ಎಸ್ಎಸ್ ಸಿ ಹಗರಣ: ಬಂಧಿತ ಪಾರ್ಥ ಚಟರ್ಜಿ ಆಪ್ತೆ ಅರ್ಪಿತಾ ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸಲು ಇಡಿ ಮುಂದು!

Source: ANI | By MV Bhatkal | Published on 31st July 2022, 12:00 AM | National News |

ಕೋಲ್ಕತ್ತಾ: ಅಮಾನತುಗೊಂಡಿರುವ ತೃಣಮೂಲ ಕಾಂಗ್ರೆಸ್(ಟಿಎಂಸಿ) ನಾಯಕ ಪಾರ್ಥ ಚಟರ್ಜಿ ಆಪ್ತೆ ಅರ್ಪಿತಾ ಮುಖರ್ಜಿರ ಕನಿಷ್ಠ ಮೂರು ಬ್ಯಾಂಕ್ ಖಾತೆಗಳ ವಹಿವಾಟುಗಳನ್ನು ಸ್ಥಗಿತಗೊಳಿಸುವ ಪ್ರಕ್ರಿಯೆಯನ್ನು ಜಾರಿ ನಿರ್ದೇಶನಾಲಯ(ಇಡಿ) ಪ್ರಾರಂಭಿಸಿದೆ. 

ಇನ್ನು ಆ ಖಾತೆಗಳಲ್ಲಿ ಕನಿಷ್ಠ ಎರಡು ಕೋಟಿ ರೂ. ಪತ್ತೆಯಾಗಿದೆ ಎಂದು ತನಿಖಾ ಸಂಸ್ಥೆಯ ಹಿರಿಯ ಅಧಿಕಾರಿಯೊಬ್ಬರು ಶನಿವಾರ ಈ ಮಾಹಿತಿ ನೀಡಿದ್ದಾರೆ.

ಮುಖರ್ಜಿಯವರ ಹಲವಾರು 'ನಕಲಿ ಕಂಪನಿಗಳ' ಬ್ಯಾಂಕ್ ಖಾತೆಗಳು ಇಡಿ ಸ್ಕ್ಯಾನರ್ ಅಡಿಯಲ್ಲಿವೆ ಎಂದು ಅವರು ಹೇಳಿದರು. ಮುಖರ್ಜಿಯವರ ಮೂರು ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸುವ ಪ್ರಕ್ರಿಯೆ ಆರಂಭವಾಗಿದೆ. ಈ ಖಾತೆಗಳಲ್ಲಿ ಒಟ್ಟು ಸುಮಾರು ಎರಡು ಕೋಟಿ ರೂ. ಇದ್ದು ಈ ಖಾತೆಗಳನ್ನು ಬಹು ವಹಿವಾಟು ನಡೆಸಲು ಬಳಸಲಾಗಿದೆ ಎಂದು ನಾವು ಶಂಕಿಸಿದ್ದು ಜೊತೆಗೆ ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದರು. 
ಖಾತೆಯಿಂದ ಪಡೆದ ಹಣದ ಮೊತ್ತವನ್ನು ಬಹಿರಂಗಪಡಿಸದ ಅಧಿಕಾರಿಯೂ, 'ನಕಲಿ ಕಂಪನಿಗಳ' ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸುವ ಬಗ್ಗೆ ಇನ್ನೂ ನಿರ್ಧಾರ ತೆಗೆದುಕೊಳ್ಳಬೇಕಾಗಿದೆ ಎಂದು ಹೇಳಿದರು.
'ನಾವು ಸಂಬಂಧಪಟ್ಟ ಅಧಿಕಾರಿಗಳಿಂದ ಈ ಬ್ಯಾಂಕ್ ಖಾತೆಗಳ ವಿವರಗಳನ್ನು ಕೇಳಿದ್ದೇವೆ. ಖಾತೆಗಳನ್ನು ಪರಿಶೀಲಿಸಿದ ನಂತರ, ಮುಂದಿನ ಕ್ರಮದ ಬಗ್ಗೆ ನಿರ್ಧಾರ ತೆಗೆದುಕೊಳ್ಳುತ್ತೇವೆ ಎಂದರು. 
ಮುಖರ್ಜಿ ಅವರು ಹೆಚ್ಚಿನ ಬ್ಯಾಂಕ್ ಖಾತೆಗಳನ್ನು ಹೊಂದಿದ್ದಾರೆಯೇ ಎಂಬುದನ್ನು ಪತ್ತೆ ಹಚ್ಚಲು ಅವರ ವಿಚಾರಣೆಯನ್ನು ಮುಂದುವರಿಸಲಾಗುವುದು ಎಂದು ಇಡಿ ಹೇಳಿದೆ.
ಮೂಲಗಳ ಪ್ರಕಾರ, ಚಟರ್ಜಿ ಅವರ ಬ್ಯಾಂಕ್ ಖಾತೆಗಳ ಬಗ್ಗೆಯೂ ತನಿಖೆ ನಡೆಸಲಾಗುತ್ತಿದೆ. ಬೆಳಗ್ಗೆಯಿಂದ ಮುಖರ್ಜಿ ಮತ್ತು ಚಟರ್ಜಿ ಇಬ್ಬರನ್ನೂ ವಿಚಾರಣೆ ನಡೆಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.
ಪಾರ್ಥ ಚಟರ್ಜಿ ಮತ್ತು ಅರ್ಪಿತಾ ಮುಖರ್ಜಿ ಅವರ ಎರಡು ಫ್ಲಾಟ್‌ಗಳಿಂದ 50 ಕೋಟಿ ರೂಪಾಯಿ ಮೌಲ್ಯದ ನಗದು ಜೊತೆಗೆ ಅಪಾರ ಪ್ರಮಾಣದ ಚಿನ್ನಾಭರಣ ಮತ್ತು ವಿದೇಶಿ ಕರೆನ್ಸಿಯನ್ನು ಇಡಿ ವಶಪಡಿಸಿಕೊಂಡಿದೆ. ಇಬ್ಬರೂ ಆಗಸ್ಟ್ 3ರವರೆಗೆ ಕೇಂದ್ರ ಸಂಸ್ಥೆಯ ವಶದಲ್ಲಿರಲಿದ್ದಾರೆ.

