ಎಸ್‍ಎಸ್‍ಎಲ್‍ಸಿ ಪರೀಕ್ಷೆ ಸಮರ್ಪಕ ನಿರ್ವಹಣೆ ಸಚಿವ ಜಗದೀಶ ಶೆಟ್ಟರ್ ಸೂಚನೆ

Source: S.O. News Service | By MV Bhatkal | Published on 18th June 2020, 7:35 PM | State News | Don't Miss |

ಧಾರವಾಡ: ಕೋವಿಡ್ ಇರುವ ಈ ಸಂದರ್ಭದಲ್ಲಿ ಎಸ್‍ಎಸ್‍ಎಲ್‍ಸಿ ಪರೀಕ್ಷೆಗಳನ್ನು ಸಮರ್ಪಕವಾಗಿ ಆಯೋಜಿಸುವುದು ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಜಿಲ್ಲಾಡಳಿತಕ್ಕೆ ಸವಾಲಾಗಿದೆ ಪ್ರತಿಯೊಬ್ಬ ಅಧಿಕಾರಿ, ಶಿಕ್ಷಕರು ಮತ್ತು ಸಿಬ್ಬಂದಿ ವಿಶೇಷ ಎಚ್ಚರಿಕೆ ವಹಿಸಿ ಪರೀಕ್ಷೆ ನಡೆಸಬೇಕು ಎಂದು ಬೃಹತ್, ಮಧ್ಯಮ ಕೈಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಜಗದೀಶ್ ಶೆಟ್ಟರ್ ಹೇಳಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಇಂದು ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿ 27841 ಮಕ್ಕಳಿಗೆ 117 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಗಳನ್ನು ಎಲ್ಲಾ ಸುರಕ್ಷತಾ ಕ್ರಮಗಳೊಂದಿಗೆ ಆಯೋಜಿಸಬೇಕು. ಜಿಲ್ಲೆಯ ಎಲ್ಲಾ ಬಿಇಓಗಳು, ಪ್ರೌಢಶಾಲಾ ಮುಖ್ಯೋಪಾಧ್ಯಾಯರು ಎಲ್ಲಾ ವಿದ್ಯಾರ್ಥಿಗಳನ್ನು ಖುದ್ದಾಗಿ ಸಂಪರ್ಕಿಸಿ ಅವರ ಸಾರಿಗೆ ವ್ಯವಸ್ಥೆ ಖಚಿತಪಡಿಸಿಕೊಳ್ಳಬೇಕು. ಇದಕ್ಕಾಗಿ ಸೂಕ್ಷ್ಮ  ಯೋಜನೆ ಮಾಡಬೇಕು. ಯಾವ ವಿದ್ಯಾರ್ಥಿಯೂ ಪರೀಕ್ಷೆಯಿಂದ ವಂಚಿತರಾಗಬಾರದು ಎಂದು ಸೂಚಿಸಿದರು.
ಕೋವಿಡ್ ನಿಯಂತ್ರಣ, ಮೆಕ್ಕೆಜೋಳ ಬೆಳೆದ ರೈತರು, ಆಟೋ ಚಾಲಕರು, ಕಾರ್ಮಿಕರು, ಮೊದಲಾದ ವರ್ಗಗಳಿಗೆ ಪರಿಹಾರ ವಿತರಣೆ, ಕೈಗಾರಿಕೆಗಳ ಪುನರಾರಂಭ ಸೇರಿದಂತೆ ಮತ್ತಿತರ ವಿಷಯಗಳ ಕುರಿತು ಸಭೆಯಲ್ಲಿ ಸಚಿವರು ಚರ್ಚಿಸಿದರು.
ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ: ಸುಜಾತಾ ಹಸವೀಮಠ ಮಾತನಾಡಿ, ಜಿಲ್ಲೆಯಲ್ಲಿ ಇದುವರೆಗೆ 21463 ಜನರ ಗಂಟಲುದ್ರವ ತಪಾಸಣೆ ಮಾಡಲಾಗಿದೆ. 21100 ಜನರ ವರದಿಗಳು ನೆಗೆಟಿವ್ ಬಂದಿವೆ. 250 ಜನರ ವರದಿಗಾಗಿ ಕಾಯಲಾಗುತ್ತಿದೆ. ಇದುವರೆಗೆ 163 ಜನರಲ್ಲಿ ಕೋವಿಡ್ ಸೋಂಕು ದೃಢಪಟ್ಟಿದೆ. 51 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 109 ಜನ ಚಿಕಿತ್ಸೆ ಪಡೆಯುತ್ತಿದ್ದಾರೆ. ಮೂವರು ಮರಣ ಹೊಂದಿದ್ದಾರೆ ಎಂದು ತಿಳಿಸಿದರು.
ಜಿಲ್ಲಾಧಿಕಾರಿ ದೀಪಾ ಚೋಳನ್, ಪೆÇಲೀಸ್ ಆಯುಕ್ತ ಆರ್. ದಿಲೀಪ್, ಜಿಲ್ಲಾ ಪೆÇಲೀಸ್ ವರಿμÁ್ಠಧಿಕಾರಿ ವರ್ತಿಕಾ ಕಟಿಯಾರ್, ಜಿಪಂ ಸಿಇಓ ಡಾ.ಬಿ.ಸಿ. ಸತೀಶ್, ಕಿಮ್ಸ್ ನಿರ್ದೇಶಕ ಡಾ.ರಾಮಲಿಂಗಪ್ಪ ಅಂಟರಠಾಣಿ, ಅಪರ ಜಿಲ್ಲಾಧಿಕಾರಿ ಶಿವಾನಂದ ಕರಾಳೆ, ಮಹಾನಗರಪಾಲಿಕೆ ಆಯುಕ್ತ ಡಾ.ಸುರೇಶ್ ಇಟ್ನಾಳ, ಡಿಡಿಪಿಐ ಮೋಹನ ಹಂಚಾಟೆ ಮತ್ತಿತರರು ಇದ್ದರು.

Read These Next

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಗದಗ: ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ ಭೇದಿಸಿದ ಪೊಲೀಸರು; ಸುಪಾರಿ ನೀಡಿದ ಮನೆಮಗ ಸಹಿತ 8 ಮಂದಿಯ ಬಂಧನ

ಮೂರು ದಿನಗಳ ಹಿಂದೆ ಗದಗದಲ್ಲಿ ನಡೆದಿದ್ದ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣವನ್ನು ಭೇದಿಸಿರುವ ಪೊಲೀಸರು ಎಂಟು ಮಂದಿ ...