ಎಸ್ಎಸ್ಎಲ್ ಸಿ ಪರೀಕ್ಷೆ; ಸಚಿವ ಸುರೇಶ್‌ ಕುಮಾರ್ ವಿರುದ್ಧ ಭಾಸ್ಕರ್ ರಾವ್ ಗೆ ದೂರು

Source: S.O. News Service | Published on 18th June 2020, 8:09 PM | State News | Don't Miss |

ಬೆಂಗಳೂರು: ಶಿಕ್ಷಣ ಸಚಿವ ಸುರೇಶ್ ಕುಮಾರ್ ವಿರುದ್ಧ ಅಪರಾಧ ಪ್ರಕರಣ ದಾಖಲಿಸುವಂತೆ ವ್ಯಕ್ತಿಯೋರ್ವರು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಮತ್ತು ಕೇಂದ್ರ ವಿಭಾಗದ ಡಿಸಿಪಿ ಚೇತನ್ ಸಿಂಗ್ ರಾಥೋಡ್‌ ಅವರಿಗೆ ಇಮೇಲ್ ಮೂಲಕ ದೂರು ನೀಡಿದ್ದಾರೆ.

ಎಸ್​ಎಸ್​ಎಲ್​ಸಿ ಪರೀಕ್ಷೆ ದಿನಾಂಕ ಪ್ರಕಟಿಸಿದ ಹಿನ್ನೆಲೆಯಲ್ಲಿ ಸಚಿವರು ವಿರುದ್ಧ ಆರ್. ಐಯ್ಯರ್ ಎಂಬುವವರು ದೂರು ನೀಡಿದ್ದಾರೆ. ರಾಜ್ಯದಲ್ಲಿ ಕೊರೋನಾ ವೈರಸ್ ತನ್ನ ಜಾಲ ವಿಶಾಲವಾಗಿ ಪಸರಿಸಿದೆ. ಇಂತಹ ಕ್ಲಿಷ್ಟಕರ ಪರಿಸ್ಥಿತಿಯಲ್ಲೂ ಸಚಿವ ಸುರೇಶ್ ಕುಮಾರ್ ಎಸ್​ಎಸ್​ಎಲ್​ಸಿ ಪರೀಕ್ಷೆ ನಡೆಸಲು‌ ನಿರ್ಧರಿಸಿದ್ದಾರೆ. ಇದರಿಂದ ವಿದ್ಯಾರ್ಥಿ ಪೋಷಕರು ಸೇರಿ ಶಿಕ್ಷಕರ ಕುಟುಂಬಗಳಿಗೆ ಕಷ್ಟವಾಗಲಿದ್ದು, ಸಾವು-ನೋವು ಸಂಭವಿಸುವ ಸಾಧ್ಯತೆ ಇದೆ. ಹೀಗಿದ್ದರೂ ಸಚಿವರು ಪರೀಕ್ಷೆ ನಡೆಸಲು ಮುಂದಾಗಿದ್ದಾರೆ. ಆದ್ದರಿಂದ ಅವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಬೇಕು ಎಂದು ಆದರ್ಶ ಆರ್. ಐಯ್ಯರ್ ಮನವಿ ಮಾಡಿದ್ದಾರೆ.

ಈ ಬಗ್ಗೆ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಬುಧವಾರವೇ ಅವರು ಇಮೇಲ್​ ಮೂಲಕ ದೂರು ನೀಡಿದ್ದಾರೆ. ಅಲ್ಲದೇ, ಪಿಯುಸಿ ಇಂಗ್ಲಿಷ್​ ಪರೀಕ್ಷೆ ನಡೆಸುವ ಕ್ರಮವನ್ನು ಪ್ರಶ್ನಿಸಿ ಮಕ್ಕಳ ಆರೋಗ್ಯದ ಬಗ್ಗೆ ಅವರು ಕಳವಳ ವ್ಯಕ್ತಪಡಿಸಿದ್ದಾರೆ.

Read These Next

'ಚುನಾವಣಾ ಬಾಂಡ್' ವಿಶ್ವದ ದೊಡ್ಡ ಹಗರಣ; ಬಿಜೆಪಿ ವಿರುದ್ಧ ರಾಹುಲ್‌ ಗಾಂಧಿ ವಾಗ್ದಾಳಿ

ಬಿಜೆಪಿಯ ಚುನಾ ವಣಾ ಬಾಂಡ್ ವಿಶ್ವದ ಅತ್ಯಂತ ದೊಡ್ಡ ಹಗರಣವಾಗಿದ್ದು, ಗೂಂಡಾಗಳ ರೀತಿಯಲ್ಲಿ ಕೆಲವು ಉದ್ಯಮಿಗಳನ್ನು ಬೆದರಿಸಿ ಹಫ್ತಾ ...

ಸಂವಿಧಾನ ಮತ್ತು  ಪ್ರಜಾಪ್ರಭುತ್ವ ಉಳಿಸುವುದಕ್ಕೆ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ಎಂದು ರಾಹುಲ್ ಗಾಂಧಿ ಕರೆ

ಮಾಲೂರು : ಈ ಲೋಕಸಭೆ ಚುನಾವಣೆಯು ಎರಡು ಸಿದ್ಧಾಂತಗಳ ನಡುವಿನ ಯುದ್ಧ ಇಂಡಿಯಾ ಬಣ ಒಂದು ಕಡೆ "ಸಂವಿಧಾನಕ್ಕಾಗಿ ಹೋರಾಟ" ನಡೆಸುತ್ತಿದೆ ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...