Read These Next

ರಿಲಯನ್ಸ್ ಜೊತೆ ನಂಟು ಹೊಂದಿರುವ ಕಂಪೆನಿಯಿಂದ ಬಿಜೆಪಿಗೆ 375 ಕೋಟಿ ರೂ. ಮೌಲ್ಯದ ಚುನಾವಣಾ ಬಾಂಡ್

ರಿಲಯನ್ಸ್ ಗುಂಪಿನೊಂದಿಗೆ ನಂಟು ಹೊಂದಿರುವ, ಆದರೆ ಹೊರಜಗತ್ತಿಗೆ ಅಪರಿಚಿತವಾಗಿರುವ ಕಂಪೆನಿ ಕ್ವಿಕ್ ಸಪ್ಪೆ ಚೇನ್ ಪ್ರೈವೇಟ್ ...

ಲೋಕಸಭಾ ಚುನಾವಣೆ; ಕಾಂಗ್ರೇಸ್ ನ ಎರಡನೇ ಪಟ್ಟಿ ಬಿಡುಗಡೆ; ಉ.ಕ ಕ್ಷೇತ್ರಕ್ಕೆ ಅಂಜಲಿ ನಿಂಬಾಳ್ಕರ್

ಲೋಕಸಭಾ ಚುನಾವಣೆಗೆ ಕಾಂಗ್ರೆಸ್‌ ಪಕ್ಷ ತನ್ನ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಬಿಡುಗಡೆಗೊಳಿಸಿದ್ದು, ಕರ್ನಾಟಕದ 17, ಅರುಣಾಚಲ ...

ಸಿಎಎ ನಿಯಮಾವಳಿಗಳಿಗೆ ತಡೆ ಕೋರುವ ಅರ್ಜಿಗಳ ವಿಚಾರಣೆ ; ಸು.ಕೋರ್ಟ್‌ನಿಂದ ಕೇಂದ್ರಕ್ಕೆ ನೋಟಿಸ್

ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ)ಯ ನಿಯಮಗಳಿಗೆ ತಡೆಯಾಜ್ಞೆ ನೀಡಬೇಕೆಂದು ಕೋರಿ ಸಲ್ಲಿಸಲಾಗಿರುವ ಅರ್ಜಿಗಳನ್ನು ಮಂಗಳವಾರ ...