ಶ್ರೀನಿವಾಸಪುರ : ಶಾಲಾ ಶಿಕ್ಷಕರ ಸಂಘದ ಚುನಾವಣೆಯಲ್ಲಿ ಶೇ.96 ರಷ್ಟು ಮತದಾನ

Source: S O News service | By I.G. Bhatkali | Published on 15th December 2020, 11:54 PM | State News |

ಶ್ರೀನಿವಾಸಪುರ :  ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲ್ಲೂಕು ಘಟಕಕ್ಕೆ ಮಂಗಳವಾರ ನಡೆದ ಚುನಾವಣೆಯಲ್ಲಿ ಶೇ.96 ರಷ್ಟು ಮತದಾನವಾಗಿದೆ.

ಮತದಾರರ ಒಟ್ಟು ಸಂಖ್ಯೆ 811 ಆಗಿದ್ದು, 775 ಮತಗಳು ಚಲಾವಣೆಯಾಗಿವೆ. ಆ ಪೈಕಿ 439 ಪುರುಷರು ಹಾಗೂ 336 ಮಹಿಳೆಯರು ಮತ ಚಲಾಯಿಸಿದ್ದಾರೆ. 12 ಪುರುಷರು ಹಾಗೂ 5 ಮಹಿಳೆಯರು ಚುನಾವಣೆಯಲ್ಲಿ ಸ್ಪರ್ಧಿಸಿದ್ದರು ಎಂದು ಮತಗಟ್ಟೆ ಅಧಿಕಾರಿ ಮುರಳಿ ಬಾಬು ತಿಳಿಸಿದರು.

ಬೆಳಿಗ್ಗೆ ನಿಧಾನ ಗತಿಯಲ್ಲಿ ನಡೆದ ಮತದಾನ, ಮಧ್ಯಾಹ್ನದ ಹೊತ್ತಿಗೆ ಚುರುಕು ಪಡೆದುಕೊಂಡಿತು. ಪ್ರಾಥಮಿಕ ಶಾಲಾ ಶಿಕ್ಷಕರು ಹಾಗೂ ಶಿಕ್ಷಕಿಯರು ಮತಗಟ್ಟೆಯ ಮುಂದೆ ಪ್ರತ್ಯೇಕ ಸಾಲುಗಳಲ್ಲಿ ನಿಂತು ಮತದಾನ ಮಾಡಿದರು.

 

Read These Next

ರಾಜ್ಯದಲ್ಲಿ ಶೇ.69.23 ಮತದಾನ; ಮಂಡ್ಯದಲ್ಲಿ ಗರಿಷ್ಠ ಶೇ.81.48; ಬೆಂಗಳೂರು ಕೇಂದ್ರದಲ್ಲಿ ಕನಿಷ್ಠ ಶೇ.52.81

ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಶುಕ್ರವಾರ ನಡೆದ ಮೊದಲ ಹಂತದ ಮತದಾನವು ಬಹುತೇಕ ಶಾಂತಿಯುತವಾಗಿ ನೆರವೇರಿತು. ಒಟ್ಟಾರೆ ಶೇ.69.23ರಷ್ಟು ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...