ಚಾಮರಾಜನಗರ: ಜುಲೈ 3ನೇ ವಾರದಲ್ಲಿ ಎಸೆಸೆಲ್ಸಿ ಪರೀಕ್ಷೆ, ಸೇತುಬಂಧ ಪುನರಾರಂಭ

Source: VB | By S O News | Published on 20th June 2021, 12:29 PM | State News |

ಚಾಮರಾಜನಗರ: ರಾಜ್ಯದಲ್ಲಿ ಎಸೆಸೆಲ್ಸಿ ಪರೀಕ್ಷೆಯನ್ನು ಜುಲೈ ಮೂರನೇ ವಾರದಲ್ಲಿ ನಡೆಸಲಾಗುವುದು. ಪರೀಕ್ಷಾ ವೇಳಾಪಟ್ಟಿಯನ್ನು ಈ ತಿಂಗಳ ಅಂತ್ಯದೊಳಗೆ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಪ್ರಕಟಿಸುತ್ತದೆ ಎಂದು ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ. ಚಾಮರಾಜನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಲ್ಲರ ನಿರೀಕ್ಷೆಯಂತೆ ಎಸೆಸೆಲ್ಸಿ ಪರೀಕ್ಷೆಯನ್ನು ಜುಲೈ ಮೂರನೇ ವಾರದಲ್ಲಿ ನಡೆಸಲಾಗುವುದು. ಮೊದಲ ದಿನ ಸಮಾಜ ವಿಜ್ಞಾನ, ಗಣಿತ, ವಿಜ್ಞಾನ ವಿಷಯಗಳನ್ನು ನಡೆಸಲಾಗುವುದು.

ಎರಡನೇ ದಿನ ಭಾಷಾವಾರು ವಿಷಯಗಳ ಪರೀಕ್ಷೆ ನಡೆಸಲಾಗುವುದು ಈ 

ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಕರು ಕೋವಿಡ್ ಕೆಲಸಗಳಿಗೆ  ಈಗಾಗಲೇ ನಿಯೋಜನೆಗೊಂಡಿದ್ದು, ಆ ಸಂಘದ ಅಧ್ಯಕ್ಷರು ಈಗಾಗಲೇ ಆಯುಕ್ತರಿಗೆ ಪತ್ರ ಬರೆದು ಕೋವಿಡ್ ಕೆಲಸದಿಂದ ಶಿಕ್ಷಕರನ್ನು ಬಿಡುಗಡೆಗೊಳಿಸುವಂತೆ ಮನವಿ ಮಾಡಿದ್ದಾರೆ. ಆದ್ದರಿಂದ ಶೀಘ್ರದಲ್ಲಿ ಶಿಕ್ಷಕರನ್ನು ಮೂಲ ಕೆಲಸಕ್ಕೆ ಹಾಜರಾಗಲು ಅವಕಾಶ ಕಲ್ಪಿಸಲಾಗುವುದು.

ಸುರೇಶ್ ಕುಮಾರ್, ಶಿಕ್ಷಣ ಸಚಿವ

ಸಂದರ್ಭದಲ್ಲಿ ಮಕ್ಕಳಿಗೆ ಇಲಾಖೆಯ ವತಿಯಿಂದ ಉಚಿತವಾಗಿ ಮಾಸ್ಕ್ ವಿತರಿಸಲಾಗುವುದು ಎಂದು ಮಾಹಿತಿ ನೀಡಿದರು. ಈ ಬಾರಿ ಕೊರೋನ ಹಿನ್ನೆಲೆಯಲ್ಲಿ ಪರೀಕ್ಷಾ ಕೇಂದ್ರಗಳನ್ನು ಹೆಚ್ಚು ಮಾಡಲಾಗುವುದು. ಕಳೆದ ವರ್ಷದಂತೆ ಈ ಬಾರಿಯೂ ಚಂದನ ವಾಹಿನಿಯಲ್ಲಿ 'ಸೇತುಬಂಧ' ಕಾರ್ಯಕ್ರಮವನ್ನು ಪುನರಾರಂಭಿಸಲಾಗುವುದು. ಇದಕ್ಕಾಗಿ ದೂರದರ್ಶನದ ಸಂಬಂಧಪಟ್ಟ ಮುಖ್ಯಸ್ಥರ ಜೊತೆ ಚರ್ಚೆ ನಡೆಸಿ ಒಂದು ಅಂತಿಮ ದಿನಾಂಕವನ್ನು ಪ್ರಕಟಿಸಲಾಗುವುದು ಎಂದು ತಿಳಿಸಿದರು.


 

Read These Next

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಗದಗ: ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ ಭೇದಿಸಿದ ಪೊಲೀಸರು; ಸುಪಾರಿ ನೀಡಿದ ಮನೆಮಗ ಸಹಿತ 8 ಮಂದಿಯ ಬಂಧನ

ಮೂರು ದಿನಗಳ ಹಿಂದೆ ಗದಗದಲ್ಲಿ ನಡೆದಿದ್ದ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣವನ್ನು ಭೇದಿಸಿರುವ ಪೊಲೀಸರು ಎಂಟು ಮಂದಿ ...