ಎಸ್.ಎಸ್.ಎಲ್.ಸಿ ಪರೀಕ್ಷಾ ಫಲಿತಾಂಶ ಪ್ರಕಟ; ಶೇ.83.89 ವಿದ್ಯಾರ್ಥಿಗಳು ಉತ್ತೀರ್ಣ; ಚಿತ್ರದುರ್ಗ ಪ್ರಥಮ, ಯಾದಗೀರಿಗೆ ಕೊನೆ ಸ್ಥಾನ

Source: S O news | By Staff Correspondent | Published on 8th May 2023, 10:50 AM | State News |

ಬೆಂಗಳೂರು: 2022-23 ಸಾಲಿನ ಎಸೆಸೆಲ್ಸಿ ಪರೀಕ್ಷಾ ಫಲಿತಾಂಶ ಪ್ರಕಟಗೊಂಡಿದ್ದು ಚಿತ್ರದುರ್ಗ ಜಿಲ್ಲೆ ಪ್ರಥಮ ಸ್ಥಾನ ಪಡೆದುಕೊಂಡರೆ ಯಾದಗೀರಿ ಜಿಲ್ಲೆ ಕೊನೆಯ ಸ್ಥಾನ ಪಡೆದುಕೊಂಡಿದೆ. 

ಈ ಬಾರಿ ಕರಾವಳಿ ಜಿಲ್ಲೆಗಳು ನಂಬರ್ ಒನ್ ಸ್ಥಾನದಿಂದ ವಂಚಿತಗೊಂಡಿವೆ. 

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಅಧಿಕಾರಿಗಳು  ಫಲಿತಾಂಶ ಪ್ರಕಟಿಸಿದರು.

'ಶೇ.83.89ರಷ್ಟು ವಿದ್ಯಾರ್ಥಿಗಳು ಉತ್ತೀರ್ಣಗೋಂಡಿದ್ದಾರೆ. ನಾಲ್ವರು ವಿದ್ಯಾರ್ಥಿಗಳು 625 ಅಂಕ ಪಡೆದಿದ್ದಾರೆ' ಎಂದು ಮಾಹಿತಿ ನೀಡಿದರು. 

ಚಿತ್ರದುರ್ಗ ಜಿಲ್ಲೆ ಪ್ರಥಮ ಸ್ಥಾನದಲ್ಲಿದ್ದರೆ, ಎರಡನೇ ಸ್ಥಾನದಲ್ಲಿ ಮಂಡ್ಯ ಜಿಲ್ಲೆ ಹಾಗೂ ಹಾಸನ ಜಿಲ್ಲೆ 3ನೇ ಸ್ಥಾನದಲ್ಲಿದೆ. ಇನ್ನು ಯಾದಗಿರಿ ಜಿಲ್ಲೆ ಕೊನೆಯ ಸ್ಥಾನದಲ್ಲಿದೆ ಎಂದು ಅಧಿಕಾರಿಗಳು ತಿಳಿಸಿದರು. 

ಮಾ.31ರಿಂದ ಎ.15ರವರೆಗೆ ಎಸೆಸೆಲ್ಸಿ ಪರೀಕ್ಷೆಯನ್ನು ನಡೆಸಲಾಗಿತ್ತು. ಈಗ ಎಲ್ಲ ವಿಷಯಗಳ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವು ಮುಕ್ತಾಯಗೊಂಡಿತ್ತು.

ಫಲಿತಾಂಶವನ್ನು  https://karresults.nic.in/ 11 ಗಂಟೆಗೆ ವೆಬ್​ಸೈಟ್​ನಲ್ಲಿ ನೋಡಬಹುದು. 

Read These Next

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ಬಿಜೆಪಿ ಮುಖಂಡನಿಗೆ ಪೆನ್‌ಡ್ರೈವ್ ನೀಡಿದ್ದೆ; ಪ್ರಜ್ವಲ್ ಕಾರು ಚಾಲಕನಿಂದ ಹೇಳಿಕೆ

ಪ್ರಜ್ವ ರೇವಣ್ಣರದ್ದು ಎನ್ನಲಾದ ಅಶ್ಲೀಲ ವೀಡಿಯೊ ಪೆನ್ ಡ್ರೈವ್ ಬಿಜೆಪಿ ಮುಖಂಡರೂ ಆಗಿರುವ ವಕೀಲ ದೇವರಾಜೇಗೌಡ ಬಿಟ್ಟು ಬೇರೆ ಯಾರಿಗೂ ...

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ಅವಧಿ ಉಲ್ಲೇಖಿಸದೇ ಪ್ರಜ್ವಲ್ ರೇವಣ್ಣ ಜೆಡಿಎಸ್‌ನಿಂದ ಅಮಾನತು

ಹಲವು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯವೆಸಗಿರುವ ಆರೋಪ ಪ್ರಕರಣ ಸಂಬಂಧ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಜೆಡಿಎಸ್ ಪಕ್ಷ ...

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ರೇವಣ್ಣ, ಪ್ರಜ್ವಲ್ ಉಚ್ಚಾಟನೆಗೆ ಜೆಡಿಎಸ್ ಶಾಸಕರ ಪಟ್ಟು

ರಾಜ್ಯದ ಜನತೆಯ ಮುಂದೆ ತಲೆ ತಗ್ಗಿಸುವಂತಹ ಕೆಲಸ ಮಾಡಿದವರನ್ನು ರಾಕ್ಷದಿಂದ ಉಚ್ಚಾಟನೆ ಮಾಡಿ ಪಕ್ಷದ ಘನತೆಯನ್ನು ಉಳಿಸಬೇಕಿದೆ ಎಂದು ...

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ನನ್ನನ್ನು, ದೇವೇಗೌಡರನ್ನು ಎಳೆದು ತರಬೇಡಿ: ಕುಮಾರಸ್ವಾಮಿ

ಜೆಡಿಎಸ್ ಸಂಸದ ಪ್ರಜಿ ಕುಮಾರಸ್ವಾಮಿ ಡ್ರೈವ್ ಪ್ರಕರಣದಲ್ಲಿ ನನ್ನನ್ನು, ದೇವೇಗೌಡರನ್ನು ಎಳೆದು ತರಬೇಡಿ' ಎಂದು ಮಾಧ್ಯಮಗಳ ಮುಂದೆ ...

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ತ್ವರಿತಗತಿಯಲ್ಲಿ ತನಿಖೆ ನಡೆಸಿ, ವರದಿ ಸಲ್ಲಿಸಲು ಸೂಚನೆ: ಪರಮೇಶ್ವ‌ರ್

ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದ ತನಿಖೆಯನ್ನು ತ್ವರಿತಗತಿಯಲ್ಲಿ ನಡೆಸಿ, ವರದಿ ಸಲ್ಲಿಸುವಂತೆ ...