ಎಸ್.ಎಸ್.ಎಲ್.ಸಿ. ಪರೀಕ್ಷೆ ಜಾಗೃತ ದಳ ಹಾಗೂ ವೀಕ್ಷಕರ ನೇಮಕ

Source: S.O. News Service | By MV Bhatkal | Published on 18th June 2020, 7:22 PM | State News | Don't Miss |

ಧಾರವಾಡ : ಜೂನ್ 25 ರಿಂದ ಜುಲೈ 4 ರ ವರೆಗೆ ಜರುಗುವ ಎಸ್‍ಎಸ್‍ಎಲ್‍ಸಿ ಪರೀಕ್ಷೆಗಳಲ್ಲಿ ನಡೆಯಬಹುದಾದ ಅವ್ಯವಹಾರಗಳನ್ನು ತಡೆಗಟ್ಟಲು ಹಾಗೂ ಪರೀಕ್ಷೆ ಸುಗಮವಾಗಿ ಹಾಗೂ ಸುವ್ಯವಸ್ಥಿತವಾಗಿ ಜರುಗಿಸಲು ಜಿಲ್ಲಾ ಹಾಗೂ ತಾಲೂಕು ಮಟ್ಟದಲ್ಲಿ ಜಾಗೃತ ದಳಗಳನ್ನು ರಚಿಸಲಾಗಿದೆ ಮತ್ತು ವೀಕ್ಷಕರನ್ನು ನೇಮಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾದಂಡಾಧಿಕಾರಿಗಳಾದ ದೀಪಾ ಚೊಳನ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜಿಲ್ಲಾ ಮಟ್ಟದ ಜಾಗೃತ ದಳವನ್ನು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಹಾಗೂ ತಾಲೂಕು ಮಟ್ಟದ ಜಾಗೃತ ದಳವನ್ನು ಉಪವಿಭಾಗಾಧಿಕಾರಿಗಳ ಅಧ್ಯಕ್ಷತೆಯಲ್ಲಿ ರಚಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ. ಇದಲ್ಲದೆ ಜಿಲ್ಲೆಯಲ್ಲಿ 90 ಪರೀಕ್ಷಾ ಕೇಂದ್ರಗಳು ಹಾಗೂ 17 ಉಪಕೇಂದ್ರಗಳು ಇದ್ದು, ಜಿಲ್ಲೆಯ ಎಲ್ಲಾ ತಾಲೂಕಾ ಕೇಂದ್ರಗಳಲ್ಲಿ ಪರೀಕ್ಷಾ ಕೇಂದ್ರಗಳಲ್ಲಿ ಅವ್ಯವಹಾರವನ್ನು ತಡೆಗಟ್ಟಲು ವೀಕ್ಷಕರನ್ನು ಮತ್ತು ವಿಶೇಷ ವೀಕ್ಷಕರನ್ನು ಸಹ ನೇಮಿಸಲಾಗಿದೆ. ಎಲ್ಲಾ ಅಧಿಕಾರಿಗಳು ಅವರಿಗೆ ವಹಿಸಿಕೊಡಲಾದ ತಾಲೂಕಿನ ವ್ಯಾಪ್ತಿಯಲ್ಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷಾ ಕೇಂದ್ರಗಳಿಗೆ ಪ್ರತಿದಿವಸ ಪರೀಕ್ಷಾ ಸಮಯದಲ್ಲಿ ಆಕಸ್ಮಿಕ ಭೇಟಿಗಳನ್ನು ನೀಡಿ ಅವ್ಯವಹಾರಗಳು ನಡೆಯದಂತೆ ನಿಗಾವಹಿಸಿ ಸೂಕ್ತ ಕ್ರಮ ಜರುಗಿಸಬೇಕು. ಸುಗಮ ಮತ್ತು ನ್ಯಾಯಸಮ್ಮತವಾಗಿ ಪರೀಕ್ಷೆಗಳು ನಡೆದ ಬಗ್ಗೆ ನಿಗದಿತ ನಮೂನೆಯಲ್ಲಿ ವರದಿ ಸಲ್ಲಿಸಬೇಕು. ವಿಶೇಷ ವೀಕ್ಷಕರು ತಮಗೆ ನಿಗದಿಪಡಿಸಿದ ಪರೀಕ್ಷಾ ಕೇಂದ್ರಗಳಲ್ಲಿ ಮುಂಚಿತವಾಗಿ ಹಾಜರಿದ್ದು, ಎಲ್ಲಾ ವ್ಯವಸ್ಥೆಗಳನ್ನು ಸರಿಯಾಗಿ ಕೈಗೊಂಡ ಬಗ್ಗೆ ಪರಿಶೀಲಿಸಿ ಖಾತ್ರಿಪಡಿಸಿಕೊಳ್ಳಬೇಕು. ಪರೀಕ್ಷಾ ಸಮಯದ ಅವಧಿಯಲ್ಲಿ ಪರೀಕ್ಷಾ ಕೇಂದ್ರದಲ್ಲಿಯೇ ಹಾಜರಿದ್ದು, ಯಾವುದೇ ಅಕ್ರಮಗಳು ಜರುಗದಂತೆ ಎಚ್ಚರ ವಹಿಸಿ ಪ್ರತಿದಿನ ವರದಿ ನೀಡಬೇಕು ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

