ಶ್ರೀನಿವಾಸಪುರ ಪುರಸಭೆಗೆ ನಡೆದ ಚುನಾವಣೆಯಲ್ಲಿ ಶೇ.79.99ರಷ್ಟು ಮತದಾನ

Source: S O News Service | By I.G. Bhatkali | Published on 31st May 2019, 2:38 PM | State News | Don't Miss |

ಶ್ರೀನಿವಾಸಪುರ: ಇಲ್ಲಿನ ಪುರಸಭೆಗೆ ಬುಧವಾರ ನಡೆದ ಚುನಾವಣೆಯಲ್ಲಿ ಶೇ.79.99ರಷ್ಟು ಮತದಾನವಾಗಿದೆ ಎಂದು ತಹಶೀಲ್ದಾರ್‌ ಬಿ.ಎಸ್‌.ರಾಜೀವ್ ತಿಳಿಸಿದ್ದಾರೆ.

ಬೆಳಿಗ್ಗೆ ಚುರುಕಾಗಿ ನಡೆದ ಮತದಾನ, ಮಧ್ಯಾಹ್ನ ಸುಡು ಬಿಸಿಲಿನ ಪರಿಣಾಮವಾಗಿ ಮಂದವಾಯಿತು. ಬಿಸಿಲು ಕಡಿಮೆ ಆಗುತ್ತಿದ್ದಂತೆ ಮತ್ತೆ ಮತದಾನ ಚುರುಕುಗೊಂಡಿತು. ಪಟ್ಟಣದಲ್ಲಿ ಸ್ಥಾಪಿಸಲಾಗಿದ್ದ 23 ಮತಗಟ್ಟೆಗಳಲ್ಲೂ ಪುರುಷ ಹಾಗೂ ಮಹಿಳಾ ಮತದಾರರು ಪ್ರತ್ಯೇಕ ಸರತಿ ಸಾಲುಗಳಲ್ಲಿ ನಿಂತು ಮತ ಚಲಾಯಿಸಿದರು.

ಮತದಾನದ ಸಂದರ್ಭದಲ್ಲಿ ಭಾರಿ ಪೊಲೀಸ್‌ ಬಂದೋಗಸ್ತ್‌ ಮಾಡಲಾಗಿತ್ತು. ಪ್ರತಿ ಮತಗಟ್ಟೆಗೆ ನಾಲ್ಕು ಮಂದಿ ಭದ್ರತಾ ಸಿಬ್ಬಂದಿಯನ್ನು ನೇಮಿಸಲಾಗಿತ್ತು. 6 ಮತಗಟ್ಟೆಗಳಿಗೆ ಒಬ್ಬರಂತೆ ಒಬ್ಬ ಪೊಲೀಸ್‌ ಸಬ್‌ ಇನ್ಸ್‌ಪೆಕ್ಟರ್‌ ಹಾಗೂ ವಿಶೇಷ ಪೊಲೀಸ್‌ ಪಡೆಯನ್ನು ನಿಯೋಜಿಸಲಾಗಿತ್ತು.ಮುಂಜಾಗ್ರತಾ ಕ್ರಮವಾಗಿ ಅತಿ ಸೂಕ್ಷ್ಮ ಮತಗಟ್ಟೆಗಳ ಎದುರು ಸಶಸ್ತ್ರ ಪೊಲೀಸ್‌ ಪಡೆಯ ಕಾವಲು ಹಾಕಲಾಗಿತ್ತು.

ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಾ. ರೋಹಿಣಿ ಕಟೋಚ್‌ ಸಪೆಟ್‌, ಹೆಚ್ಚುವರಿ ವರಿಷ್ಠಾಧಿಕಾರಿ ಜಾಹ್ನವಿ, ಡಿವೈಎಸ್‌ಪಿ ಉಮೇಶ್‌, ಪೊಲೀಸ್‌ ಸರ್ಕಲ್‌ ಇನ್ಸ್‌ಪೆಕ್ಟರ್‌ ರಾಮಕೃಷ್ಣಯ್ಯ, ಪೊಲೀಸ್‌ ಸಬ್‌ ಇನ್ಸ್‌ಪೆಕ್ಟರ್‌ ಆರ್‌.ವೆಂಕಟೇಶ್‌ ಭದ್ರತೆಯ ಉಸ್ತುವಾರಿ ವಹಿಸಿದ್ದರು.

Read These Next

ರೇಪಿಷ್ಟ್ ಗಳ ಜೊತೆ ಬಿಜೆಪಿ ಹೊಂದಾಣಿಕೆ;  ಹೆಣ್ಣುಮಕ್ಕಳಿಗೆ ರಕ್ಷಣೆ ಕೊಡುವುದು ಅಂದರೆ ಇದೇನಾ? -ಸಿದ್ಧರಾಮಯ್ಯ

ಕುಮಟಾ: ಪ್ರಜ್ವಲ್ ರೇವಣ್ಣ ವಿಡಿಯೋ ಪ್ರಕರಣದ ಬಗ್ಗೆ ಗೊತ್ತಿದ್ದೂ ಬಿಜೆಪಿ ಜೆಡಿಸ್ ಜೊತೆ ಹೊಂದಾಣಿಕೆ ಮಾಡಿಕೊಂಡಿದೆ. ಇದೇನಾ ...

ಮುಂಡಗೋಡ: ಮೋದಿ ಸುಳ್ಳುಗಳ ಸರದಾರ, ಬಿಜೆಪಿ ಸುಳ್ಳಿನ ಕಾರ್ಖಾನೆ: ಸಿದ್ದರಾಮಯ್ಯ ವಾಗ್ದಾಳಿ

ಯುವಕರು ಕೆಲಸ ಕೊಡಿ ಎಂದರೆ ಪಕೋಡಾ ಮಾರಲು ಹೋಗಿ ಎಂದು ಪ್ರಧಾನಿ ಮೋದಿಯವರು ವಿದ್ಯಾವಂತ ಯುವಜನರಿಗೆ ಬೇಜವಾಬ್ದಾರಿ ಹೇಳಿಕೆ ಕೊಟ್ಟರು. ...

ಅತಿಕ್ರಮಣದಾರರ ವಿಚಾರದಲ್ಲೂ ಬಿಜೆಪಿಯಿಂದ ರಾಜಕೀಯ; ಮುಂಡಗೋಡದಲ್ಲಿ ಡಿಕೆಶಿ ವಾಗ್ದಾಳಿ

ರೈತರ ವಿಚಾರದಲ್ಲಿ ಬಿಜೆಪಿ ರಾಜಕಾರಣ ಮಾಡುತ್ತಿದೆ. ಆದಾಯ ಡಬಲ್ ಮಾಡುತ್ತೇವೆಂದು ಹೇಳಿ ರೈತರಿಗೆ ಮರಳು ಮಾಡಿದೆ. ಅತಿಕ್ರಮಣದಾರರ ...