ಎಸ್‍ಎಸ್‍ಎಲ್‍ಸಿ ಪೂರಕ ಪರೀಕ್ಷೆ: ಜೂ.21ರಿಂದ ನಿಷೇಧಾಜ್ಞೆ

Source: so news | By MV Bhatkal | Published on 19th June 2019, 8:01 PM | Coastal News | Don't Miss |

ಕಾರವಾರ: ದಿನಾಂಕ 21-06-2019 ರಿಂದ 28-06-2019ರವರೆಗೆ ನಡೆಯಲಿರುವ ಎಸ್‍ಎಸ್‍ಎಲ್‍ಸಿ ಪೂರಕ ಪರೀಕ್ಷೆ ನಿಮಿತ್ತ ಪರೀಕ್ಷಾ ಕೇಂದ್ರಗಳ ಸುತ್ತ 200 ಮೀಟರ್ ವ್ಯಾಪ್ತಿಯಲ್ಲಿ ಕಲಂ 144 ನಿಷೇಧಾಜ್ಞೆ ಜಾರಿಗೊಗೊಳಿಸಿ ಜಿಲ್ಲಾಧಿಕಾರಿ ಡಾ.ಹರೀಶ್‍ಕುಮಾರ್ ಕೆ. ಆದೇಶಿಸಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯ 14 ಕೇಂದ್ರಗಳಲ್ಲಿ 2019ರ ಎಸ್‍ಎಸ್‍ಎಲ್‍ಸಿ ಪೂರಕ ಪರೀಕ್ಷೆ ನಡೆಯಲಿದ್ದು ಪರೀಕ್ಷೆಗಳು ಸುಗಮವಾಗಿ ನಡೆಯುವ ದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗಿದ್ದು ಪರೀಕ್ಷಾ ಕೇಂದ್ರಗಳ ನಿಷೇಧಿತ ಪ್ರದೇಶದಲ್ಲಿ ಯಾವುದೇ ತರಹದ ಅವ್ಯವಹಾರ, ಕಾನೂನು ಬಾಹಿರ ಚಟುವಟಿಕೆ ಅಥವಾ ಶಾಂತತಾಭಂಗ ಆಗದಂತೆ ಸಭೆ, ಸಮಾರಂಭಗಳು ನಡೆಯುತ್ತಿದ್ದರೆ ಧ್ವನಿವರ್ಧಕಗಳನ್ನು ಬಳಸದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಪರೀಕ್ಷಾ ದಿನಾಂಕದಂದು ಪರೀಕ್ಷೆ ನಡೆಯುವ ಸಮಯದಿಂದ ಮುಗಿಯುವವರೆಗೆ ನಿಷೇಧಿಸಲಾಗಿದೆ ಎಂದು ಅವರು ಆದೇಶದಲ್ಲಿ ತಿಳಿಸಿದ್ದಾರೆ.
ಅಲ್ಲದೆ ಪರೀಕ್ಷಾ ಕೇಂದ್ರದ 200 ಮೀಟರ್ ವ್ಯಾಪ್ತಿಯಲ್ಲಿ ಪರೀಕ್ಷಾ ಅವಧಿಯಲ್ಲಿ ಜೆರಾಕ್ಸ್ ಅಂಗಡಿಗಳನ್ನು ಮುಚ್ಚುವಂತೆ ಕ್ರಮ ವಹಿಸಲು ಆದೇಶದಲ್ಲಿ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

Read These Next

32ನೇ ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚರಣೆ ನಿಮಿತ್ತ ರಸ್ತೆ ಸುರಕ್ಷತಾ ನಿಯಮಗಳ ಸಂದೇಶ ಸಾರಿದ ವಾಕ್‍ಥಾನ್

ಬಳ್ಳಾರಿ : 32ನೇ ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚರಣೆ ನಿಮಿತ್ತ ಜಿಲ್ಲಾ ಪೊಲೀಸ್ ವತಿಯಿಂದ ಗುರುವಾರ ವಾಕ್‍ಥಾನ್ ನಡೆಯಿತು.