Read These Next

ಸಂವಿಧಾನದ ಆಶಯವನ್ನು ಎತ್ತಿಹಿಡಿಯುವಲ್ಲಿ ನ್ಯಾಯಾಂಗದ ಪಾತ್ರ ದೊಡ್ಡದು: ಮುಖ್ಯಮಂತ್ರಿ ಸಿದ್ದರಾಮಯ್ಯ

ಭಾರತದ ನ್ಯಾಯಾಂಗವು ಸಂವಿಧಾನದ ಆಶಯಗಳನ್ನು ಎತ್ತಿ ಹಿಡಿಯುವಲ್ಲಿ ಪ್ರಮುಖ ಪಾತ್ರ ವಹಿಸುತ್ತಾ ಬಂದಿದೆ. ಮೂಲಭೂತ ಹಕ್ಕುಗಳಿಗೆ ...

ವಿದ್ಯಾರ್ಥಿಗಳ ಗೊಂದಲಕ್ಕೆ ತೆರೆ: 5, 8, 9ನೇ ತರಗತಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅಸ್ತು!

ವಿದ್ಯಾರ್ಥಿಗಳ ಗೊಂದಲಕ್ಕೆ ತೆರೆ: 5, 8, 9ನೇ ತರಗತಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅಸ್ತು!

ಕೋಲಾರ ಕ್ಷೇತ್ರಕ್ಕೆ ಏಪ್ರಿಲ್ 26 ಕ್ಕೆ ಮತದಾನ, ಜೂನ್ 4ಕ್ಕೆ ಫಲಿತಾಂಶ, ತಕ್ಷಣದಿಂದಲೆ ಜಿಲ್ಲೆಯಾದ್ಯಂತ ನೀತಿ ಸಂಹಿತೆ ಜಾರಿ

ಲೋಕಸಭಾ ಚುನಾವಣೆಗೆ ಚುನಾವಣಾ ಆಯೋಗ ದಿನಾಂಕ ಘೋಷಣೆ ಮಾಡಿರುವ ಹಿನ್ನೆಲೆಯಲ್ಲಿ ತಕ್ಷಣದಿಂದಲೆ ಜಿಲ್ಲೆಯಾದ್ಯಂತ ಮಾದರಿ ನೀತಿ ಸಂಹಿತೆ ...

ಭಾಷಾ ಜ್ಞಾನದ ಕುರಿತು ಯಾರ ಬಗ್ಗೆಯೂ ಕೇವಲವಾಗಿ ಮಾತನಾಡಿಲ್ಲ: ಜೆ.ಪಿ.ಹೆಗ್ಡೆ ಸ್ವಷ್ಟನೆ

ಉಡುಪಿ: ಈವರೆಗಿನ ರಾಜಕೀಯ ಜೀವನದಲ್ಲಿ ಯಾರ ಮನಸ್ಸನ್ನೂ ನೋಯಿಸುವುದಾಗಲಿ ಅಥವಾ ಕೇವಲವಾಗಿ ಮಾತನಾಡುವುದನ್ನಾಗಲಿ ಮಾಡದೆ ಇರುವ ನಾನು ...