ಶ್ರೀನಿವಾಸಪುರ: ಬಡವರಿಗೆ ಮನೆ ನಿವೇಶನ ನೀಡುವಿಕೆಯಲ್ಲಿ ಅನ್ಯಾಯ ಆಗದಂತೆ ನೋಡಿಕೊಳ್ಳಿ; ಜಿ.ಕೆ.ವೆಂಕಟಶಿವಾರೆಡ್ಡಿ

Source: Shabbir Ahmed | By S O News | Published on 3rd August 2021, 11:40 PM | State News |

ಶ್ರೀನಿವಾಸಪುರ: ಅಧಿಕಾರಿಗಳು ಇಂದಿರಾ ನಗರದ ಬಡವರಿಗೆ ಮನೆ ನಿವೇಶನ ನೀಡುವಿಕೆಯಲ್ಲಿ ಅನ್ಯಾಯ ಆಗದಂತೆ ನೋಡಿಕೊಳ್ಳಬೇಕು. ಅರ್ಹ ಫಲಾನುಭವಿಗಳಿಗೆ ಮನೆ ನಿವೇಶನ ಅಥವಾ ಮನೆ ಸಿಗದ ಪಕ್ಷದಲ್ಲಿ ತಾಲ್ಲೂಕು ಕಚೇರಿಗೆ ಮುತ್ತಿಗೆ ಹಾಕಲಾಗುವುದು ಎಂದು ಮಾಜಿ ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ ಹೇಳಿದರು.

ಪಟ್ಟಣದ ಇಂದಿರಾ ನಗರದಲ್ಲಿ ಮಂಗಳವಾರ ಏರ್ಪಡಿಸಲಾಗಿದ್ದ ಸಾರ್ವಜನಿಕರ ಕುಂದು ಕೊರತೆ ಸಭೆಯಲ್ಲಿ ಮಾತನಾಡಿ, 'ನಾನು ಶಾಸಕನಾಗಿದ್ದಾಗ ಬಡವರನ್ನು ಗುರುತಿಸಿ ಮನೆ ನಿವೇಶನ ವಿತರಣೆ ಮಾಡಿದ್ದೆ. ಹಕ್ಕು ಪತ್ರಗಳಲ್ಲಿ ಸಣ್ಣ ಪುಟ್ಟ ತಪ್ಪುಗಳಿದ್ದಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಸರಿಪಡಿಸಿ ಕೊಡಬೇಕು. ಭೇದ ಭಾವ ಇಲ್ಲದಂತೆ ಫಲಾನುಭವಿಗಳನ್ನು ನಡಿಸಿಕೊಳ್ಳಬೇಕು' ಎಂದು ಹೇಳಿದರು.

ಪುರಸಭಾಧ್ಯಕ್ಷೆ ಎಂ.ಎನ್.ಲಲಿತಾ ಶ್ರೀನಿವಾಸ್, ಉಪಾಧ್ಯಕ್ಷೆ ಆಯಿಷಾ ನಯಾಜ್, ಸದಸ್ಯ ಬಿ.ವೆಂಕಟರೆಡ್ಡಿ, ಮುಖ್ಯಾಧಿಕಾರಿ ವೈ.ಎನ್.ಸತ್ಯನಾರಾಯಣ, ಅಧಿಕಾರಿಗಳಾದ ನಾಗರಾಜ್, ಶಂಕರ್, ರಾಜೇಶ್ವರಿ, ನಾಗೇಶ್, ಪೊಲೀಸ್ ಇನ್ಸ್‍ಪೆಕ್ಟರ್ ರವಿಕುಮಾರ್ ಇದ್ದರು.

ಶ್ರೀನಿವಾಸಪುರದ ಇಂದಿರಾ ನಗರದಲ್ಲಿ ಮಂಗಳವಾರ ತಹಶೀಲ್ದಾರ್ ಎಸ್.ಎಂ.ಶ್ರೀನಿವಾಸ್ ಮನೆ ನಿವೇಶನಗಳ ತಪಾಸಣೆ ನಡೆಸಿದರು. ಪುರಸಭೆ ಮುಖ್ಯಾಧಿಕಾರಿ ವೈ. ಎನ್. ಸತ್ಯನಾರಾಯಣ, ಅಧಿಕಾರಿಗಳಾದ ನಾಗರಾಜ್, ಶಂಕರ್ ಇದ್ದರು.

Read These Next

ರಸ್ತೆ,ರೈಲು, ವಾಯು ಮಾರ್ಗ- ಸಮಗ್ರ ಅಭಿವೃದ್ದಿ. ಶಿಕ್ಷಣದಿಂದ ಬದಲಾವಣೆ - ಕೈಗಾರಿಕೆಯಿಂದ ಅಭಿವೃದ್ದಿ ಸಾಧನೆ ಆಗಬೇಕು : ಬಿ‌ ವೈ ರಾಘವೇಂದ್ರ.

ಶಿವಮೊಗ್ಗ : ಶಿಕ್ಷಣದಿಂದ ಬದಲಾವಣೆ ಮತ್ತು ಕೈಗಾರಿಕೆಯಿಂದ ಅಭಿವೃದ್ದಿಯನ್ನು ಸಾಧಿಸುವ ನಿಟ್ಟಿನಲ್ಲಿ ಸರ್ಕಾರ ಹೊಸ ಶಿಕ್ಷಣ ನೀತಿ ...

ನಾಗಿರೆಡ್ಡಿ ಗ್ರಾಮದ ಬಳಿ ತ್ವರಿತವಾಗಿ ಗೋಶಾಲೆ ಆರಂಭಿಸಿ: ಜಿಲ್ಲಾಧಿಕಾರಿ ಆರ್ ಲತಾ

ಚಿಕ್ಕಬಳ್ಳಾಪುರ : ಸರ್ಕಾರಿ ಗೋಶಾಲೆ ನಿರ್ಮಾಣ ಕಾಮಗಾರಿಗೆ ಶಂಕು ಸ್ಥಾಪನೆಯಾಗಿರುವ ಜಿಲ್ಲೆಯ ನಾಗಿರೆಡ್ಡಿ ಗ್ರಾಮದ ಬಳಿ ಪ್ರಸ್ತುತ ...

ಈ ಬಾರಿ ಅರ್ಥಪೂರ್ಣ ಶ್ರೀರಂಗಪಟ್ಟಣ ದಸರಾ ಮಹೋತ್ಸವಕ್ಕೆ ನಿರ್ಧಾರ: ಡಾ. ಕೆ.ಸಿ ನಾರಾಯಣಗೌಡ

ಮಂಡ್ಯ : ಅಕ್ಟೋಬರ್ 9, 10 ಮತ್ತು 11 ರಂದು ಶ್ರೀರಂಗಪಟ್ಟಣ ದಸರಾ ಮಹೋತ್ಸವವನ್ನು ನಡೆಸಲು ನಿರ್ಧರಿಸಲಾಗಿದ್ದು, ಅರ್ಥಪೂರ್ಣ ದಸರಾ ಆಚರಣೆಗೆ ...