ಶ್ರೀನಿವಾಸಪುರ:ರಸ ಪ್ರಶ್ನೆ ಸ್ಪರ್ಧೆಯಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ

Source: so news | Published on 16th September 2019, 8:59 PM | State News | Don't Miss |

ಶ್ರೀನಿವಾಸಪುರ: ವಿದ್ಯಾರ್ಥಿಗಳು ಮಳೆ ನೀರಿನ ಸಂರಕ್ಷಣೆ ಕುರಿತು ಜನರಲ್ಲಿ ಅರಿವು ಮೂಡಿಸಬೇಕು ಎಂದು ಪುರಸಭೆ ಮುಖ್ಯಾಧಿಕಾರಿ ವಿ.ಮೋಹನ್‌ ಕುಮಾರ್‌ ಹೇಳಿದರು.
ಪಟ್ಟಣದ ಪುರಸಭಾ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಿದ್ದ ಸಮಾರಂಭದಲ್ಲಿ ಜಲ ಶಕ್ತಿ ಅಭಿಯಾನ ವತಿಯಿಂದ ಜಲ ಸಂಕ್ಷಣೆ ಕುರಿತು ಏರ್ಪಡಿಸಿದ್ದ ರಸ ಪ್ರಶ್ನೆ ಸ್ಪರ್ಧೆಯಲ್ಲಿ ವಿಜೇತರಾಗಿದ್ದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಿ ಮಾತನಾಡಿ, ಮಳೆ ನೀರು ಕೊಯಿಲು ಇಂದಿನ ಅಗತ್ಯವಾಗಿದೆ. ಮನೆ ಮಾಳಿಗೆ ಮೇಲೆ ಬೀಳುವ ಮಳೆ ನೀರನ್ನು ವೈಜ್ಞಾನಿಕವಾಗಿ ಸಂಗ್ರಹಿಸಿ ಬಳಸಿಕೊಳ್ಳಬಹುದು. ಆಳವಾದ ಕೊಳವೆ ಬಾವಿಗಳಿಂದ ಬರುವ ವಿಷಯುಕ್ತ ನೀರು ಜನ ಹಾಗೂ ಜಾನುವಾರು ಆರೋಗ್ಯಕ್ಕೆ ಕಂಟಕವಾಗಿದೆ. ಆದರೆ ಮಳೆ ನೀರು ಆರೋಗ್ಯ ವೃದ್ಧಿಗೆ ಪೂರಕವಾಗಿದೆ ಎಂದು ಹೇಳಿದರು.
ಸ್ಪರ್ಧೆಯಲ್ಲಿ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿಯರು ಪ್ರಥಮ, ರಂಗಾರಸ್ತೆ ಸರ್ಕಾರಿ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳು ದ್ವಿತೀಯ ಹಾಗೂ ಪ್ರಗತಿ ಸಂಯುಕ್ತ ಅನುದಾನಿತ ಪ್ರೌಢ ಶಾಲಾ ವಿದ್ಯಾರ್ಥಿಗಳು ತೃತೀಯ ಬಹುಮಾನ ಪಡೆದುಕೊಂಡರು.
ಪುರಸಭೆ ಪರಿಸರ ಅಭಿಯಂತರ ಶೇಖರ್‌ ರೆಡ್ಡಿ, ಆರೋಗ್ಯ ನಿರೀಕ್ಷಕರಾದ ಕೆ.ಜಿ.ರಮೇಶ್‌, ಎಂ.ಪೃಥ್ವಿರಾಜ್‌, ಸಿಎಒ ರಾಜೇಶ್ವರಿ, ವನಜಾಕ್ಷಿ ಇದ್ದರು.
 

Read These Next

'ಚುನಾವಣಾ ಬಾಂಡ್' ವಿಶ್ವದ ದೊಡ್ಡ ಹಗರಣ; ಬಿಜೆಪಿ ವಿರುದ್ಧ ರಾಹುಲ್‌ ಗಾಂಧಿ ವಾಗ್ದಾಳಿ

ಬಿಜೆಪಿಯ ಚುನಾ ವಣಾ ಬಾಂಡ್ ವಿಶ್ವದ ಅತ್ಯಂತ ದೊಡ್ಡ ಹಗರಣವಾಗಿದ್ದು, ಗೂಂಡಾಗಳ ರೀತಿಯಲ್ಲಿ ಕೆಲವು ಉದ್ಯಮಿಗಳನ್ನು ಬೆದರಿಸಿ ಹಫ್ತಾ ...

ಸಂವಿಧಾನ ಮತ್ತು  ಪ್ರಜಾಪ್ರಭುತ್ವ ಉಳಿಸುವುದಕ್ಕೆ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ಎಂದು ರಾಹುಲ್ ಗಾಂಧಿ ಕರೆ

ಮಾಲೂರು : ಈ ಲೋಕಸಭೆ ಚುನಾವಣೆಯು ಎರಡು ಸಿದ್ಧಾಂತಗಳ ನಡುವಿನ ಯುದ್ಧ ಇಂಡಿಯಾ ಬಣ ಒಂದು ಕಡೆ "ಸಂವಿಧಾನಕ್ಕಾಗಿ ಹೋರಾಟ" ನಡೆಸುತ್ತಿದೆ ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...