ಭಟ್ಕಳ: ಶ್ರೀವಲಿ ಪ್ರೌಢ ಶಾಲೆಯ ವಿದ್ಯಾರ್ಥಿನಿ ಪವಿತ್ರಾ ನಾಯ್ಕ ಪ್ರಬಂಧ ಸ್ಪರ್ಧೆಯಲ್ಲಿ ಪ್ರಥಮ

Source: sonews | By MV Bhatkal | Published on 17th October 2021, 8:12 PM | Coastal News | Don't Miss |

ಭಟ್ಕಳ: ಶ್ರೀವಲಿ ಪ್ರೌಢ ಶಾಲೆಯ ಹತ್ತನೇ ತರಗತಿಯ ವಿದ್ಯಾರ್ಥಿನಿ ಪವಿತ್ರಾ ಜಯಕರ ನಾಯ್ಕ ದಿಶಾ ಭಾರತ ಸಂಸ್ಥೆ ಹಾಗೂ ಈಸ್ಟ್ ವೆಸ್ಟ್ ಇನ್ಸಸ್ಟಿಟ್ಯೂ ಆಫ್ ಟೆಕ್ನಾಲಜಿ ಸಂಸ್ಥೆ ಜಂಟಿಯಾಗಿ ಸ್ವಾತಂತ್ರ್ಯಾ ನಂತರದ ಭಾರತ ಎನ್ನುವ ವಿಷಯದಲ್ಲಿ ನಡೆಸಿದ ಪ್ರಬಂಧ ಸ್ಪರ್ಧೆಯಲ್ಲಿ ಪವಿತ್ರಾ ನಾಯ್ಕ ಪ್ರಥಮ ಸ್ಥಾನವನ್ನು ಪಡೆಯುವ ಮೂಲಕ ಉತ್ತಮ ಸಾಧನೆ ಮಾಡಿದ್ದಾಳೆ. 

ಭಾರತ ದೇಶವ 75ನೇ ಸ್ವಾತಂತ್ರ್ಯ ವರ್ಷಾಚರಣೆಯಲ್ಲಿದ್ದು ಈ ಹಿನ್ನೆಲೆಯಲ್ಲಿ ರಾಜ್ಯ ಮಟ್ಟದ ಪ್ರಬಂಧ ಸ್ಪರ್ಧೆಯನ್ನು ಸಂಸ್ಥೆ ಕಾಲೇಜು, ಪಿ.ಯು.ಸಿ. ಮತ್ತು ಪ್ರೌಢ ಶಾಲಾ ವಿಭಾಗದಲ್ಲಿ ಕನ್ನಡ, ಇಂಗ್ಲೀಷ್‍ನಲ್ಲಿ ಆನ್‍ಲೈನ್ ಸ್ಪರ್ಧೆಯನ್ನು ಏರ್ಪಡಿಸಿತ್ತು. 

ಸ್ಪರ್ಧೆಯಲ್ಲಿ ಭಾಗವಹಿಸಿದ್ದ ಪವಿತ್ರಾ ಜಯಕರ ನಾಯ್ಕ ಈಕೆಯು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆಯುವ ಮೂಲಕ ಕೀರ್ತಿ ತಂದಿದ್ದಾಳೆ.  ಬಹುಮಾನ ವಿತರಣಾ ಕಾರ್ಯಕ್ರಮವು ಅ.30ರಂದು ಬೆಳಿಗ್ಗೆ ಬೆಂಗಳೂರಿನ ಈಸ್ಟ್ ವೆಸ್ಟ್ ಇನ್ಸಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಸಂಸ್ಥೆಯಲ್ಲಿ ಗಣ್ಯರ ಉಪಸ್ಥಿತಿಯಲ್ಲಿ ನಡೆಯಲಿದೆ.  ಈಕೆಯನ್ನು ಶಾಲಾ ಮುಖ್ಯೋಪಾಧ್ಯಾಯಿನಿ, ಬೋದಕ ವರ್ಗ ಅಭಿನಂದಿಸಿದೆ. 

Read These Next

ವಿಶ್ವ ವಿಕಲಚೇತನರ ದಿನಾಚರಣೆ ಕಾನೂನು ಸೇವಾ ಪ್ರಾಧಿಕಾರದಿಂದ ಸಹಕಾರ, ನ್ಯಾಯಾಧೀಶೆ ಪುಪ್ಷಲತಾ.

ಧಾರವಾಡ : ವಿಕಲಚೇತನರಿಗೆ ಅನುಕಂಪದ ಕಾರಣದಿಂದ ಅವಕಾಶ ವಂಚಿತರಾಗಬಾರದು, ಇಂತಹ ಮಕ್ಕಳಿಗೆ ಅಸಡ್ಯೆ ತೋರದೆ ಕಾಳಜಿ ಪೂರ್ವಕವಾಗಿ ...

ಎಸ್ ಡಿ ಎಂ ಹೊರ ಮತ್ತು ಒಳ ರೋಗಿಗಳ ವಿಭಾಗ ಸೇವೆಗಳ ಪುನರಾರಂಭಕ್ಕೆ ಷರತ್ತುಬದ್ಧ ಅನುಮತಿ : ಜಿಲ್ಲಾಧಿಕಾರಿ ನಿತೇಶ್ ಕೆ ಪಾಟೀಲ.

ಧಾರವಾಡ : ಸತ್ತೂರಿನ ಶ್ರೀಧರ್ಮಸ್ಥಳ ಮಂಜುನಾಥೇಶ್ವರ ವೈದ್ಯಕೀಯ ಮಹಾವಿದ್ಯಾಲಯ ಆಸ್ಪತ್ರೆ(ಎಸ್‌ಡಿಎಂಸಿಹೆಚ್)ಯ ಆವರಣದಲ್ಲಿ ಕಳೆದ ...

ಗೃಹರಕ್ಷಕರ ಈಶಾನ್ಯ ವಲಯಮಟ್ಟದ ವೃತ್ತಿಪರ ಹಾಗೂ ಕ್ರೀಡಾಕೂಟ ದೈಹಿಕ, ಮಾನಸಿಕವಾಗಿ ಸದೃಢರಾಗಿರಲು ಕ್ರೀಡೆಯಲ್ಲಿ ಪಾಲ್ಗೊಳ್ಳಿ: ವಿಮ್ಸ್ ನಿರ್ದೇಶಕ ಗಂಗಾಧರ್

ಬಳ್ಳಾರಿ : ದೈಹಿಕವಾಗಿ ಮತ್ತು ಮಾನಸಿಕವಾಗಿ ಸದೃಢವಾಗಿರಲು ಯಾವುದಾದರೂ ಕ್ರೀಡೆಯಲ್ಲಿ ಪಾಲ್ಗೊಳ್ಳಬೇಕು ಎಂದು ವಿಮ್ಸ್ ನಿರ್ದೇಶಕ ...