ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟ. ಉತ್ತರಕನ್ನಡ ಜಿಲ್ಲೆಯ ಏಳು ವಿದ್ಯಾರ್ಥಿಗಳು ರಾಜ್ಯಕ್ಕೆ ಪ್ರಥಮ

Source: SO News | By Laxmi Tanaya | Published on 19th May 2022, 8:54 PM | Coastal News |

ಭಟ್ಕಳ : ಪ್ರಸ್ತುತ ಸಾಲಿನ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯ ಎಸ್.ಎಸ್.ಎಲ್.ಸಿ ಪರೀಕ್ಷಾ ಫಲಿತಾಂಶ ಹೊರಬಿದ್ದಿದೆ.

ಉತ್ತರಕನ್ನಡ ಜಿಲ್ಲೆ ಏಳು ವಿದ್ಯಾರ್ಥಿಗಳು ರಾಜ್ಯಕ್ಕೆ ಪ್ರಥಮ ಸ್ಥಾನ  ಪಡೆದು ಸಾಧನೆ ಮಾಡಿದ್ದಾರೆ.

ಕಾರವಾರ ಶೈಕ್ಷಣಿಕ ಜಿಲ್ಲೆಯ ಕುಮಟಾ ಕೊಂಕಣ ಎಜ್ಯುಕೇಶನ್ ಟ್ರಸ್ಟ್ ಶಾಲೆಯ  ಮೇಘನಾ ಭಟ್, ಕಾರ್ತಿಕ್ ಭಟ್ ಹಾಗೂ  ದೀಕ್ಷಾ ನಾಯ್ಕ 625ರಲ್ಲಿ 625 ಅಂಕ ಪಡೆದು ಸಾಧನೆ ಮಾಡಿದ್ದಾರೆ.

ಇನ್ನೂ ಶಿರಸಿ ಶೈಕ್ಷಣಿಕ ಜಿಲ್ಲೆಯ ನಾಲ್ವರು ವಿದ್ಯಾರ್ಥಿಗಳು  ರಾಜ್ಯಕ್ಕೆ ಪ್ರಥಮರಾಗಿದ್ದಾರೆ. ಶರ್ಮಿನಾ ಶೇಖ್, ತುಷಾರ್ ಶಾನಬಾಗ್,  ಚಿರಾಗ್ ನಾಯ್ಕ,  ಕನ್ನಿಕಾ ಪರಮೇಶ್ವರಿ ಹೆಗಡೆ 625ಕ್ಕೆ 625 ಅಂಕ ಪಡೆದು ರಾಜ್ಯಕ್ಕೆ ಮೊದಲಿಗರಾಗಿದ್ದಾರೆ.

ರಾಜ್ಯದಲ್ಲಿ ಒಟ್ಟು 145 ವಿದ್ಯಾರ್ಥಿಗಳು ಪೂರ್ಣ ಅಂಕ ಪಡೆದಿದ್ದಾರೆ‌. ಈ  ಬಾರಿಯೂ ಕೂಡ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ.

ಒಟ್ಟು  8,07,206 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. 20,406 ವಿದ್ಯಾರ್ಥಿಗಳು ಪರೀಕ್ಷೆಗೆ ಗೈರಾಗಿದ್ದರು. 7,30,881 ಮಕ್ಕಳು ಪರೀಕ್ಷೆಯಲ್ಲಿ ಪಾಸಾಗಿದ್ದಾರೆ.

Read These Next

ಕಾರವಾರ: ಹಣ, ಉಡುಗೊರೆ ಹಂಚಿಕೆ ಬಗ್ಗೆ ಹೆಚ್ಚಿನ ನಿಗಾ ವಹಿಸಿ : ವಿಶೇಷ ವೆಚ್ಚ ವೀಕ್ಷಕ ಬಿ.ಮುರಳಿ ಕುಮಾರ್

ಮತದಾರರಿಗೆ ಹಣ, ಉಡುಗೊರೆ ಮತ್ತಿತರ ಆಮಿಷಗಳನ್ನು ಒಡ್ಡುವುದರ ಕುರಿತಂತೆ ತೀವ್ರ ನಿಗಾ ವಹಿಸಬೇಕು, ಈ ಕುರಿತಂತೆ ದೂರುಗಳು ಬಂದ ...

ಕಾರವಾರ: ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮಹಿಳೆಯರಿಗೆ ತಿಂಗಳಿಗೆ ಹತ್ತೂವರೆ ಸಾವಿರ: ಸೈಲ್

ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರವನ್ನ ಗೆಲ್ಲಿಸಿದರೆ ತಿಂಗಳಿಗೆ ಹತ್ತೂವರೆ ಸಾವಿರ ಬಡ ಮಹಿಳೆಯರ ಖಾತೆಗೆ ಬರಲಿದೆ. ಈ ಅವಕಾಶವನ್ನ ...

ಭಟ್ಕಳದ ಅಂಜುಮಾನ್ ಇಂಜಿನಿಯರಿಂಗ್ ಕಾಲೇಜು ಗುಡ್ಡದ ಮೇಲಿನ ಸ್ವರ್ಗ - ಡಾ. ದಿನೇಶ್ ಗಾಂವ್ಕರ್

೨೦೨೪- ಶಿಕ್ಷಕ ಶೀರ್ಷಿಕೆ ಅಡಿಯಲ್ಲಿ ಅಂಜುಮಾನ್ ತಾಂತ್ರಿಕ ವಿದ್ಯಾಲಯದಲ್ಲಿ ಕನ್ನಡ ವೇದಿಕೆಯ ಕಾರ್ಯಕ್ರಮವನ್ನು ವಿದ್ಯಾರ್ಥಿಗಳು ...