ಎಸ್ ಆರ್ ಹಿರೇಮಠರಿಗೆ ಸಂಗೊಳ್ಳಿ ರಾಯಣ್ಣ ಪ್ರಶಸ್ತಿ ಪ್ರದಾನ

Source: so news | Published on 10th January 2020, 12:16 AM | State News | Don't Miss |


ಧಾರವಾಡ: ಕರ್ನಾಟಕ ಸರಕಾರದ 2018 ನೇ ಸಾಲಿನ ಸಂಗೊಳ್ಳಿ ರಾಯಣ್ಣ ಪ್ರಶಸ್ತಿಯನ್ನು ಇಂದು ಸಮಾಜ ಪರಿವರ್ತನಾ ಟ್ರಸ್ಟಿನ ಎಸ್.ಆರ್.ಹಿರೇಮಠ ಅವರಿಗೆ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ನಿರ್ದೇಶಕ ಎಸ್.ರಂಗಪ್ಪ ಪ್ರದಾನ ಮಾಡಿದರು.
ಪ್ರಶಸ್ತಿ ಸ್ವೀಕರಿಸಿದ ಎಸ್.ಆರ್.ಹಿರೇಮಠ ಮಾತನಾಡಿ, ಕೆಲಸದ ನಿಮಿತ್ಯ ಪುಣೆಗೆ ಹೋಗಿದ್ದರಿಂದ ಪ್ರಶಸ್ತಿ ಪ್ರದಾನ ಕಾರ್ಯಕ್ರಮಕ್ಕೆ ಹೋಗಲು ಸಾಧ್ಯವಾಗಿರಲಿಲ್ಲ. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶಕರು ತಮ್ಮ ಕೆಲಸದ ಒತ್ತಡದ ಮಧ್ಯೆ ಧಾರವಾಡ ಕಚೇರಿಗೆ ಬಂದು ಪ್ರಶಸ್ತಿ ಪ್ರದಾನ ಮಾಡಿರುವುದು ಸಂತೋಷ ತಂದಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಜಂಟಿ ನಿರ್ದೇಶಕ ಅಶೋಕ ಚಲವಾದಿ, ಸಹಾಯಕ ನಿರ್ದೇಶಕಿ ಮಂಜುಳಾ ಯಲಿಗಾರ, ಬೆಂದ್ರೆ ಭವನದ ವ್ಯವಸ್ಥಾಪಕ ಪ್ರಕಾಶ ಬಾಳಿಕಾಯಿ ಇದ್ದರು.

Read These Next

ಸಂವಿಧಾನ ಹಕ್ಕುಗಳ ನಾಗರೀಕ ವೇದಿಕೆಯಿಂದ ಸಂಸದರ ಕಚೇರಿ ಎದುರು ಅನಿರ್ಧಿಷ್ಠಾವಧಿ ಧರಣಿ

ರಾಯಚೂರು: ಕೇಂದ್ರ ಸರ್ಕಾರದ ಜನ ವಿರೋಧಿ ನೀತಿಯಾದ ಎನ್.ಆರ್.ಸಿ,ಸಿಎಎ ಮತ್ತು ಎನ್‌ಪಿಆರ್ ಕಾಯ್ದೆಯನ್ನು ಜಾರಿಗೆ ವಿರೋಧಿಸಿ ಸಂವಿಧಾನ ...

ಶ್ರೀ ವೆಂಕಟೇಶ್ವರ ವಾಣಿಜ್ಯ ಮತ್ತು ಕಂಪ್ಯೂಟರ್ ಸಂಸ್ಥೆಯಿಂದ ಶಾರದಾ ಪೂಜಾ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

ಜಿಲ್ಲೆಯಲ್ಲಿ ಕಳೆದ 31 ವರ್ಷಗಳಿಂದ ಬೆರಳಚ್ಚು ಹಾಗೂ ಕಂಪ್ಯೂಟರ್ ತರಬೇತಿ ಯಲ್ಲಿ ಸಾವಿರಾರು ವಿದ್ಯಾರ್ಥಿಗಳನ್ನು ತಯಾರು ಮಾಡಿ ...

ಕೋಲಾರ: ಜಿಲ್ಲೆಯಲ್ಲಿ 2 ದಿನಗಳ ಕಾಲ ಫಲಪುಷ್ಪ ಪ್ರದರ್ಶನ ಮೇಳ ಆಯೋಜನೆ – ಉಪನಿರ್ದೇಶಕ ಗಾಯಿತ್ರಿ ಎಂ

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ತೋಟಗಾರಿಕೆ ಇಲಾಖೆ ಮತ್ತು ಕೃಷಿ ಇಲಾಖೆ, ಕೋಲಾರ ಇವರ ಸಂಯುಕ್ತಾಶ್ರಯದಲ್ಲಿ 2019-20 ನೇ ಸಾಲಿನ ಫಲಪುಷ್ಪ ...

ಕೋಲಾರ: ಜಿಲ್ಲೆಯಲ್ಲಿ 2 ದಿನಗಳ ಕಾಲ ಫಲಪುಷ್ಪ ಪ್ರದರ್ಶನ ಮೇಳ ಆಯೋಜನೆ – ಉಪನಿರ್ದೇಶಕ ಗಾಯಿತ್ರಿ ಎಂ

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ತೋಟಗಾರಿಕೆ ಇಲಾಖೆ ಮತ್ತು ಕೃಷಿ ಇಲಾಖೆ, ಕೋಲಾರ ಇವರ ಸಂಯುಕ್ತಾಶ್ರಯದಲ್ಲಿ 2019-20 ನೇ ಸಾಲಿನ ಫಲಪುಷ್ಪ ...