ಶ್ರೀನಿವಾಸಪುರ: ವೈರಾಣು ನಿರೋಧಕ ಔಷಧ ಸಿಂಪಡಣೆ

Source: sonews | By Staff Correspondent | Published on 28th March 2020, 10:08 PM | State News |

ಶ್ರೀನಿವಾಸಪುರ:  ಅಡ್ಡಗಲ್‌ ಗ್ರಾಮದಲ್ಲಿ ಗ್ರಾಮ ಪಂಚಾಯಿತಿ ವತಿಯಿಂದ ಶನಿವಾರ ವೈರಾಣು ನಿರೋಧಕ ಔಷಧ ಸಿಂಪಡಣೆ ಮಾಡಲಾಯಿತು.

ಆರೋಗ್ಯ ನಿರೀಕ್ಷಕ ಸುಬ್ರಮಣಿ ಗ್ರಾಮಸ್ಥರನ್ನು ಉದ್ದೇಶಿಸಿ ಮಾತನಾಡಿ, ಕೊರೊನಾ ತಡೆಗೆ ಗ್ರಾಮಸ್ಥರು ಸಹಕರಿಸಬೇಕು. ನಗರ ಪ್ರದೇಶದಂತೆ ಗ್ರಾಮೀಣ ಪ್ರದೇಶದಲ್ಲೂ ಜನರು ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. ಸ್ವಚ್ಛತೆಗೆ ಆದ್ಯತೆ ನೀಡಬೇಕು. ಹೊರಗಡೆಯಿಂದ ಬರುವ ವ್ಯಕ್ತಿಗಳ ಬಗ್ಗೆ ಎಚ್ಚರ ವಹಿಸಬೇಕು. ಕೊರೊನಾ ರೋಗದ ಲಕ್ಷಣಗಳು ಕಂಡುಬಂದಲ್ಲಿ ವೈದ್ಯರಿಗೆ ತಿಳಿಸಬೇಕು ಎಂದು ಹೇಳಿದರು.

ಪಿಡಿಒ ಚಂದ್ರಪ್ರಕಾಶ್‌, ಆರೋಗ್ಯ ನಿರೀಕ್ಷಕ ಹರೀಶ್‌, ಗ್ರಾಮ ಪಂಚಾಯಿತಿ ಸಿಬ್ಬಂದಿ ಇದ್ದರು.

ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ

Read These Next

ನೋಡಲ್ ಅಧಿಕಾರಿಗಳು ಕ್ಷೇತ್ರ ಭೇಟಿ ನೀಡಿ ಕುಡಿಯುವ ನೀರಿನ ಸಮಸ್ಯೆ ಕುರಿತು ವಾಸ್ತವ ಪರಿಶೀಲಿಸಿ 

ಕೋಲಾರ ; ಕುಡಿಯುವ ನೀರಿನ ಸಮಸ್ಯೆಗೆ ಸಂಬಂಧಿಸಿದಂತೆ ಹೋಬಳಿವಾರು ನೋಡಲ್ ಅಧಿಕಾರಿಗಳನ್ನು ನೇಮಿಸಿದ್ದು, ಈ ಅಧಿಕಾರಿಗಳು ಕ್ಷೇತ್ರ ...