೀಚೆಗೆ ಕರ್ನಾಟಕ ವಿಶ್ವವಿದ್ಯಾಲಯ ಮಟ್ಟದಲ್ಲಿ ನಡೆದ ಅಂತರ ಕಾಲೇಜು ಕ್ರೀಡಾಕೂಟದಲ್ಲಿ ವಿಶೇಷ ಸಾಧನೆಗಳ ಮೂಲಕ 2 ಚಿನ್ನ, 8 ಬೆಳ್ಳಿ, 4 ಕಂಚು ಹೀಗೆ ಒಟ್ಟೂ 14 ಪದಕಗಳನ್ನು ಗಳಿಸುವ ಮೂಲಕ ಕಾಲೇಜಿಗೆ ಕೀರ್ತಿ ತಂದಿದ್ದು, ವಿದ್ಯಾರ್ಥಿಗಳ ಈ ಸಾಧನೆಗೆ "ಭಟ್ಕಳ ಎಜ್ಯುಕೇಶನ್ ಟ್ರಸ್ಟ್'ನ ಅಧ್ಯಕ್ಷರಾದ ಡಾ. ಸುರೇಶ ವಿ. ನಾಯಕ, ಉಪಾಧ್ಯಕ್ಷರಾದ ಸುರೇಂದ್ರ ಶ್ಯಾನುಭಾಗ, ಆಡಳಿತ ಟ್ರಸ್ಟಿ ರವೀಂದ್ರ ಕೊಲ್ಲೆ, ಟ್ರಸ್ಟಿ ಮ್ಯಾನೇಜರ್ ರಾಜೇಶ ನಾಯಕ ಹಾಗೂ ಟ್ರಸ್ಟಿಗಳು, ಪ್ರಾಂಶುಪಾಲರು, ಉಪನ್ಯಾಸಕರು, ದೈಹಿಕ ನಿರ್ದೇಶಕರು ವಿದ್ಯಾರ್ಥಿಗಳನ್ನು ಅಭಿನಂದಿಸಿದ್ದಾರೆ. 

Read These Next