ಎಸ್.ಎಸ್.ಎಲ್.ಸಿ ಪೂರಕ ಪರೀಕ್ಷೆ : ವಿದ್ಯಾರ್ಥಿಗಳಿಗೆ ಸರ್ಕಾರಿ ಬಸ್‍ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ

Source: SO News | By Laxmi Tanaya | Published on 19th September 2020, 8:09 AM | State News | Don't Miss |

ಧಾರವಾಡ :  ಎಸ್.ಎಸ್.ಎಲ್.ಸಿ ಪೂರಕ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವಾಹನಗಳಲ್ಲಿ ಪರೀಕ್ಷಾ ದಿನಗಳಂದು ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ.

       ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯು ಸಾರ್ವಜನಿಕ ಸಂಪರ್ಕ ಕ್ಷೇತ್ರದಲ್ಲಿನ ಜೀವನಾಡಿಯಾಗಿದ್ದು, ಸಾರ್ವಜನಿಕ ಪ್ರಯಾಣಿಕರಿಗೆ ಸುರಕ್ಷಿತ, ಸುಖಕರ ಹಾಗೂ ಮಿತವ್ಯಯಕರ ಸೇವೆಯನ್ನು ಸಲ್ಲಿಸುತ್ತಿದೆ.  ಸೆಪ್ಟೆಂಬರ್ 21, 2020 ರಿಂದ 28 ರವರೆಗೆ ಎಸ್.ಎಸ್.ಎಲ್.ಸಿ ಪೂರಕ ಪರೀಕ್ಷೆಗೆಳು ಇರುವುದರಿಂದ ಸದರಿ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ತಮ್ಮ ವಾಸಸ್ಥಳದಿಂದ ನಿಯೋಜಿತ ಪರೀಕ್ಷಾ ಕೇಂದ್ರದವರೆಗೆ ಹೋಗುವಾಗ ಮತ್ತು ಹಿಂದಿರುಗುವಾಗ ವಿದ್ಯಾರ್ಥಿಗಳು ತಮ್ಮ ಎಸ್.ಎಸ್.ಎಲ್.ಸಿ ಪೂರಕ ಪರೀಕ್ಷೆ ಪ್ರವೇಶ ಪತ್ರವನ್ನು ತೋರಿಸಿ ಸಂಸ್ಥೆಯ ಧಾರವಾಡ, ಕಾರವಾರ, ಬಾಗಲಕೋಟ, ಹಾವೇರಿ, ಬೆಳಗಾವಿ ಮತ್ತು ಗದಗ ಜಿಲ್ಲೆಗಳ ನಗರ, ಹೊರವಲಯ, ಸಾಮಾನ್ಯ ಹಾಗೂ ವೇಗದೂತ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಹುಬ್ಬಳ್ಳಿ ವಾಕರಸಾ ಸಂಸ್ಥೆಯ ಕೇಂದ್ರ ಕಛೇರಿ ಪ್ರಕಟಣೆ ತಿಳಿಸಿದೆ.

Read These Next

ಸಂವಿಧಾನದ ಆಶಯವನ್ನು ಎತ್ತಿಹಿಡಿಯುವಲ್ಲಿ ನ್ಯಾಯಾಂಗದ ಪಾತ್ರ ದೊಡ್ಡದು: ಮುಖ್ಯಮಂತ್ರಿ ಸಿದ್ದರಾಮಯ್ಯ

ಭಾರತದ ನ್ಯಾಯಾಂಗವು ಸಂವಿಧಾನದ ಆಶಯಗಳನ್ನು ಎತ್ತಿ ಹಿಡಿಯುವಲ್ಲಿ ಪ್ರಮುಖ ಪಾತ್ರ ವಹಿಸುತ್ತಾ ಬಂದಿದೆ. ಮೂಲಭೂತ ಹಕ್ಕುಗಳಿಗೆ ...

ವಿದ್ಯಾರ್ಥಿಗಳ ಗೊಂದಲಕ್ಕೆ ತೆರೆ: 5, 8, 9ನೇ ತರಗತಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅಸ್ತು!

ವಿದ್ಯಾರ್ಥಿಗಳ ಗೊಂದಲಕ್ಕೆ ತೆರೆ: 5, 8, 9ನೇ ತರಗತಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅಸ್ತು!

ಕೋಲಾರ ಕ್ಷೇತ್ರಕ್ಕೆ ಏಪ್ರಿಲ್ 26 ಕ್ಕೆ ಮತದಾನ, ಜೂನ್ 4ಕ್ಕೆ ಫಲಿತಾಂಶ, ತಕ್ಷಣದಿಂದಲೆ ಜಿಲ್ಲೆಯಾದ್ಯಂತ ನೀತಿ ಸಂಹಿತೆ ಜಾರಿ

ಲೋಕಸಭಾ ಚುನಾವಣೆಗೆ ಚುನಾವಣಾ ಆಯೋಗ ದಿನಾಂಕ ಘೋಷಣೆ ಮಾಡಿರುವ ಹಿನ್ನೆಲೆಯಲ್ಲಿ ತಕ್ಷಣದಿಂದಲೆ ಜಿಲ್ಲೆಯಾದ್ಯಂತ ಮಾದರಿ ನೀತಿ ಸಂಹಿತೆ ...

ಭಾಷಾ ಜ್ಞಾನದ ಕುರಿತು ಯಾರ ಬಗ್ಗೆಯೂ ಕೇವಲವಾಗಿ ಮಾತನಾಡಿಲ್ಲ: ಜೆ.ಪಿ.ಹೆಗ್ಡೆ ಸ್ವಷ್ಟನೆ

ಉಡುಪಿ: ಈವರೆಗಿನ ರಾಜಕೀಯ ಜೀವನದಲ್ಲಿ ಯಾರ ಮನಸ್ಸನ್ನೂ ನೋಯಿಸುವುದಾಗಲಿ ಅಥವಾ ಕೇವಲವಾಗಿ ಮಾತನಾಡುವುದನ್ನಾಗಲಿ ಮಾಡದೆ ಇರುವ ನಾನು ...